ETV Bharat / state

ನಾಗಮಂಗಲ ಪಟ್ಟಣದ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ - Nagamangala Communal Tension - NAGAMANGALA COMMUNAL TENSION

ಬುಧವಾರ ರಾತ್ರಿ ಮಂಡ್ಯದ ನಾಗಮಂಗಲದಲ್ಲಿ ನಡೆದ ಕಲ್ಲು ತೂರಾಟದಿಂದಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾಗೃತಾ ಕ್ರಮವಾಗಿ ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೆ.14ರ ಮಧ್ಯರಾತ್ರಿಯವರೆಗೆ ಸೆಕ್ಷನ್​ 144 ಜಾರಿಯಲ್ಲಿರಲಿದೆ.

ಘಟನೆ ಬಗ್ಗೆ ಜಿಲ್ಲಾಧಿಕಾರಿ ಡಾ. ಕುಮಾರ ಮಾಧ್ಯಮ ಪ್ರತಿಕ್ರಿಯೆ
ನಾಗಮಂಗಲ ಉದ್ವಿಗ್ನ: ಜಿಲ್ಲಾಧಿಕಾರಿ ಡಾ. ಕುಮಾರ ಮಾಧ್ಯಮ ಪ್ರತಿಕ್ರಿಯೆ (ETV Bharat)
author img

By ETV Bharat Karnataka Team

Published : Sep 12, 2024, 9:36 AM IST

ಜಿಲ್ಲಾಧಿಕಾರಿ ಡಾ. ಕುಮಾರ ಮಾಧ್ಯಮ ಪ್ರತಿಕ್ರಿಯೆ (ETV Bharat)

ಮಂಡ್ಯ: ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಷ್ಟೇ ಅಲ್ಲದೇ, ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್​ ಜಾರಿ ಮಾಡಲಾಗಿದೆ.

ಪರಿಸ್ಥಿತಿ ತಿಳಿಗೊಳಿಸಲು ಕ್ರಮ-ಜಿಲ್ಲಾಧಿಕಾರಿ: ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, "ನಾಗಮಂಗಲ ಪಟ್ಟಣ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಗಣೇಶ ಮೆರವಣಿಗೆ ಅನ್ಯಕೋಮಿನ ಪ್ರಾರ್ಥನಾ ಕೇಂದ್ರದ ಬಳಿ ತಲುಪಿದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಪ್ರತಿಭಟನೆಗಳು ನಡೆದಿವೆ. ತಕ್ಷಣವೇ ನಾನು ಮತ್ತು ಎಸ್ಪಿ, ಐಜಿಯವರು ಸ್ಥಳಕ್ಕೆ ಬಂದಿದ್ದೇವೆ. ಪರಿಸ್ಥಿತಿ ತಿಳಿಗೊಳಿಸಲು ಎಲ್ಲ ಕ್ರಮ ಕೈಗೊಂಡಿದ್ದೇವೆ. 3 ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಮುಂಜಾಗೃತಾ ಕ್ರಮವಾಗಿ ಸೆಪ್ಟೆಂಬರ್ 14ರ ಮಧ್ಯರಾತ್ರಿ 12 ಗಂಟೆಯವರೆಗೂ ಸೆಕ್ಷನ್​ 144 ಜಾರಿಗೊಳಿಸಿದ್ದೇವೆ" ಎಂದು ತಿಳಿಸಿದರು.

ಠಾಣೆಯೆದುರು ಜಮಾಯಿಸಿದ ಮಹಿಳೆಯರು: ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಹಲವರನ್ನು ನಿನ್ನೆ ರಾತ್ರಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ವಶದಲ್ಲಿರುವ ಯುವಕರ ಸಂಬಂಧಿಕರು, ಪೋಷಕರು ನಾಗಮಂಗಲ ಟೌನ್ ಪೊಲೀಸ್ ಠಾಣೆಯೆದುರು ಜಮಾಯಿಸಿದ್ದಾರೆ. ಬಂಧಿತರಲ್ಲಿ ಹಲವರು ಅಪ್ರಾಪ್ತರಿದ್ದು ತಮ್ಮ ಮಕ್ಕಳನ್ನು ಬಿಟ್ಟು ಕಳುಹಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪೊಲೀಸರು, "ಕಾನೂನಿನಡಿ ತಪ್ಪಿತಸ್ಥ ತಪ್ಪಿತಸ್ಥನೇ. ನಮ್ಮನ್ನು ಕಾನೂನಿನ ಪ್ರಕಾರ ಕೆಲಸ ಮಾಡಲು ಬಿಡಿ" ಎಂದು ತಿಳಿಸಿದರು.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಇಬ್ಬರು ಪೊಲೀಸರಿಗೆ ಗಾಯ - Stone Pelting In Nagamangala

ETV Bharat Logo

Copyright © 2025 Ushodaya Enterprises Pvt. Ltd., All Rights Reserved.