ETV Bharat / state

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ ಅಂತಾನೇ ನಾವೆಲ್ಲ ಭಾವಿಸಿದ್ದೇವೆ: ಸಚಿವ ಜಿ.ಪರಮೇಶ್ವರ್ - CM SIDDARAMAIAH

ಸಿಎಲ್​ಪಿ ನಾಯಕನ ಆಯ್ಕೆ ವೇಳೆ ಸಿದ್ದರಾಮಯ್ಯ ಅವರಿಗೆ ಎರಡೂವರೆ ವರ್ಷ ಅಧಿಕಾರ ಅಂತೇನೂ ಹೈಕಮಾಂಡ್ ಹೇಳಿರಲಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತಾ ನಾವೆಲ್ಲ ಭಾವಿಸಿದ್ದೆವು ಎಂದು ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಜಿ.ಪರಮೇಶ್ವರ್, Parameshwar, cm Karnataka
ಸಚಿವ ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Feb 13, 2025, 1:51 PM IST

ಬೆಂಗಳೂರು: ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿರ್ತಾರೆ ಅಂತಾನೇ ನಾವೆಲ್ಲ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ದೀರ್ಘಾವಧಿಯ ಸಿಎಂ ಎಂಬ ದಾಖಲೆ ಮಾಡುವ ಸಿದ್ದರಾಮಯ್ಯ ಅವರ ಇಚ್ಛೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಮುಖ್ಯಮಂತ್ರಿಗಳು ದೀರ್ಘಾವಧಿಯ ಸಿಎಂ ಆಗಲೆಂದು ನಾನು ಹಾರೈಸ್ತೇನೆ. ಸಿದ್ದರಾಮಯ್ಯ ದಾಖಲೆ ಮಾಡಲಿ ಅಂತ ನಾನೂ ಹಾರೈಸ್ತೇನೆ. ಅವರು ಈ ಐದು ವರ್ಷ ಆಡಳಿತ ಪೂರ್ಣಗೊಳಿಸಿದರೆ ಸಹಜವಾಗಿ ಅದು ದಾಖಲೆ ಆಗಲಿದೆ. ಶಾಸಕರು ಸಿಎಲ್‌ಪಿ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ರು. ಆ ಸಂದರ್ಭದಲ್ಲಿ ನಮಗೆ ಹೈಕಮಾಂಡ್​ನವ್ರು ಎರಡೂವರೆ ವರ್ಷ ಅಧಿಕಾರ ಅಂತೇನೂ ಹೇಳಿರಲಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ ಅಂತಾನೇ ಭಾವಿಸಿದ್ದೇವೆ ಎಂದರು.

ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ; ಉದಯಗಿರಿ ಗಲಭೆ ಪ್ರಕರಣವಾಗಿ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಹತ್ತು ಆರೋಪಿಗಳ ಬಂಧನ ಆಗಿದೆ. ಸಿಸಿಟಿವಿಯಲ್ಲಿ ಪರಿಶೀಲಿಸಿ ಕಲ್ಲು ಹೊಡೆದವರು ಯಾರು ಅಂತ ಪತ್ತೆ ಹಚ್ಚಿ ಬಂಧಿಸ್ತಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಅಧ್ಯಕ್ಷರ ಬದಲಾವಣೆ ವಿಚಾರ - ನಾನು ಪ್ರತಿಕ್ರಿಯೆ ನೀಡಲ್ಲ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸುಳಿವು ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ತೀರ್ಮಾನ ಏನೇ ಇದ್ರೂ ನಾವು ಒಪ್ಪಿಕೊಳ್ಳುತ್ತೇವೆ. ಎಐಸಿಸಿ ಹೊಸ ಕಚೇರಿ ಉದ್ಘಾಟನೆ ವೇಳೆ ಅವರು ಎಐಸಿಸಿ ಪುನಾರಚನೆ ಆಗಬೇಕು ಅಂದಿದ್ರು. ಆ ಅರ್ಥದಲ್ಲಿ ಅವರು ಹೇಳಿರಬಹುದು. ಕೆಲ ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತೋ ಗೊತ್ತಿಲ್ಲ ಎಂದರು.

’ಅಶೋಕ್​ ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯೋದು ಬೇಡ’: ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಅಶೋಕ್, ಛಲವಾದಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಅಧಿಕಾರಿಗಳ ವಿರುದ್ಧ ದೌರ್ಜನ್ಯ ಆಗಿದ್ರೆ ನಿರ್ದಿಷ್ಟವಾಗಿ ಹೇಳಲಿ. ಎಲ್ಲಿ ಯಾರಿಗೆ ದೌರ್ಜನ್ಯವಾಗಿದೆ‌ ಅಂತ. ಅಶೋಕ್ ಅವರು ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯೋದು ಬೇಡ ಎಂದು ತಿರುಗೇಟು ಕೊಟ್ಟರು.

ಇದನ್ನೂ ಓದಿ: ಬಜೆಟ್ ಮಂಡನೆಯಲ್ಲಿ ದಾಖಲೆ ಸರದಾರ ಸಿದ್ದರಾಮಯ್ಯ: ಸಿಎಂ ಈವರೆಗೆ ಮಂಡಿಸಿದ 15 ಬಜೆಟ್​ಗಳ ಸ್ವಾರಸ್ಯಕರ ಅಂಶಗಳು ಇಲ್ಲಿವೆ!

ಇದನ್ನೂ ಓದಿ: 'ಸ್ವಯಂಕೃತ ಅಪರಾಧದಿಂದ ಸಿದ್ದರಾಮಯ್ಯ ಅಧಿಕಾರದಿಂದ ಕೆಳಕ್ಕೆ, ಹೈಕಮಾಂಡ್‌ ಬೆಂಬಲದಿಂದ ಡಿಕೆಶಿ ಸಿಎಂ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.