ETV Bharat / state

ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ ಅದನ್ನು ಹೈಕಮಾಂಡ್​ ನಿಭಾಯಿಸುತ್ತೆ: ಜಿ ಪರಮೇಶ್ವರ್​ - Home Minister G Parameshwar

ಗೃಹ ಸಚಿವ ಜಿ. ಪರಮೇಶ್ವರ್ ಅವರು ಸಿಎಂ ಸ್ಥಾನದ ಆಕಾಂಕ್ಷಿಗಳ ಕುರಿತು ಮಾತನಾಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ ಅದನ್ನ ಹೈಕಮಾಂಡ್​ನವರು ನಿಭಾಯಿಸುತ್ತಾರೆ ಎಂದಿದ್ದಾರೆ.

Home minister G parameshwar
ಗೃಹ ಸಚಿವ ಡಾ ಜಿ ಪರಮೇಶ್ವರ್ (ETV Bharat)
author img

By ETV Bharat Karnataka Team

Published : Sep 2, 2024, 8:44 PM IST

ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿದರು (ETV Bharat)

ತುಮಕೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ ಅದನ್ನು ಹೈಕಮಾಂಡ್​ನವರು ನಿಭಾಯಿಸುತ್ತಾರೆ. ಆ ಸಂದರ್ಭ ಬಂದಾಗ ಮುಖ್ಯಮಂತ್ರಿ ಆಗುವವರು ಒಬ್ಬರೇ ಅಲ್ಲವೇ?. ಆದರೆ ಆ ಪರಿಸ್ಥಿತಿ ಈಗ ಇಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್‌ ಜಾರಕಿಹೊಳಿ ಅವರ ಮನೆಗೆ ಊಟಕ್ಕೆ ಹೋಗಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಊಟಕ್ಕೆ ಹೋಗಿದ್ದೆ. ಜೋಳದ ರೊಟ್ಟಿ ತಿಂದು ಬಂದೆ. ಇಬ್ಬರು ರಾಜಕಾರಣಿಗಳು ಭೇಟಿಯಾದಾಗ ಏನು ಮಾತನಾಡುತ್ತಾರೆ. ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ನಾವು ರಾಜಕೀಯದ ಬಗ್ಗೆಯೇ ಮಾತನಾಡಿದ್ದೇವೆ. ಅದನ್ನೆಲ್ಲಾ ಮಾಧ್ಯಮದವರೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು.

ಸರ್ಕಾರದಲ್ಲಿ ಟೀಕೆ ಟಿಪ್ಪಣಿಗಳನ್ನು ಕೇಳಿದ್ದೇವೆ. ಈಗಾಗಲೇ ನಮಗೆ ಗೊತ್ತಿಲ್ಲದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಗುತ್ತಿಗೆದಾರರಿಂದ ಬಂದಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದೇವೆ. ಹಗರಣಗಳ ಬಗ್ಗೆ ಅಧ್ಯಯನ ನಡೆದು ಮಧ್ಯಂತರ ವರದಿ ಬಂದಿವೆ ಎಂದರು.

ಇದಕ್ಕೂ ಮೊದಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್​ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಹಬ್ಬ ಆಚರಣೆಯ ಕುರಿತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜಾ, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಜಿಲ್ಲಾ ಅರಣ್ಯಾಧಿಕಾರಿ ಅನುಪಮಾ ಅವರು ಹಾಜರಿದ್ದರು.

ಇದನ್ನೂ ಓದಿ : ಸಿಎಂ ಕುರ್ಚಿ ಖಾಲಿಯಿಲ್ಲ, ದೇಶಪಾಂಡೆ ಸಿಎಂ ಸ್ಥಾನಕ್ಕೆ ಆಸೆ ಪಡುವುದು ತಪ್ಪಲ್ಲ: ಡಿ.ಕೆ.ಶಿವಕುಮಾರ್ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.