ETV Bharat / state

ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆ: ಕರಾವಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ - Holiday for schools and colleges - HOLIDAY FOR SCHOOLS AND COLLEGES

ವ್ಯಾಪಕ ಮಳೆಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಕರಾವಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಕರಾವಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉತ್ತರ ಕನ್ನಡದಲ್ಲಿ ಕರಾವಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (ETV Bharat)
author img

By ETV Bharat Karnataka Team

Published : Aug 1, 2024, 9:09 AM IST

ಕಾರವಾರ: ಉತ್ತರಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಕರಾವಳಿಯ ಎಲ್ಲ ಹಾಗೂ ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕರಾವಳಿ ಹಾಗೂ ಘಟ್ಟದ ಮೇಲ್ಭಾಗದ ಕೆಲ ತಾಲೂಕುಗಳಲ್ಲಿ ತಡರಾತ್ರಿಯಿಂದ ಭಾರಿ ಮಳೆಯಾಗುತ್ತಿರುವ ಕಾರಣ ಕರಾವಳಿಯಲ್ಲಿ ಕೆಲ ತಗ್ಗು ಪ್ರದೇಶಗಳು ಸೇರಿದಂತೆ ಕಾರವಾರ ನಗರದ ಗ್ರೀನ್​ ಸ್ಟ್ರೀಟ್​ ರಸ್ತೆ, ಹೈಚರ್ಚ್​ ಬಳಿ, ಹಬ್ಬುವಾಡ ರಸ್ತೆ, ಪದ್ಮನಾಭನಗರ ಜಲಾವೃತಗೊಂಡಿದೆ.

ಅಲ್ಲದೇ ಅರಗಾ ಚೆಂಡಿಯಾ ಭಾಗದಲ್ಲಿಯೂ ನೀರು ತುಂಬಿಕೊಂಡಿದ್ದು ಮತ್ತೆ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಮಳೆ ಇರುವ ಕಾರಣ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಮೀನುಗಾರಿಕೆ ಇಲಾಖೆಗೆ ತಿಳಿಸಿದೆ.

ಮಳೆ - ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಆಯಾ ತಾಲೂಕು ಆಡಳಿತವನ್ನು ಇಲ್ಲವೇ ಹೆಲ್ಪ್ ಲೈನ್ 1077, 08284-282723, 7483628982. 8867839350, 08284-295959, 08382-229857 ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೋಯಿಡಾ ಈ ಪ್ರದೇಶಗಳ ಶಾಲೆ, ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.

ಇದನ್ನೂ ಓದಿ: ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೆಟ್ ಹೆಸರು ಹೇಗೆ ಬಂತು ನಿಮಗೆ ಗೂತ್ತಾ! - Jog Waterfalls

ETV Bharat Logo

Copyright © 2025 Ushodaya Enterprises Pvt. Ltd., All Rights Reserved.