ETV Bharat / state

ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರ ಜಿಎಸ್​ಟಿ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್ - GST on auto rides - GST ON AUTO RIDES

ಆಟೋ ಪ್ರಯಾಣಕ್ಕೆ ನಿಗದಿಪಡಿಸಿದ ದರದ ಮೇಲೆ ಶೇ.5 ರಷ್ಟು ಮಾತ್ರ ಜಿಎಸ್​ಟಿ ವಿಧಿಸುವಂತೆ ಸೂಚಿಸಿದ್ದ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರ ಜಿಎಸ್​ಟಿ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರ ಜಿಎಸ್​ಟಿ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್ (ETV Bharat)
author img

By ETV Bharat Karnataka Team

Published : May 27, 2024, 7:58 PM IST

ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಸೇರಿಸುವಂತೆ ಆದೇಶಿಸಿದ್ದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಈ ಆದೇಶದಿಂದ ಮನಸೋಇಚ್ಛೆ ಶುಲ್ಕ ವಿಧಿಸುತ್ತಿದ್ದ ಅಗ್ರಿಗ್ರೇಟರ್​ಗಳಿಗೆ ಕಡಿವಾಣ ಬಿದ್ದಂತಾಗಲಿದೆ.

ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರ ಜಿಎಸ್​ಟಿ ವಿಧಿಸಿ ರಾಜ್ಯ ಸರ್ಕಾರವು 2022ರ ನವೆಂಬರ್ 25ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಓಲಾ ಮತ್ತು ಉಬರ್​ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದವು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್​ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್​ಟಿ ತೆರಿಗೆಯನ್ನು ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ರಾಜ್ಯದ ಎಲ್ಲಾ ಸಾರಿಗೆ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರವು 2022ರ ನವೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಓಲಾ ಮತ್ತು ಉಬರ್‌ ಆಕ್ಷೇಪಿಸಿದ್ದವು. ತಕ್ಷಣದಿಂದ ಬರುವಂತೆ ಈ ಸೇವೆಯ ಸ್ಥಗಿತಗೊಳಿಸಬೇಕು ಮತ್ತು ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ಡಿಕೆಶಿ ವಿರುದ್ಧ ತನಿಖೆಗೆ ನೀಡಿದ್ದ ಸಮ್ಮತಿ ಹಿಂಪಡೆದಿರುವುದರಲ್ಲಿ ಕಾನೂನು ಉಲ್ಲಂಘನೆ ಇಲ್ಲ: ಅರ್ಜಿ ವಜಾಗೊಳಿಸಲು ಮನವಿ - HIGH COURT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.