ಬೆಂಗಳೂರು: ನಗರದ ಖಾಸಗಿ ಹೋಟೆಲ್ ಒಂದಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ ಬೆದರಿಕೆಯೊಡ್ಡಿದ್ದಾರೆ.
ತಕ್ಷಣ ಎಚ್ಚೆತ್ತ ಹೋಟೆಲ್ ಸಿಬ್ಬಂದಿ ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಮಾಹಿತಿ ರವಾನಿಸಿದರು. ಗಣ್ಯರು, ಕ್ರಿಕೆಟಿಗರು ಉಳಿದುಕೊಳ್ಳುವ ಹಾಗೂ ಹೆಚ್ಚಾಗಿ ಉದ್ಯಮಿಗಳು ರಾಜಕಾರಣಿಗಳು ಸಭೆ ನಡೆಸುವ ಪ್ರತಿಷ್ಠಿತ ಹೋಟೆಲ್‌ಗೆ ಬೆದರಿಕೆಯೊಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ, ಮೇಲ್ನೋಟಕ್ಕೆ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಖಚಿತವಾಗಿದೆ.
ಇತ್ತೀಚಿನ ಕೆಲ ದಿನಗಳಲ್ಲಿ ನಗರದ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಿಡಿಗೇಡಿಗಳು ರವಾನಿಸಿದ್ದರು. ತನಿಖೆಯ ವೇಳೆ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು.
ಇದನ್ನೂ ಓದಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ - Bomb Threat