ETV Bharat / state

ಸಿಎಂ ನಿವಾಸಕ್ಕೆ ಗೃಹ ಸಚಿವ ಪರಮೇಶ್ವರ್ ದೌಡು: ಪ್ರಜ್ವಲ್ ಕೇಸ್, ಸಿಐಡಿ ರಿಪೋರ್ಟ್ ಕುರಿತು ಚರ್ಚೆ - G Parameshwar

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಭೇಟಿ ನೀಡಿದರು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ ಹಾಗೂ ಸಿಐಡಿ ರಿಪೋರ್ಟ್ ಕುರಿತು ಚರ್ಚಿಸಿದರು.

G Parameshwar  CM Siddaramaiah  sexual assault case  Prajwal Revanna
ಗೃಹ ಸಚಿವ ಪರಮೇಶ್ವರ್ ಹಾಗು ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : May 31, 2024, 1:06 PM IST

ಬೆಂಗಳೂರು: ಎಸ್ಐಟಿಯಿಂದ ತಡರಾತ್ರಿ ಪ್ರಜ್ವಲ್ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮಗ್ರ ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮಗಳು ಹಾಗು ಕಾನೂನು ಪ್ರಕ್ರಿಯೆಗಳ ಕುರಿತು ವಿವರ ನೀಡಿದ್ದಾರೆ. ಇದರ ಜತೆ ವಾಲ್ಮೀಕಿ ನಿಗಮದ ಅಕ್ರಮದ ತನಿಖೆ ಕುರಿತೂ ಸಮಾಲೋಚನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದರು. ಎರಡು ಮಹತ್ವದ ವಿಚಾರಗಳ ಕುರಿತು ಸಿಎಂ ಜೊತೆಗೆ ಅವರು ಚರ್ಚೆ ನಡೆಸಿದರು. ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಮರಳುತ್ತಿದ್ದಂತೆ ತಡ ರಾತ್ರಿ ವಿಮಾನ ನಿಲ್ದಾಣದಲ್ಲೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬಂದಿದ್ದು ಮತ್ತು ನಂತರದ ಘಟನಾವಳಿಗಳ ಕುರಿತಾಗಿ ಸಿಎಂಗೆ ವಿಸ್ತೃತ ಮಾಹಿತಿ ನೀಡಿದರು. ಪ್ರಜ್ವಲ್ ರೇವಣ್ಣ ಬಂಧನದ ಬಳಿಕ ಕಾನೂನು ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿ ಕೈಗೊಂಡಿರುವ ಎಲ್ಲ ಮುನ್ನೆಚ್ಚರಿಕೆ ಕುರಿತು ವಿವರ ನೀಡಿದರು.

ಇದರ ಜೊತೆಗೆ, ಸಚಿವ ನಾಗೇಂದ್ರ ಮೇಲಿನ ಆರೋಪದ ಬಗ್ಗೆಯೂ ಚರ್ಚೆ ನಡೆಸಿದರು. ಹಗರಣ ಆರೋಪ ಸಂಬಂಧ ಸಿಐಡಿ ವರದಿ ಬಗ್ಗೆ ಸಿಎಂ ಜೊತೆ ಪರಮೇಶ್ವರ್ ಸಮಾಲೋಚನೆ ನಡೆಸಿದರು. ಪ್ರಕರಣದ ತನಿಖೆ ನಡೆಸಿತ್ತಿರುವ ಸಿಐಡಿ ಇಂದು (ಶುಕ್ರವಾರ) ಸಂಜೆಯೊಳಗೆ ಗೃಹ ಇಲಾಖೆಗೆ ವರದಿ ನೀಡಲಿರುವ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಿದರು. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೆಎಸ್ ರಿಪೋರ್ಟ್ ಸಿಐಡಿ ವರದಿಯಲ್ಲಿ ನಾಗೇಂದ್ರ ಭಾಗಿಯಾಗಿದ್ದು, ಖಚಿತವಾದರೆ ಸಚಿವರ ರಾಜೀನಾಮೆ ಪಡೆಯಲು ಚಿಂತನೆ ನಡೆಸಲಾಗಿದೆ. ಸಚಿವರ ಭಾಗಿ ಕುರಿತು ವರದಿಯಲ್ಲಿ ಉಲ್ಲೇಖವಾದರೆ ರಾಜೀನಾಮೆ ಪಡೆಯುವ ನಿಲುವು ಸರ್ಕಾರ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇಂದು ಬರುವ ವರದಿಯ ಅನುಸಾರ ಯಾವ ರೀತಿ ಕ್ರಮ ವಹಿಸಬೇಕು ಎನ್ನುವ ಕುರಿತು ಸಿಎಂಗೆ ಪರಮೇಶ್ವರ್ ಚರ್ಚಿಸಿದರು.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ. ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಾಡಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬ್ಯಾಂಕ್ ಎಂಡಿ ಮತ್ತು ಸಿಇಒ ಹಾಗೂ ಎಲ್ಲಾ ನಿರ್ದೇಶಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ. 6 ಜನ ಬ್ಯಾಂಕ್ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಇದೀಗ ಸಚಿವರ ತಲೆದಂಡದ ವಿಚಾರದ ಕುರಿತು ಚಿಂತನೆ ನಡೆಸಲಾಗಿದೆ.

ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಈ ಸಂದರ್ಭದಲ್ಲಿ ಸಚಿವರ ತಲೆದಂಡ ಮಾಡಬೇಕು ಎಂಬ ಆಗ್ರಹಕ್ಕೆ ಪುರಾವೆಗಳು ಬೇಕಲ್ಲವೇ? ಡೆತ್ ನೋಟ್‌ನಲ್ಲಿ ಸಚಿವರು ಮೌಖಿಕ ಆದೇಶ ಕೊಟ್ಟಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ. ನಾನು ಡೆತ್ ನೋಟ್ ನೋಡಿಲ್ಲ, ಅದನ್ನು ಪೊಲೀಸರು ಪರಿಶೀಲನೆ ಮಾಡ್ತಾರೆ. ಡೆತ್ ನೋಟ್ ಸತ್ಯಾಸತ್ಯತೆ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಹಾಗಾಗಿ ಇಂದಿನ ವರದಿಯಲ್ಲಿ ಏನು ಬರಲಿದೆ ಎನ್ನುವ ಆಧಾರದಲ್ಲಿ ಸಚಿವ ನಾಗೇಂದ್ರ ತಲೆದಂಡದ ನಿರ್ಧಾರವಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಬಂಧನ: ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು? - G Parameshwar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.