ETV Bharat / state

ತುಮಕೂರಿನಲ್ಲಿ 182 ಡೆಂಗ್ಯೂ ಪ್ರಕರಣ: ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ - Tumkur Dengue Cases - TUMKUR DENGUE CASES

ತುಮಕೂರು ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

DENGUE CASES CONFIRMED  HOME MINISTER INSTRUCTS  OFFICIALS TO TAKE PRECAUTIONS  TUMKUR
ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Jul 8, 2024, 7:02 AM IST

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ (ETV Bharat)

ತುಮಕೂರು: ಜಿಲ್ಲೆಯಲ್ಲಿ ಈವರೆಗೂ 182 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಎಲ್ಲ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆ ಎರಡು ಬಾರಿ ಫಾಗಿಂಗ್, ಚರಂಡಿಗಳ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪತ್ರಕರ್ತರೊಂದಿಗೆ ಅವರು ಮಾಹಿತಿ ಹಂಚಿಕೊಂಡರು.

ಡೆಂಗ್ಯೂ ಪ್ರಕರಣಗಳು ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಹೆಚ್ಚು ವರದಿಯಾಗುತ್ತವೆ. ಮಹಾನಗರ ಪಾಲಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಮತ್ತಿತರ ಇಲಾಖೆಗಳ ಸಹಭಾಗಿತ್ವದಲ್ಲಿ ಈಗಾಗಲೇ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೆ ಸುಮಾರು 5,700 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಸಾವುಗಳು ಸಂಭವಿಸಿವೆ. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ-ಚಿಕುಗುನ್ಯಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈವರೆಗೆ ದಾಖಲಾದ 3,305 ಶಂಕಿತ ಡೆಂಗ್ಯೂ ಪ್ರಕರಣಗಳ ಪೈಕಿ 1,662 ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 182 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ರೋಗ ನಿಯಂತ್ರಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಾಲಿಕೆ, ಆರೋಗ್ಯ ಇಲಾಖೆ ಜಂಟಿಯಾಗಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿವೆ.

ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, 148 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 3 ವೈದ್ಯಕೀಯ ಕಾಲೇಜು ಹಾಗೂ 1 ಸರ್ಕಾರಿ ಸೇರಿದಂತೆ 9 ಖಾಸಗಿ ಪ್ರಯೋಗಾಲಯಗಳಲ್ಲಿ ಡೆಂಗ್ಯೂ ಪರೀಕ್ಷೆ ಮಾಡಿಸಬಹುದು. ಜನರು ಡೆಂಗ್ಯೂ ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಉದಾಸೀನ ತೋರದೇ ರಕ್ತದ ಮಾದರಿಯನ್ನು ಪರೀಕ್ಷೆಗೊಳಪಡಿಸಬೇಕು. ಪರೀಕ್ಷೆಗೆ ಖಾಸಗಿ ಆಸ್ಪತ್ರೆ/ಪ್ರಯೋಗಾಲಯಗಳು 300 ರೂ.ಗಳಿಗಿಂತ ಹೆಚ್ಚಿನ ದರ ಪಡೆದಲ್ಲಿ ಅಂತಹ ಆಸ್ಪತ್ರೆ/ಪ್ರಯೋಗಾಲಯಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.

ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟಿಂಗ್ ಕಿಟ್ ಹಾಗೂ ಔಷಧಗಳ ಕೊರತೆಯಿದ್ದಲ್ಲಿ ಹೊಸದಾಗಿ ಖರೀದಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ದೃಢಪಟ್ಟ 182 ಡೆಂಗ್ಯೂ ಪ್ರಕರಣಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ 9 ರೋಗಿಗಳು ಒಳರೋಗಿಯಾಗಿ ದಾಖಲಾಗಿದ್ದರು. ಈ ಪೈಕಿ ಐಸಿಯುನಲ್ಲಿ 1 ಮಗು ಸೇರಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರನ್ನು ಗುಣಮುಖರಾದ ಮೇಲೆ ಬಿಡುಗಡೆ ಮಾಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲು 20 ಹಾಸಿಗೆಗಳುಳ್ಳ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ.

ಜಿಲ್ಲೆಯಲ್ಲಿ ಡೆಂಗ್ಯೂ ರೋಗದಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಉದಾಸೀನ ಮಾಡದೆ ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು. ಶಾಲಾ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಬೇಕೆಂದರು. ಶಾಲೆಗಳಲ್ಲಿ ವಿದ್ಯಾರ್ಥಿಗಳು ಗೈರು ಹಾಜರಾದರೆ ಶಿಕ್ಷಕರು ಅನುಸರಣೆ ಮಾಡಿ ಜ್ವರ ಕಂಡು ಬಂದರೆ ಚಿಕಿತ್ಸೆ ಕೊಡಿಸುವಂತೆ ಮಕ್ಕಳ ಪಾಲಕರಿಗೆ ಮನವರಿಕೆ ಮಾಡಬೇಕು.

ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಗರ ವ್ಯಾಪ್ತಿಯ 35 ವಾರ್ಡುಗಳ ಪೈಕಿ 6 ವಾರ್ಡ್​ಗಳಲ್ಲಿ ಮಾತ್ರ ಕೇಂದ್ರ ಹಾಗೂ ರಾಜ್ಯದ 50:50 ಅನುಪಾತದ ಅನುದಾನದಡಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಉಳಿದ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಅನುದಾನ ಕಲ್ಪಿಸಲು ಮನವಿ ಮಾಡಲಾಗಿದೆ. ಹಣ ಬಿಡುಗಡೆಯಾದ ನಂತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರಿನ ಪೂರೈಕೆ ಬಗ್ಗೆ ಪ್ರತಿಕ್ರಿಯಿಸಿ, ನಗರದಲ್ಲಿ ಕುಡಿಯಲು ಯೋಗ್ಯವಿರುವ ಕೆರೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಅಮಾನಿಕೆರೆ ನೀರು ಕುಡಿಯಲು ಯೋಗ್ಯವಿಲ್ಲವೆಂದು ದೃಢಪಟ್ಟಿರುವುದರಿಂದ ಹೆಬ್ಬಾಕ, ಮರಳೂರು ಕೆರೆ ಸೇರು ನಗರದ ಸುತ್ತಮುತ್ತಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಕುಡಿಯುವ ನೀರು ಸಂಗ್ರಹಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಾಲಿಗೆ ಆಯುಕ್ತರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ನಕಲಿ ವೈದ್ಯರ ಬಗ್ಗೆ ಪ್ರತಿಕ್ರಿಯಿಸಿ, ಜನರ ಜೀವನದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರನ್ನು ಬೆಳೆಯಲು ಬಿಡಬಾರದು. ಎಷ್ಟೇ ಪ್ರಭಾವಿತನಾಗಿದ್ದರೂ ಮುಲಾಜಿಲ್ಲದೆ ಪೊಲೀಸರಿಗೆ ದೂರು ನೀಡಿ. ಅವರ ವಿರುದ್ಧ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎನ್.ಮಂಜುನಾಥ ಅವರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಬಗ್ಗೆ ಮಾತನಾಡಿ, ಪಾಲಿಕೆಯಿಂದ ನಾಯಿಗಳನ್ನು ಹಿಡಿದು ಬೇರೆ ಕಡೆ ಬಿಡುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ ಕಾನೂನು ಪ್ರಕಾರ ನಾಯಿಗಳ ಸಂಖ್ಯೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡುತ್ತಾ, ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಸಚಿವಾಲಯದಿಂದ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಹಠಾತ್ ಬರುವ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು ಕಂಡುಬಂದಲ್ಲಿ ಅವು ಡೆಂಗ್ಯೂ ಜ್ವರದ ಲಕ್ಷಣಗಳು. ಹೀಗಾಗಿ ಇಂತಹ ಲಕ್ಷಣ ಕಂಡು ಬಂದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಲು ಅರಿವು ಮೂಡಿಸಲಾಗುತ್ತಿದೆ ಎಂದು ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್‌ ಬೇಗ್, ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಪಾಲಿಕೆ ಆರೋಗ್ಯಾಧಿಕಾರಿ ಡಾ.ವೀರೇಶ್ ಕಲ್ಮಟ್, ವಿವಿಧ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: ಝೀಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ: ಆರೋಗ್ಯ ಇಲಾಖೆ ಸಲಹೆ - Zika virus Advisory

ETV Bharat Logo

Copyright © 2024 Ushodaya Enterprises Pvt. Ltd., All Rights Reserved.