ETV Bharat / state

ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ : ಸಂಸದ ಯದುವೀರ್ ಒಡೆಯರ್ - MP Yaduveer Wadiyar - MP YADUVEER WADIYAR

ಸಂಸದ ಯದುವೀರ್ ಒಡೆಯರ್ ಪ್ರವಾಸೋದ್ಯಮದ ಕುರಿತು ಮಾತನಾಡಿದರು.

mp-yaduveer-wadiyar
ಸಂಸದ ಯದುವೀರ್ ಒಡೆಯರ್ (ETV Bharat)
author img

By ETV Bharat Karnataka Team

Published : Jun 13, 2024, 5:39 PM IST

ಸಂಸದ ಯದುವೀರ್ ಒಡೆಯರ್ (ETV Bharat)

ಮೈಸೂರು : ಮೈಸೂರು ಪ್ರವಾಸಿಗರ ತಾಣವಾಗಿರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ನೂತನ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೊದಲ ಮಾಧ್ಯಮಗೋಷ್ಟಿಯಲ್ಲಿ ಹೇಳಿಕೆ ನೀಡಿದರು.

ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಮೈಸೂರಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ಸಹಕಾರ ಕೇಳುತ್ತೇನೆ. ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡಿ, ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ ಎಂದರು.

ಮೈಸೂರು ಪ್ರವಾಸಿಗರ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಹಾಗೂ ಮೈಸೂರು ಪಾರಂಪರಿಕ ಕಟ್ಟಡಗಳ ನಗರವಾಗಿದೆ. ಹಾಗಾಗಿ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳನ್ನು ನೆಲಸಮ ಮಾಡುವ ಅವಶ್ಯಕತೆಯಿಲ್ಲ. ಹಾಗೆ ಅದನ್ನು ಅಭಿವೃದ್ಧಿ ಮಾಡಬಹುದು. ಚಾಮುಂಡಿ ಬೆಟ್ಟ ನೈಸರ್ಗಿಕವಾಗಿದೆ. ಈ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ಮೈಸೂರು ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಕೈಗಾರಿಕಾ ಅಭಿವೃದ್ಧಿ ಮಾಡುತ್ತೇನೆ. ಜನರು ನನ್ನನ್ನು ಕುವೆಂಪು ನಗರದ ಕಚೇರಿಯಲ್ಲಿ ಭೇಟಿ ಮಾಡಬಹುದು ಎಂದು ಯದುವೀರ್​ ತಿಳಿಸಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಸ್ಥಗಿತ ವಿಚಾರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿಗಳನ್ನು ಮುಂದುವರಿಸುವುದು ಸೂಕ್ತ. ಆದರೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಬೇಕೋ ಅಥವಾ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ ಎಂದು ನೂತನ ಸಂಸದರು ಹೇಳಿದರು.

ಮತದಾರರಿಗೆ ಕೃತಜ್ಞತೆ ತಿಳಿಸಿದ ಯದುವೀರ್ ಒಡೆಯರ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ 14 ಲಕ್ಷ ಜನ ಮತ ಚಲಾಯಿಸಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಈ ಕ್ಷೇತ್ರದ ಜನ ನನಗೆ ಬೆಂಬಲ ನೀಡಿದ್ದಾರೆ ಹಾಗೂ 3ನೇ ಬಾರಿ ನರೇಂದ್ರ ಮೋದಿಯವರಿಗೆ ಪ್ರಧಾನಿಯಾಗಲು ಅವಕಾಶ ಕಲ್ಪಿಸಿದ್ದಾರೆ. ಇದರ ಜತೆಗೆ ರಾಜ್ಯದ ಐದು ಜನರಿಗೆ ಸಚಿವ ಸ್ಥಾನ ಸಿಕ್ಕಿದ್ದು, ಎಲ್ಲರ ಸಹಕಾರದಿಂದ ಅಭಿವೃದ್ಧಿ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಸಂಸದನಾಗಿ ಕಟ್ಟುನಿಟ್ಟಾಗಿ ಕೆಲಸ ಮಾಡುತ್ತೇನೆ: ಯದುವೀರ್ - Yaduveer Wadiyar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.