ಬೆಂಗಳೂರು: ''ರಾಮನಗರ ಜಿಲ್ಲೆ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪರ - ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು ಬ್ರ್ಯಾಂಡ್ ನಡಿ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆಯಿಂದಾಗಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ'' ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸರ್ಕಾರ ನಿರ್ಧಾರವನ್ನು ಸಮರ್ಥಿಸಿಕೊಂಡಿಸಿದ್ದಾರೆ.
''ರಾಮನಗರ ಹೆಸರು ಬದಲಾವಣೆ ಮಾಡುತ್ತಿಲ್ಲ. ಬದಲಾಗಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸಲಾಗುತ್ತಿದೆ. ರಾಮನಗರ ಅಲ್ಲೇ ಇರುತ್ತೆ ಎಲ್ಲಿಯೂ ಹೋಗಲ್ಲ'' ಎಂದರು.
ರಾಮನಗರ ಜಿಲ್ಲೆಯನ್ನು ಹುಟ್ಟುಹಾಕಿದ್ದ ಎಚ್.ಡಿ. ಕುಮಾರಸ್ವಾಮಿ, ಸರ್ಕಾರ ನಿರ್ಧಾರವನ್ನು ವಿರೋಧ ವ್ಯಕ್ತಪಡಿಸಿ, ರಾಮನ ಹೆಸರನ್ನು ತೆಗೆದು ಹಾಕುವುದಕ್ಕೆ ಯಾರಿಂದ ಸಾಧ್ಯವಿಲ್ಲ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ''ರಾಮನ ಹೆಸರು ನಾವು ತೆಗೆಯುತ್ತಿಲ್ಲ. ರಾಮ ಅಲ್ಲೆ ಇರುತ್ತಾರೆ. ರಾಮನಗರನೂ ಅಲ್ಲೇ ಇರಲಿದೆ. ಕುಮಾರಸ್ವಾಮಿಯವರು ಹೇಳಿಕೆ ಕೊಡಲಿದ್ದಾರೆ. ಏನು ಮಾಡುವುದಕ್ಕೆ ಆಗುವುದಿಲ್ಲ. ಇದನ್ನೆಲ್ಲಾ ಸರ್ಕಾರ ಎದುರಿಸಬೇಕು, ಎದುರಿಸುತ್ತೇವೆ'' ಎಂದರು.
''ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕು ಸರ್ಕಾರ ನಿರ್ಧರಿಸಿದೆ. ಇದರಲ್ಲಿ ರಾಜಕೀಯದ ಪ್ರಶ್ನೆಯಿಲ್ಲ. ರಾಮನಗರ ಹೆಸರು ಬದಲಾವಣೆ ಮಾಡುತ್ತಿಲ್ಲ. ಬದಲಾಗಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸಲಾಗುತ್ತಿದೆ. ರಾಮನಗರ ಅಲ್ಲೇ ಇರುತ್ತೆ ಎಲ್ಲಿಯೂ ಹೋಗಲ್ಲ'' ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ ಮಾಡಿದವರು ಸರ್ವನಾಶ ಆಗ್ತಾರೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ - Union Minister H D Kumaraswamy