ETV Bharat / state

ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್ - High Court - HIGH COURT

ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಬೆಲೆ ಅಂಗಡಿಗಳನ್ನು ಪ್ರಾರಂಭಿಸಿರುವ ಕ್ರಮಕ್ಕೆ ಹೈಕೋರ್ಟ್​ ಸಮ್ಮತಿ ಸೂಚಿಸಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 26, 2024, 10:15 PM IST

ಬೆಂಗಳೂರು: ದೇಶದಲ್ಲಿ ಅತಿ ಹೆಚ್ಚು ಜನ ಬಡತನ ರೇಖೆಗಿಂತ ಕೆಳಗಿನವರಿದ್ದಾರೆ. ಆ ಜನರಿಗೆ ನ್ಯಾಯಬೆಲೆಯಲ್ಲಿ ಪಡಿತರ ವಿತರಣೆಗಾಗಿ ಸರ್ಕಾರದಿಂದ ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಬೆಲೆ ಅಂಗಡಿಗಳನ್ನು ಪ್ರಾರಂಭಿಸಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಪ್ರಾರಂಭಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಹಳ್ಳಿಯ ಮಹಾತ್ಮ ಗಾಂಧೀಜಿ ಗ್ರಾಮ ಹಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಲ್ಲದೆ, ದೇಶದ ನಾಗರೀಕರಿಗೆ ನ್ಯಾಯಯುತವಾಗಿ ಅಗತ್ಯ ಸಾಮಗ್ರಿಗಳನ್ನು ಸುಲಭವಾಗಿ ಪೂರೈಕೆ ಮಾಡುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುತ್ತಿವೆ. ಬಡವರ್ಗಕ್ಕೆ ಅನುವಾಗುವ ರೀತಿಯಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆ ಮಾಡಲಾಗಿದೆ ಎಂದಿದೆ.

ಅರ್ಜಿದಾರರು ನ್ಯಾಯಪೀಠಕ್ಕೆ ಸಲ್ಲಿಸಿದ ದಾಖಲೆಗಳ ಅನುಸಾರ ನ್ಯಾಯಮಂಡಳಿಯು 1,061 ಪಡಿತರದಾರರನ್ನು ಹೊಂದಿದೆ. ಸರ್ಕಾರದ ಪರ ವಕೀಲರು 1,200 ಪಡಿತರದಾರರನ್ನು ಹೊಂದಿರುವುದಾಗಿ ಹೇಳುತ್ತಾರೆ. 2016ರ ಎಸೆನ್ಷಿಯಲ್ ಸರಕುಗಳ ಸಾರ್ವಜನಿಕ ವಿತರಣಾ ವ್ಯವಸ್ಥೆ (ನಿಯಂತ್ರಣ ಆದೇಶ) ನಿಯಮ 11ರ ಉಪ-ನಿಯಮ (2) ಅನ್ವಯ ಗ್ರಾಮೀಣ ಪ್ರದೇಶದಲ್ಲಿ ಕನಿಷ್ಠ 500 ಪಡಿತರದಾರರನ್ನು ಹೊಂದಿರಬೇಕು. ಆದರೆ, ಅರ್ಜಿದಾರರು ದ್ವಿಗುಣ ಸಂಖ್ಯೆಯಲ್ಲಿ ಗ್ರಾಹಕರನ್ನು ಹೊಂದಿದ್ದಾರೆ. ಹೀಗಾಗಿ, ಅರ್ಜಿದಾರರಿಗೆ ನ್ಯಾಯಮಂಡಳಿ ಉಳಿಸಿಕೊಳ್ಳಲು ಏಕಸ್ವಾಮ್ಯ ಹಕ್ಕು ನೀಡಲಾಗದು ಎಂದು ಪೀಠ ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ''ಸರ್ಕಾರದಿಂದ 1998ರಲ್ಲಿ ಅರ್ಜಿದಾರರಿಗೆ ನ್ಯಾಯಬೆಲೆ ಅಂಗಡಿ ನಡೆಸಲು ಪರವಾನಗಿ ನೀಡಲಾಯಿತು. ಆದರೆ, ಇದೀಗ ಅರ್ಜಿದಾರರ ಗಮನಕ್ಕೆ ತಾರದೆ ಅದೇ ಗ್ರಾಮದಲ್ಲಿ ನೂತನವಾಗಿ ಮತ್ತೊಂದು ನ್ಯಾಯಬೆಲೆ ಅಂಗಡಿಗೆ ಅಧಿಸೂಚನೆ ಕರೆಯಲಾಗುತ್ತಿದೆ. ಒಂದು ಗ್ರಾಮದಲ್ಲಿ ಈ ರೀತಿ ಮತ್ತೊಂದು ನ್ಯಾಯಬೆಲೆ ಅಂಗಡಿ ಪ್ರಾರಂಭಿಸುವುದು ಅರ್ಜಿದಾರರ ವ್ಯಾಪಾರದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಈ ಬಗ್ಗೆ ಸರ್ಕಾರ ಹೊರಡಿಸಿದ ಅಧಿಸೂಚನೆ ರದ್ದುಗೊಳಿಸಬೇಕು'' ಎಂದು ಮನವಿ ಮಾಡಿದರು.

''ಅಲ್ಲದೆ, 2016ರ ಕರ್ನಾಟಕ ಎಸೆನ್ಷಿಯಲ್ ಸರಕುಗಳ ಸಾರ್ವಜನಿಕ ವಿತರಣಾ ವ್ಯವಸ್ಥೆ (ನಿಯಂತ್ರಣ ಆದೇಶ) ನಿಯಮ 11ರ ಅನುಸಾರ ಗ್ರಾಮಸ್ಥರು ಇನ್ನೊಂದು ನ್ಯಾಯಬೆಲೆ ಅಂಗಡಿ ತೆರೆಯುವಂತೆ ವಿನಂತಿ ಮಾಡದ ಹೊರತು, ಅಸ್ತಿತ್ವದಲ್ಲಿರುವ ಅಧಿಕೃತ ನ್ಯಾಯಬೆಲೆ ಅಂಗಡಿಯಲ್ಲಿ ಲಗತ್ತಿಸಲಾದ ಪಡಿತರ ಚೀಟಿದಾರರನ್ನು ಬೇರೊಂದು ನ್ಯಾಯಬೆಲೆ ಅಂಗಡಿಗೆ ವರ್ಗಾವಣೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಲಾಗಿದೆ''.

''ಅಷ್ಟೆ ಅಲ್ಲದೆ, ಅರ್ಜಿದಾರರ ನ್ಯಾಯಬೆಲೆಯಲ್ಲಿ ಪಡಿತರ ಚೀಟಿದಾರರ ಸಂಖ್ಯೆ 300ಕ್ಕಿಂತ ಕಡಿಮೆಯಾಗುತ್ತದೆ. ವ್ಯಾಪಾರಕ್ಕೆ ಪೆಟ್ಟು ಬೀಳುತ್ತದೆ. ಅಲ್ಲದೆ, ನಿಯಮ 11ರ ಉಪ-ನಿಯಮ (2) ರ ಉಲ್ಲಂಘನೆಯಾಗುತ್ತದೆ. ಜೊತೆಗೆ, ಅಂಬಾ ಭವಾನಿ ಮಹಿಳಾ ಸ್ವಸಹಾಯ ಸಂಘಕ್ಕೆ ಪೂರಕವಾಗುವ ಈ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ನಿಯಮಬಾಹಿರ'' ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, ''ಗ್ರಾಮದಲ್ಲಿ ಮತ್ತೊಂದು ನ್ಯಾಯಬೆಲೆ ಅಂಗಡಿ ಸ್ಥಾಪನೆಗೆ ಕೋರಿ ಗ್ರಾಮಸ್ಥರಿಂದ ಮನವಿ ಸ್ವೀಕರಿಸಲಾಗಿದೆ. ಅರ್ಜಿದಾರರ ನ್ಯಾಯಮಂಡಳಿಯಲ್ಲಿ 1,200ಕ್ಕಿಂತ ಹೆಚ್ಚು ಪಡೀತರಾದರರಿಗೆ ರೇಷನ್ ನೀಡಲಾಗುತ್ತಿದೆ. ಮುಂದೆ ಕನಿಷ್ಠ 500 ಪಡಿತರದಾರರು ಮುಂದುವರೆಯುತ್ತಾರೆ. ಹೀಗಾಗಿ, ನ್ಯಾಯಬೆಲೆ ಅಂಗಡಿಯ ಕಾರ್ಯಾಚರಣೆಯ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ'' ಎಂದರು.

ಇದನ್ನೂ ಓದಿ: ದಾಖಲೆಗಳಲ್ಲಿ ಹೆಸರು ಬದಲಾಯಿಸಿ ಮತ್ತೊಬ್ಬರ ಹೆಸರಿದ್ದ ತಕ್ಷಣ ಆಸ್ತಿ ಮಾಲೀಕತ್ವ ಬದಲಾಗದು: ಹೈಕೋರ್ಟ್ - High Court

ETV Bharat Logo

Copyright © 2025 Ushodaya Enterprises Pvt. Ltd., All Rights Reserved.