ದಾವಣಗೆರೆ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅವರನ್ನು ದಾವಣಗೆರೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಬಳಿಕ ದಾವಣಗೆರೆಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಪೂಜಾರಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದ್ವೇಷ ಭಾಷಣ ಮಾಡಿದ್ದರಿಂದ ದಾವಣಗೆರೆಯಲ್ಲಿ ಗಲಾಟೆ ನಡೆದಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಗಣೇಶ ನಿಮಜ್ಜನ ಮೆರವಣಿಗೆಯಲ್ಲಿ ನಡೆದ ಗಲಾಟೆ ಬಳಿಕ ಸತೀಶ್ ಪೂಜಾರಿ ಅಜ್ಞಾತ ಸ್ಥಳ ಸೇರಿದ್ದರು.
ಗಣೇಶ ನಿಮಜ್ಜನ ಮೆರವಣಿಗೆ ವೇಳೆ ಸೆಪ್ಟಂಬರ್ 19 ರಂದು ದಾವಣಗೆರೆ ನಗರದ ಅರಳಿಮರ ಸರ್ಕಲ್ ದಾಟಿ ಚಾಮರಾಜಪೇಟೆ ಸರ್ಕಲ್ ಬಳಿ ಹೋಗುವಾಗ ಕಲ್ಲು ತೂರಾಟ ನಡೆದಿತ್ತು. ಈ ಪ್ರಕರಣ ಸಂಬಂಧ ಈವರೆಗೆ ಒಟ್ಟು 6 ಪ್ರಕರಣ ದಾಖಲಿಸಲಾಗಿದೆ. ಜೊತೆಗೆ 48 ಜನರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 30 ಆರೋಪಿಗಳು ಅರೆಸ್ಟ್, ದಾವಣಗೆರೆ ಶಾಂತ - Davanagere Stone Pelting Case
ಕಾರವಾರ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಉದ್ಯಮಿ ಕೊಲೆ, ಪತ್ನಿ ಗಂಭೀರ - Businessman Killed