ETV Bharat / state

ಪ್ರಾಸಿಕ್ಯೂಷನ್ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್​ ಆಗಿದೆ: ಜಿ.ಪರಮೇಶ್ವರ್ - Prosecution against CM - PROSECUTION AGAINST CM

ರಾಜ್ಯಪಾಲರ ಕಚೇರಿಗಳನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಗಳನ್ನು ಅಸ್ಥಿರ ಮಾಡುವ ಪ್ರಯತ್ನ ಮಾಡಿದ್ದಾರೆ. ನಮ್ಮ ರಾಜ್ಯದಲ್ಲೂ ಆ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆರೋಪಿಸಿದರು.

home-minister-g-parameshwar
ಡಾ. ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Aug 18, 2024, 2:17 PM IST

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರುವುದು ನಿಜ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.

ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ರಾಜ್ಯಪಾಲರಿಂದ ಪ್ರಾಸಿಕ್ಯೂಷನ್​ಗೆ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿದೆ. ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ. ಇದನ್ನು ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರೆಸುತ್ತೇವೆ. ಸಂಪುಟ ಸಭೆಯಲ್ಲೂ ನಾವ್ಯಾರೂ ಬಿಜೆಪಿ ಹುನ್ನಾರಕ್ಕೆ ಬಲಿಯಾಗೋದು ಬೇಡ, ಆಡಳಿತ ಮಾಡಿಕೊಂಡು ಹೋಗೋಣ ಅಂತ ತೀರ್ಮಾನಿಸಿದ್ದೇವೆ. ಕಾನೂನು ಸಮರ ಮುಂದುವರೆಸಿಕೊಂಡೇ ಆಡಳಿತ ನಡೆಸಲಾಗುವುದು'' ಎಂದರು.

''ಇಡೀ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯಪಾಲರು ರಾಜಕೀಯ ಕಾರಣಕ್ಕೆ ಇದನ್ನೆಲ್ಲ ಮಾಡುತ್ತಿದ್ದಾರೆ. ರಾಜ್ಯಪಾಲರ ಕಚೇರಿಯನ್ನು ಸಹ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಾವು ಕಾನೂನು ಹಾಗೂ ರಾಜಕೀಯ ಹೋರಾಟ ಮಾಡಲು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಜಿಲ್ಲೆ, ತಾಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬಂದಿದೆ. ಅವರಿಗೆ ರಾಜಕೀಯ ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು. ಅದಕ್ಕಾಗಿ ಕೆಪಿಸಿಸಿ ಅಧ್ಯಕ್ಷರು ರಾಜ್ಯಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದಾರೆ. ನಾಳೆಯಿಂದ ರಾಜ್ಯದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ'' ಎಂದು ತಿಳಿಸಿದರು.

''ಮುಡಾ ತನಿಖೆಯನ್ನು ನ್ಯಾಯಾಲಯವು ಯಾರಿಗೆ ನೀಡುತ್ತದೆಯೋ ಗೊತ್ತಿಲ್ಲ. ಈ ಸಂದರ್ಭದಲ್ಲಿ ಅವರಿಗೆ ಇರುವ ಆಯ್ಕೆ ಲೋಕಾಯುಕ್ತ ಮಾತ್ರ. ಲೋಕಾಯುಕ್ತದಲ್ಲೇ ಅರ್ಜಿದಾರರು ದೂರು ಕೊಟ್ಟಿರುವುದರಿಂದ ತನಿಖೆಯನ್ನೂ ಲೋಕಾಯುಕ್ತಕ್ಕೇ ಕೊಡುವ ಸಾಧ್ಯತೆ ಇದೆ'' ಎಂದು ಮಾಹಿತಿ ನೀಡಿದರು.

ದಾಖಲೆಯಿಲ್ಲದೇ ಪ್ರಾಸಿಕ್ಯೂಷನ್​ಗೆ ಅನುಮತಿ: ''ಪ್ರಾಸಿಕ್ಯೂಷನ್‌ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯ ಸೆಕ್ಷನ್ 17ಎ ಅಡಿ ಯಾರ್ಯಾರಿಗೆ ಹೇಗೆ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಕೇಂದ್ರವೇ ವ್ಯಾಖ್ಯಾನಿಸಿದೆ. ಸಿಎಂಗೆ ಯಾರು, ಸಚಿವರಿಗೆ ಯಾರು ಅನುಮತಿ ಕೇಳಬೇಕು ಅಂತ ಕೇಂದ್ರದ ಮಾರ್ಗಸೂಚಿ ಇದೆ. ಸಿಎಂಗೆ ಡಿಜಿಪಿ ತನಿಖೆಗೆ ಅನುಮತಿ ಕೇಳಬೇಕು ಅಂತ ಇದೆ. ರಾಜ್ಯಪಾಲರು ಇದ್ಯಾವುದನ್ನೂ ಗಣನೆಗೆ ತೆಗೆದುಕೊಂಡಿಲ್ಲ. ಇನ್ನೊಂದು ಕಡೆ, ದಾಖಲೆ ಇಲ್ಲದೇ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ನಮ್ಮ ಸಚಿವ ಸಂಪುಟದ ತೀರ್ಮಾನವನ್ನೂ ತಿರಸ್ಕರಿಸಿದ್ದಾರೆ'' ಎಂದು ತಿಳಿಸಿದರು.

''ಹಲವು ತೀರ್ಪುಗಳನ್ನು ಪ್ರಸ್ತಾಪ ಮಾಡಿ ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳಿಸಿದ್ದೇವೆ. ರಾಜ್ಯಪಾಲರು ಉದ್ದೇಶಪೂರ್ವಕವಾಗಿ ಅನುಮತಿ ಕೊಟ್ಟಿದ್ದಾರೆ ಅಂತ ಆಡುವ ಮಕ್ಕಳಿಗೂ ಗೊತ್ತಾಗಿದೆ. ಕೋರ್ಟಿನಲ್ಲಿ ಇದು ನಿಲ್ಲಲ್ಲ ಅಂತ ಭರವಸೆ ಇದೆ. ನ್ಯಾಯಾಲಯ ಏನು ತೀರ್ಪು ಕೊಡಲಿದೆ ಎಂದು ನೋಡಬೇಕು. ಬಿಜೆಪಿಯವರೂ ಹೋರಾಟ ಮಾಡಲಿ, ಅದು ಅವರ ಹಕ್ಕು.‌ ನಾವೂ ಹೋರಾಟ ಮಾಡುತ್ತೇವೆ, ಇದು ನಮ್ಮ ಹಕ್ಕು. ಸಿಎಂ ರಾಜೀನಾಮೆ ಕೊಡಲ್ಲ'' ಎಂದರು.

''ನಮ್ಮ ಹೋರಾಟವನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಅಂತ ಹೈಕಮಾಂಡ್​ವರು ಚರ್ಚೆ ಮಾಡುತ್ತಾರೆ. ತಮಿಳುನಾಡು ಸಿಎಂ, ಪಶ್ಚಿಮ ಬಂಗಾಳ ಸಿಎಂ ಹಾಗೂ ಕೇರಳ ಸಿಎಂ ಎಲ್ಲರಿಗೂ ಇದೇ ರೀತಿ ಆಗಿದೆ. ಸಿದ್ದರಾಮಯ್ಯರ ಮೂಲಕ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶ ಇದಾಗಿದೆ.‌ ಬಿಜೆಪಿಯು ಹೇಗಾದರೂ ಮಾಡಿ ಈ ಸರ್ಕಾರ ಬೀಳಿಸುವ ಯೋಜನೆ ಹಾಕಿಕೊಂಡಿದೆ'' ಎಂದು ಆರೋಪಿಸಿದರು.

ದಲಿತ ವ್ಯಕ್ತಿ ಹತ್ಯೆ ಪ್ರಕರಣ: ಯಲಬುರ್ಗಾದಲ್ಲಿ ಕ್ಷೌರ ವಿಚಾರಕ್ಕೆ ದಲಿತ ವ್ಯಕ್ತಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುತ್ತ, ''ನಮ್ಮ ಸಮಾಜದಲ್ಲಿ ಇವೆಲ್ಲಾ ಒಂದು ರೀತಿಯ ಪಿಡುಗು. ಸಾವಿರಾರು ವರ್ಷಗಳಿಂದಲೂ ಅದು ನಡೆದುಕೊಂಡು ಬಂದಿದೆ. ಆಧುನಿಕತೆ ಬಂದ ನಂತರ ಬಹಳಷ್ಟು ಬದಲಾವಣೆ ಆಗಿದೆ. ಆದರೂ ಅಲ್ಲೊಂದು, ಇಲ್ಲೊಂದು ಘಟನೆಗಳು ಆಗುತ್ತವೆ. ಇಂದೂ ಜನ ಹೀಗಿದ್ದಾರಾ ಅಂತ ಅನಿಸುತ್ತದೆ. ಕ್ಷೌರ ಮಾಡಿಸಿಕೊಳ್ಳಲು ಹೋದವನನ್ನು ಆತ ದಲಿತ ಅಂತ ಕೊಲೆಯನ್ನೇ ಮಾಡ್ತಾನೆ ಅಂದ್ರೆ..?. ಅಂತಹ ಸಮಾಜದಲ್ಲಿ ನಾವು ಇಲ್ಲ, ಕಾನೂನು ಪ್ರಕಾರ ಇದರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ'' ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ಚುರುಕು ಮುಟ್ಟಿಸುವ ವಿಚಾರವಾಗಿ ಮಾತನಾಡಿ, ''ಕೋರ್ಟ್ ಒಂದು ದಿನಾಂಕ ಕೊಟ್ಟಿದೆ. ಆ ದಿನಾಂಕದಂದು ನಮ್ಮ ಎಜಿ ಹಾಗೂ ಹಿರಿಯ ವಕೀಲರು ಕೋರ್ಟ್​​ಗೆ ಹೋಗುತ್ತಾರೆ. ಬಿಎಸ್​​ವೈ ವಿರುದ್ಧ ಇರುವ ತಡೆಯಾಜ್ಞೆ ತೆರವು ಮಾಡಿಸುವ ಪ್ರಯತ್ನ ಮಾಡಲಿದ್ದಾರೆ'' ಎಂದರು.

ಇದನ್ನೂ ಓದಿ: ಪ್ರಾಸಿಕ್ಯೂಷನ್ ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ: ಡಿ.ಕೆ.ಶಿವಕುಮಾರ್ - PROTEST AGAINST PROSECUTION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.