ETV Bharat / state

ರೇಣುಕಾಸ್ವಾಮಿ‌ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇನೆ : ಗೃಹ ಸಚಿವ ಜಿ. ಪರಮೇಶ್ವರ್ - RENUKASWAMY MURDER CASE - RENUKASWAMY MURDER CASE

ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ಮನೆಗೆ ಬಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಅವರನ್ನ ತನಿಖೆಗೆ ಒಳಪಡಿಸಿದ್ದಾರೆ ಎಂದಿದ್ದಾರೆ.

Home Minister G Parameshwar
ಗೃಹ ಸಚಿವ ಜಿ. ಪರಮೇಶ್ವರ್ (ETV Bharat)
author img

By ETV Bharat Karnataka Team

Published : Jun 18, 2024, 6:34 PM IST

ಗೃಹ ಸಚಿವ ಜಿ. ಪರಮೇಶ್ವರ್ (ETV Bharat)

ಚಿತ್ರದುರ್ಗ : ರೇಣುಕಾಸ್ವಾಮಿ‌ ಹತ್ಯೆ ನಡೆದಿದ್ದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇನೆ. ಅವರ ತಂದೆ ತಾಯಿಗಷ್ಟೇ ಅಲ್ಲದೆ ನಮಗೂ ನೋವಾಗುವ ರೀತಿ ಪ್ರಕರಣ ನಡೆದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಮುಲಾಜಿಲ್ಲದೆ ತನಿಖೆ ನಡೆಸುತ್ತಿದೆ. 17 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ನ್ಯಾಯಯುತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಸರ್ಕಾರಿ ಕೆಲಸ ಕೊಡಿಸುವಂತೆ ಪೋಷಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡುತ್ತೇನೆ ಎಂದು ಹೇಳಿದರು.

ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಕೆಲವರು ಇದರ ಬಗ್ಗೆ ಮಾತನಾಡಿದ್ದನ್ನು ನೋಡಿದ್ದೇನೆ. ರಾಜಕೀಯ ಮಾಡುವುದು ಸಲ್ಲದು. ಎಲ್ಲವನ್ನು ರಾಜಕೀಯ ದೃಷ್ಠಿಕೋನದಿಂದ ನೋಡಬಾರದು. ಕಾನೂನಿದೆ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಸಿಬಿಐಗೆ ವಹಿಸುವುದು ಅಗತ್ಯವಿಲ್ಲ. ಕೃತ್ಯದಲ್ಲಿ‌ ಭಾಗಿಯಾದವರನ್ನು ಗಮನಿಸಿ 24 ರಿಂದ 30 ಗಂಟೆಯಲ್ಲಿ ಅರೆಸ್ಟ್ ಮಾಡಿದ್ದಾರೆ. ನಮ್ಮ‌ ಪೊಲೀಸರು ಉತ್ತಮವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರೂ ಪ್ರಭಾವ ಬೀರಿಲ್ಲ. ಹೇಳಿಕೆ ಕೊಟ್ಟಿರಬಹುದು, ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ: ಇತರ ನಟರ ಪಾತ್ರ ಇದ್ದರೆ ತನಿಖೆ ನಡೆಯುತ್ತೆ: ಸಚಿವ ಜಿ.ಪರಮೇಶ್ವರ್ - G PARAMESHWAR

ETV Bharat Logo

Copyright © 2024 Ushodaya Enterprises Pvt. Ltd., All Rights Reserved.