ETV Bharat / state

ನಿತ್ಯಾನಂದ ನೆಲೆಸಿದ ಕೈಲಾಸದ ಸಾಂವಿಧಾನಿಕ ನ್ಯಾಯಾಧೀಶರು ಯಾರು? : ಹೈಕೋರ್ಟ್

author img

By ETV Bharat Karnataka Team

Published : Feb 19, 2024, 8:21 PM IST

ನಿತ್ಯಾನಂದ ಸ್ವಾಮಿ ನೆಲೆಸಿರುವ ಕೈಲಾಸ ದೇಶದ ಸಾಂವಿಧಾನಿಕ ನ್ಯಾಯಾಧೀಶರು ಯಾರು? ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ.

high-court-verbal-question-in-nityanand-swami-case
ಹೈಕೋರ್ಟ್

ಬೆಂಗಳೂರು : ಬಿಡದಿಯ ನಿತ್ಯಾನಂದ ಧ್ಯಾನಪೀಠದ ಸಂಸ್ಥಾಪಕ ನಿತ್ಯಾನಂದ ಅವರು ನೆಲೆಸಿರುವ ಕೈಲಾಸ ದೇಶದ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು? ಎಂದು ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ.

ಜಾರ್ಖಂಡ್ ರಾಜ್ಯದ ರಾಂಚಿಯ ದಯಾಶಂಕರ್ ಪಾಲ್ ಅವರು ತಮ್ಮ ಪುತ್ರ ಕೃಷ್ಣಕುಮಾರ್ ಪಾಲ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿದಾರರ ಪರ ವಕೀಲರಿಗೆ ಈ ಪ್ರಶ್ನೆ ಕೇಳಿತು.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎ. ಬೆಳ್ಳಿಯಪ್ಪ, ಬಿಡದಿಯ ನಿತ್ಯಾನಂದ ಪೀಠದಲ್ಲಿ ಕೃಷ್ಣಕುಮಾರ್ ಅವರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ತೃತೀಯ ಪ್ರತಿವಾದಿ ಆಗಿರುವ ಬಿಡದಿಯ ನಿತ್ಯಾನಂದ ಧ್ಯಾನ ಪೀಠದಿಂದ ನಿತ್ಯಾನಂದ ಅವರು ಪ್ರಪಂಚ ತ್ಯಜಿಸಿದ್ದಾರೆ ಎಂದು ಇ-ಮೇಲ್ ಬಂದಿದೆ. ಮಠದವರೂ ಸಹ ನಿತ್ಯಾನಂದ ಎಲ್ಲಿದ್ದಾರೆ ಎನ್ನುವ ಮಾಹಿತಿ ಇಲ್ಲ ಎಂದು ಹೇಳಿದರು. ಇದನ್ನು ಆಲಿಸಿದ ಪೀಠವು ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಇದನ್ನೂ ಓದಿ: ಸಿದ್ದರಾಮಯ್ಯ ಕ್ಷೇತ್ರದ ಇವಿಎಂ, ವಿವಿಪ್ಯಾಟ್​ ಲೋಕಸಭೆ ಚುನಾವಣೆಗೆ ಬಳಸಲು ಹೈಕೋರ್ಟ್ ಅನುಮತಿ

ಈ ವೇಳೆ ಅರ್ಜಿದಾರರ ಪರ ವಕೀಲ ರಾಜಕುಮಾರ್ ಅವರು, ನಿತ್ಯಾನಂದ ಕೈಲಾಸದಲ್ಲಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಿತ್ಯಾನಂದ ಎಲ್ಲಿದ್ದಾರೆ ಎಂಬ ಮಾಹಿತಿ ಕೊಟ್ಟರೆ ನಾನು ಅಲ್ಲಿಗೆ ಪ್ರೊಸಸ್ ಕೊಡುತ್ತೇನೆ. ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು? ಕೈಲಾಸದಲ್ಲಿ ನಿತ್ಯಾನಂದ ಮಹಾಸ್ವಾಮಿ ಇದ್ದಾನೆ ಎಂದು ನೀವು ಹೇಳಿದ ಮೇಲೆ, ಅದರ ಬಗ್ಗೆ ಮಾಹಿತಿ ಕೊಡಿ. ಅದು ನಿಮ್ಮ ಕರ್ತವ್ಯ. ನ್ಯಾಯಾಲಯಕ್ಕೆ ಸಹಾಯ ಮಾಡುವುದು ಎಂದರೆ ನಿತ್ಯಾನಂದನ ಬಗ್ಗೆ ಮಾಹಿತಿ ನೀಡುವುದಾಗಿದೆ. ನಿತ್ಯಾನಂದ ಕೈಲಾಸ ದೇಶದಲ್ಲಿ ಕಿಂಗ್ ಆಫ್ ಕಿಂಗ್ ಎಂದು ಪೀಠ ತಿಳಿಸಿತು.

ಅಲ್ಲದೆ, ಆ ಕುರಿತಂತೆ ಮಾಹಿತಿ ನೀಡಿದರೆ ಕಾನ್ಸುಲೇಟ್ ಮೂಲಕ ನಾನು ಪ್ರೊಸಸ್ ಕೊಡುತ್ತೇನೆ. ಇಲ್ಲವಾದರೆ ಕಮಿಷನರೇಟ್ ಮೂಲಕ ಅಥವಾ ರಾಯಭಾರಿಗಳ ಮೂಲಕ ಪ್ರೊಸಸ್​ಗೆ ನೀಡುತ್ತೇನೆ. ನೀವು ಮಾಹಿತಿ ನೀಡಿದರೆ ನಾನು ಕಾನ್ಸುಲೇಟ್ ಮೂಲಕ ಹೋಗುವೆ. ಎಕ್ಸಿಕ್ಯೂಟ್ ಮಾಡಲು ನಿಮ್ಮನ್ನೇ ಕಳುಹಿಸಲಾಗುವುದು ಎಂದು ಪೀಠ ತಿಳಿಸಿತು. ಅಲ್ಲದೆ, ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಜಯಲಲಿತಾರ ಚಿನ್ನಾಭರಣ ಪಡೆಯಲು 6 ಟ್ರಂಕ್​ಗಳೊಂದಿಗೆ ಬರುವಂತೆ ತಮಿಳುನಾಡು ಸರ್ಕಾರಕ್ಕೆ ಕೋರ್ಟ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.