ಚಾಮರಾಜನಗರ: ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೇನಕಲ್ ಜಲಪಾತದಲ್ಲಿ ಕಾವೇರಿ ನದಿ ಅಕ್ಷರಶಃ ರುದ್ರ ತಾಂಡವವಾಡುತ್ತಿದ್ದು, ಸಾಗರದಂತೆ ಇಡೀ ಪರಿಸರ ಗೋಚರಿಸುತ್ತಿದೆ.
ನೀರಿನ ಪ್ರಮಾಣ ಹೆಚ್ಚಾಗಿ, ಕಲ್ಲು ಬಂಡೆಗಳ ಮೇಲೆ ಧುಮ್ಮಿಕ್ಕುತ್ತಿದ್ದ ದೃಶ್ಯ ಕಣ್ಮರೆಯಾಗಿದ್ದು ಜಲಪಾತವೇ ಮುಳುಗಡೆಯಾಗಿದೆ.
![ಹೊಗೇನಕಲ್ ಜಲಪಾತ](https://etvbharatimages.akamaized.net/etvbharat/prod-images/28-07-2024/22066922_tnay.jpg)
ಕರ್ನಾಟಕದಂತೆ ತಮಿಳುನಾಡಿನಲ್ಲೂ ಕಾವೇರಿ ಪ್ರವಾಹ ಭೀತಿ ಎದುರಾಗಿದ್ದು ಧರ್ಮಪುರಿ, ಕೃಷ್ಣಗಿರಿ, ಸೇಲಂ, ಈರೋಡ್, ನಾಮಕ್ಕಲ್, ಕರೂರ್, ತಿರುಚಿ, ತಂಜಾವೂರು ಭಾಗಗಳಲ್ಲಿ ಎಚ್ಚರಿಕೆ ವಹಿಸುವಂತೆ ಅಲ್ಲಿನ ಸಿಡಬ್ಲೂಸಿ ಎಂಜಿನಿಯರ್ ಪನ್ನೀರಸೆಲ್ವಂ ಎಚ್ಚರಿಕೆ ನೀಡಿದ್ದಾರೆ.
![ಹೊಗೇನಕಲ್ ಜಲಪಾತ](https://etvbharatimages.akamaized.net/etvbharat/prod-images/28-07-2024/22066922_man.jpg)
ಕೊಳ್ಳೇಗಾಲ ಭಾಗದಲ್ಲಿ ಪ್ರವಾಹ ಭೀತಿ: ಕಾವೇರಿ ಹೊರಹರಿವು ಏರುತ್ತಿದ್ದಂತೆ ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಳೇ ಹಂಪಾಪುರ, ಸರಗೂರು, ಅಗ್ರಹಾರ, ಹಳೇ ಹಂಪಾಪುರ ಸೇರಿದಂತೆ 9 ಊರುಗಳಲ್ಲಿ ಆತಂಕ ಎದುರಾಗಿದ್ದು, ಕಾಳಜಿ ಕೇಂದ್ರಗಳಿಗೆ ಜನರು ಬರುವಂತೆ ಡಿಸಿ ಸೂಚಿಸಿದ್ದಾರೆ. ಜಾನುವಾರುಗಳಿಗೆ ಗೋಶಾಲೆ ತೆರೆಯಲಾಗುತ್ತಿದೆ.
ಇದನ್ನೂ ಓದಿ: ನವೀಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ: ಒಂದೆಡೆ ಮೊಸಳೆ ಮತ್ತೊಂದೆಡೆ ಪ್ರವಾಹ ಆತಂಕ - Navilutheertha Reservoir