ETV Bharat / state

ಹುಬ್ಬಳ್ಳಿ ಯುವತಿ ಕೊಲೆ ಪ್ರಕರಣದಲ್ಲಿ ಲವ್ ಜಿಹಾದ್ ಕಾಣುತ್ತಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ - Hubballi College Girl Murder Case

ಹುಬ್ಬಳ್ಳಿ ಕಾಲೇಜು ಯುವತಿ ಕೊಲೆ ವಿಚಾರದಲ್ಲಿ ಬಿಜೆಪಿಯವರು ಕಾಂಗ್ರೆಸ್ ಪಕ್ಷವನ್ನು ದೂಷಿಸುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದರು.

ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್
author img

By ETV Bharat Karnataka Team

Published : Apr 19, 2024, 4:30 PM IST

Updated : Apr 19, 2024, 5:42 PM IST

ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು/ಬೆಂಗಳೂರು: ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿಯ ಕೊಲೆ ವಿಚಾರದಲ್ಲಿ ಸದ್ಯದ ಮಾಹಿತಿಯಂತೆ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದೂರ ಆಗುವುದಕ್ಕೆ ಪ್ರಯತ್ನಿಸಿದಾಗ ಘಟನೆ ನಡೆದಿದೆ ಎಂಬ ಮಾಹಿತಿ ಇದೆ. ಇದರಲ್ಲಿ ಯಾವುದೇ ಲವ್ ಜಿಹಾದ್ ಕಾಣುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಈ ಕುರಿತು ಇಂದು ತುಮಕೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಬಿಜೆಪಿಯವರು ಸ್ವಾಭಾವಿಕವಾಗಿ ಇಂಥ ವಿಚಾರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ದೂಷಿಸುತ್ತಾರೆ. ಅದು ಅಷ್ಟು ಸಮಂಜಸ ಅಲ್ಲ. ಸಮಾಜದಲ್ಲಿ ನಡೆಯುವುದನ್ನು ನಾವು ಕಾನೂನು ಪ್ರಕಾರವೇ ಕಂಟ್ರೋಲ್ ಮಾಡ್ತೀವಿ, ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡುವುದು ಈ ಚುನಾವಣೆಯ ಸಂದರ್ಭದಲ್ಲಿ ಒಳ್ಳೆಯದಲ್ಲ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಷನ್ ಹಾಕಿ ತನಿಖೆ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಬೆಂಗಳೂರಲ್ಲಿ ನಡೆದ ಘಟನೆಯ ಕುರಿತು ಪ್ರತಿಕ್ರಿಯಿಸಿ, ಶ್ರೀರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗುತ್ತಾರೆ. ಅದಕ್ಕೆ ಇನ್ನೊಬ್ಬರು ಬೇರೆ ಸ್ಲೋಗನ್ ಕೂಗಿದ್ದಾರೆ. ಈ ಘಟನೆ ನಡೆದ ಬಳಿಕ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇಂಥ ಘಟನೆಗಳಲ್ಲಿ ಯಾರನ್ನೂ ರಕ್ಷಣೆ ಮಾಡುವುದಾಗಲೀ, ಓಲೈಸುವುದಾಗಲೀ ನಾವು ಮಾಡುವುದಿಲ್ಲ. ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ನೇಹಾ ಹಿರೇಮಠ ಕೊಲೆ ಪ್ರಕರಣ: "ಎನ್​ಕೌಂಟರ್ ಕಾನೂನು ಬರಲೇಬೇಕು": ಸಂತೋಷ್​ ಲಾಡ್ - Minister Santosh Lad

ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ: ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು, ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿಂದು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗೂ ಹುನ್ನಾರವನ್ನು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

'ಬಿಜೆಪಿ ಒಂದಂಕಿ ದಾಟುವುದಿಲ್ಲ': ಬಿಜೆಪಿ- ದಳದವರ ಮೈತ್ರಿಯನ್ನು ಅವರ ಕಾರ್ಯಕರ್ತರೇ ವಿರೋಧಿಸಿದ್ದಾರೆ. ಉತ್ತರ ಭಾರತದಲ್ಲೂ ಸಾಕಷ್ಟು ಮಂದಿ ಬಿಜೆಪಿ ತೊರೆಯುತ್ತಿದ್ದಾರೆ. ಅವರಿಗೆ 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದ್ದರೆ ಇತರೇ ಪಕ್ಷಗಳ ನಾಯಕರನ್ನೇಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದರು?. ನನಗೆ ಬಂದಿರುವ ಮಾಹಿತಿ ಪ್ರಕಾರ, ಎನ್​​ಡಿಎ ದೇಶದಲ್ಲಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಒಂದಂಕಿ ಸ್ಥಾನಗಳನ್ನು ಪಡೆಯುತ್ತಾರೆ ಎಂದು ತಿರುಗೇಟು ಕೊಟ್ಟರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು: ಪ್ರಲ್ಹಾದ್​ ಜೋಶಿ ಆಗ್ರಹ - Pralhad Joshi

Last Updated : Apr 19, 2024, 5:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.