ETV Bharat / state

ಕರ್ತವ್ಯಕ್ಕೆ ಗೈರಾದ ದೈಹಿಕ ಶಿಕ್ಷಕ: ವೇತನ ಕಡಿತ ಮಾಡಿದ್ದ ಶಿಕ್ಷಣ ಇಲಾಖೆ ಕ್ರಮ ಎತ್ತಿ ಹಿಡಿದ ಹೈಕೋರ್ಟ್ - HIGH COURT

ಕರ್ತವ್ಯಕ್ಕೆ ಗೈರು ಹಾಜರಾದ ದೈಹಿಕ ಶಿಕ್ಷಕರಿಗೆ ವೇತನ ಪಾವತಿ ಮಾಡದ ಶಿಕ್ಷಣ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಹೈಕೋರ್ಟ್
ಹೈಕೋರ್ಟ್ (High Court)
author img

By ETV Bharat Karnataka Team

Published : Oct 12, 2024, 9:16 PM IST

ಬೆಂಗಳೂರು: ಪ್ರೌಢ ಶಾಲೆಗೆ ನೇಮಕವಾಗಿದ್ದರೂ ಪ್ರಾಥಮಿಕ ಶಾಲೆಗೆ ನಿಯೋಜಿಸಿದ ಕಾರಣ ನೀಡಿ ಕರ್ತವ್ಯಕ್ಕೆ ಗೈರು ಹಾಜರಾದ ದೈಹಿಕ ಶಿಕ್ಷಕನಿಗೆ ವೇತನ ಪಾವತಿ ಮಾಡದ ಶಿಕ್ಷಣ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಶಿಕ್ಷಣ ಇಲಾಖೆ ಕ್ರಮವನ್ನು ಎತ್ತಿಹಿಡಿದಿದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಕ್ರಮವನ್ನು ದೈಹಿಕ ಶಿಕ್ಷಕ ಎಂ.ಆರ್.ವಾಸುದೇವ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಮತ್ತು ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ, ಈ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಲ್ಲದೆ, ಅರ್ಜಿದಾರರು ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಅಥವಾ ಸಕ್ಷಮ ಪ್ರಾಧಿಕಾರದ ಮುಂದೆ ತನಗೆ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಿದ್ದನ್ನು ರದ್ದು ಕೋರಿ ಮನವಿ ಮಾಡಿಲ್ಲ ಅಥವಾ ಮತ್ತೊಂದು ಹುದ್ದೆಯನ್ನೂ ಕೋರಲಿಲ್ಲ. ಜೊತೆಗೆ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ಸಾಕಷ್ಟು ವಿಳಂಬವಾಗಿ ಕೆಎಟಿ ಮುಂದೆ ಪ್ರಶ್ನಿಸಿದ್ದಾರೆ. ಹೀಗಾಗಿ ಅವರು ಕರ್ತವ್ಯದಲ್ಲಿದ್ದರು ಎಂಬುದಾಗಿ ಪರಿಗಣಿಸಲಾಗುವುದಿಲ್ಲ. ಅವರು ಕೆಲಸಕ್ಕೆ ಗೈರಾದ ಕಾರಣ ಅವರಿಗೆ ವೇತನ ನೀಡದಿರುವ ಇಲಾಖೆಯ ಕ್ರಮ ಸರಿಯಾಗಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು 1999ರ ಜುಲೈ 19ರಂದು ಅಮಾನತುಗೊಂಡಿದ್ದರು. ಬಳಿಕ ಅವರ ಮನವಿಯ ಮೇರೆಗೆ 1999ರ ಡಿಸೆಂಬರ್ 4 ರಂದು ಅಮಾನತು ಆದೇಶವನ್ನು ಇಲಾಖೆ ಹಿಂಪಡೆದು, ಹೊಸಕೋಟೆ ತಾಲೂಕಿನ ಕಂಬಳಿಪುರದ ಹಿರಿಯ ಪ್ರಥಮಿಕ ಶಾಲೆಗೆ ನೇಮಕ ಮಾಡಲಾಗಿತ್ತು. ಆದರೆ, ಪ್ರೌಢ ಶಾಲಾ ಶಿಕ್ಷಕರಾಗಿ ನೇಮಕವಾದವರನ್ನು ಪ್ರೌಢ ಶಾಲೆ ಇಲ್ಲವೇ ಪದವಿಪೂರ್ವ ಕಾಲೇಜಿಗೆ ದೈಹಿಕ ಶಿಕ್ಷಕರನ್ನಾಗಿ ನೇಮಕ ಮಾಡಬೇಕಾಗಿತ್ತು. ಬದಲಾಗಿ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಿದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಅವರ ವೇತನವನ್ನು ಪಾವತಿ ಮಾಡುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದರು.

ಪ್ರಕರಣದ ಹಿನ್ನೆಲೆ: ದೈಹಿಕ ಶಿಕ್ಷಣ ಗ್ರೇಡ್ -2 ಆಗಿ ಕೆಲಸ ಮಾಡುತ್ತಿದ್ದ ಅರ್ಜಿದಾರರನ್ನು 1999ರ ಜುಲೈ 19ರಂದು ದುರ್ನಡತೆ ಮತ್ತು ಕೆಲವು ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು. ಈ ಅಮಾನತು ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಮತ್ತೊಂದು ಪೀಠ, ಸೂಕ್ತ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಲು ಸೂಚನೆ ನೀಡಿ ಅರ್ಜಿ ಇತ್ಯರ್ಥ ಪಡಿಸಿತ್ತು. ಅರ್ಜಿದಾರ ಸಲ್ಲಿಸಿದ್ದ ಮನವಿ ಮೇರೆಗೆ ಅಮಾನತು ಆದೇಶವನ್ನು ಹಿಂತೆಗೆದುಕೊಳ್ಳಲಾಯಿತು ಮತ್ತು ಅರ್ಜಿದಾರರನ್ನು 1999ರ ಡಿಸೆಂಬರ್ 4ರಂದು ಹೊಸಕೋಟೆ ತಾಲೂಕಿನ ಕಂಬಳಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡಲು ನೇಮಿಸಲಾಯಿತು.

ಅರ್ಜಿದಾರರು ಪ್ರೌಢ ಶಾಲೆಯಲ್ಲಿ ಗ್ರೇಡ್ -2 ರ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ಮಾಡಲು ನೇಮಕಗೊಂಡಿದ್ದರೂ, ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಿದ್ದರಿಂದ ಕರ್ತವ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ವೇತನ ಪಾವತಿ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ಅರ್ಜಿದಾರರಿಗೆ ಅರ್ಹವಾದ ಹುದ್ದೆ ನೀಡದ ಹಿನ್ನೆಲೆಯಲ್ಲಿ ಅವರಿಗೆ ವೇತನ ಪಾವತಿ ಮಾಡುವಂತೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಶಿಕ್ಷಣ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅರ್ಜಿಯನ್ನು ಕೆಎಟಿಗೆ ಹಿಂದಿರುಗಿಸಿ ಮರು ಪರಿಶೀಲಿಸಲು ಸೂಚನೆ ನೀಡಿತ್ತು. ಮತ್ತೆ ವಿಚಾರಣೆ ನಡೆಸಿದ್ದ ಕೆಎಟಿ, ಶಿಕ್ಷಣ ಇಲಾಖೆ ಕ್ರಮವನ್ನು ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಭಯೋತ್ಪಾದನೆ ಆರೋಪ: ಪಾಕ್ ಪ್ರಜೆ ಸೇರಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.