ETV Bharat / state

ಮೈಸೂರು: ಸುಧಾ ಮೂರ್ತಿ, ಗಿರಿಜಾ ಲೋಕೇಶ್, ಸಾಧುಕೋಕಿಲ ಸೇರಿ 13 ಸಾಧಕರಿಗೆ ಗೌರವ ಡಾಕ್ಟರೇಟ್ - HONORARY DOCTORATE

ಜನವರಿ 18 ರಂದು ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆಯಲಿದೆ.

Girija Lokesh and Dr Sudha Murthy
ಹಿರಿಯ ನಟಿ ಗಿರಿಜಾ ಲೋಕೇಶ್ ಹಾಗೂ ಡಾ ಸುಧಾಮೂರ್ತಿ (ETV Bharat (ಸಂಗ್ರಹ ಚಿತ್ರ))
author img

By ETV Bharat Karnataka Team

Published : Jan 17, 2025, 7:51 AM IST

ಮೈಸೂರು: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 7, 8 ಹಾಗೂ 9ನೇ ವಾರ್ಷಿಕ ಘಟಿಕೋತ್ಸವ ಜ. 18 ರಂದು ನಡೆಯಲಿದ್ದು, 9 ಸಾಧಕರಿಗೆ ಗೌರವ ಡಾಕ್ಟರೇಟ್, 540 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ. ನಾಗೇಶ್ ವಿ ಬೆಟ್ಟಕೋಟೆ ತಿಳಿಸಿದರು.

ಗುರುವಾರ ವಿವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡುವರು. ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ ಘಟಿಕೋತ್ಸವ ಭಾಷಣ ಮಾಡಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕುಲಪತಿ ಪ್ರೊ. ಎನ್. ಕೆ ಲೋಕನಾಥ್ ಮಾತನಾಡಿದರು (ETV Bharat)

9 ಸಾಧಕರಿಗೆ ಗೌರವ ಡಾಕ್ಟರೇಟ್ : ಘಟಿಕೋತ್ಸವದಲ್ಲಿ 9 ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. 2021-22ನೇ ಸಾಲಿನಲ್ಲಿ ರಂಗಭೂಮಿ ಹಾಗೂ ಚಲನಚಿತ್ರ ನಟಿ ಗಿರಿಜಾ ಲೋಕೇಶ್, ಭರತನಾಟ್ಯ ಕಲಾವಿದ ಸತ್ಯನಾರಾಯಣರಾಜು, ವಿದ್ವಾನ್ ಸಿ. ಚೆಲುವರಾಜು, 2022-23ನೇ ಸಾಲಿನಲ್ಲಿ ಭರತನಾಟ್ಯ ಕಲಾವಿದೆ ಸಂಧ್ಯಾ ಪುರೆಚ, ಗಮಕ ವಿದ್ವಾನ್ ಎಂ. ಆರ್ ಸತ್ಯನಾರಾಯಣ, ಪ್ರದರ್ಶಕ ಕಲೆಗಳ ವಿಭಾಗದಿಂದ ಚಲನಚಿತ್ರ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ, 2023-24ನೇ ಸಾಲಿನಲ್ಲಿ ವಿದುಷಿ ವೀಣಾಮೂರ್ತಿ ವಿಜಯ್, ವಿದುಷಿ ಪುಷ್ಪಾ ಶ್ರೀನಿವಾಸನ್ ಹಾಗೂ ರಂಗಕರ್ಮಿ ಸಿ. ಬಸವಲಿಂಗಯ್ಯ ಅವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

540 ವಿದ್ಯಾರ್ಥಿಗಳಿಗೆ ಪದವಿ : ಒಟ್ಟು 14 ಮಂದಿಗೆ ಡಿ.ಲಿಟ್ ಪದವಿ ನೀಡಲಾಗುವುದು. 27 ವಿದ್ಯಾರ್ಥಿಗಳು ಒಟ್ಟು 69 ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮೂರು ವರ್ಷಗಳಲ್ಲಿ ಒಟ್ಟು 540 ಮಂದಿಗೆ ವಿವಿಧ ಪದವಿ ಪ್ರದಾನ ಮಾಡಲಾಗುವುದು. 2021-22ರ ಎಂಪಿವಿ ಕೋರ್ಸ್‌ನಲ್ಲಿ ಮೈಸೂರಿನ ವಿ. ವಿಜಯಶ್ರೀ 9 ಚಿನ್ನದ ಪದಕ ಪಡೆದಿದ್ದಾರೆ. 2022-23ರಲ್ಲಿ ಎಲ್. ಬಿ ಬಿಂದು 6, ಟಿ. ಎ ಕೀರ್ತನಾ 5, 2023-24ನೇ ಸಾಲಿನಲ್ಲಿ ಕೆ. ಆರ್ ಅಶ್ವಿನಿ ಹಾಗೂ ಬಿ. ಆರ್ ಮನೋಜ ತಲಾ 6 ಚಿನ್ನದ ಪದಕ ಪಡೆದಿದ್ದಾರೆ. ಸಿದ್ದಿ ಸಮಾಜದ ರೇಣುಕಾ ಸಿದ್ದಿ ನಾಟಕ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿರುವುದು ವಿಶೇಷ ಎಂದು ತಿಳಿಸಿದರು.

ಬಿಪಿಎ ವಿಭಾಗದಲ್ಲಿ 2021-22ರಲ್ಲಿ ಡಿ. ಎಸ್ ಕಾವೇರಿ 3 ಹಾಗೂ ಎಸ್. ಎ ಅಶ್ವಿನಿ 2, 2022-23ರಲ್ಲಿ ಆರ್. ರಂಜಿನಿ ಶ್ರೀ 6, ಡಿ. ಎನ್ ಇಂದ್ರಕುಮಾರ್ 2, 2023-24 ರಲ್ಲಿ ಪಿ. ಆರ್ ರೂಪಾ 5 ಮತ್ತು ಬಿ. ಆರ್ ಶ್ರೀಹರಿ ಭಟ್ 2 ಚಿನ್ನದ ಪದಕ ಗಳಿಸಿದ್ದಾರೆ ಎಂದರು.

''ಮೈಸೂರು ತಾಲೂಕಿನ ನಾಡನಹಳ್ಳಿ ಬಳಿ ಐದೂವರೆ ಎಕರೆ ಜಾಗದಲ್ಲಿ ವಿವಿಯ ಕ್ಯಾಂಪಸ್ ನಿರ್ಮಾಣ ಮಾಡಲಾಗುವುದು. 10 ಕೋಟಿ ರೂ ವೆಚ್ಚದಲ್ಲಿ ಎರಡು ಹಂತಗಳಲ್ಲಿ ಆಡಳಿತಾತ್ಮಕ ಬ್ಲಾಕ್, ತರಗತಿ ಕೊಠಡಿ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ'' ಎಂದು ಕುಲಪತಿ ಪ್ರೊ. ನಾಗೇಶ್ ವಿ ಬೆಟ್ಟಕೋಟೆ ತಿಳಿಸಿದರು.

ಇದನ್ನೂ ಓದಿ : ರಾಣಿ‌ ಚೆನ್ನಮ್ಮ‌ ವಿವಿ ಘಟಿಕೋತ್ಸವ: ಕೂಲಿಕಾರನ ಮಗಳಿಗೆ ಚಿನ್ನದ ಪದಕ, ತಂದೆ-ತಾಯಿಗೆ ಆನಂದಭಾಷ್ಪ - GOLD MEDAL

ನಾಳೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ: ಮೈಸೂರು ವಿಶ್ವವಿದ್ಯಾಲಯದ 105ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವು ಇದೇ ಜನವರಿ 18 ರಂದು ನಡೆಯಲಿದ್ದು, ಈ ಬಾರಿ ಮೂರು ಹಿರಿಯ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಎನ್. ಕೆ ಲೋಕನಾಥ್ ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ನಡೆಯಲಿದ್ದು, ಈ ಬಾರಿ ಗ್ಲೋಬಲ್ ಸಿಇಒ ಮ್ಯಾನೇಜಿಂಗ್ ಡೈರೆಕ್ಟರ್ ಶಾಹೀನ್ ಮಜೀದ್, ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಂಸದರಾದ ಡಾ. ಎ ಸಿ. ಸಿ. ಷಣ್ಮಗಂ, ಮುಖ್ಯ ಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಡಾ. ಬಾಬು ಕೆ. ವೀರೇಗೌಡ ಇವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ : ಇನ್ಫೋಸಿಸ್ ಪ್ರತಿಷ್ಠಾನ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.‌ಸುಧಾಮೂರ್ತಿಯವರಿಗೆ 2020ರಲ್ಲಿ ನಡೆದ 100ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಅವರು ಸ್ವೀಕರಿಸಿರಲಿಲ್ಲ. ಈ ಬಾರಿಯ ಘಟಿಕೋತ್ಸವದಲ್ಲಿ ಸುಧಾಮೂರ್ತಿಯವರು ಗೌರವ ಡಾಕ್ಟರೇಟ್ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿಯೂ ಮಹಿಳಾ ವಿದ್ಯಾರ್ಥಿಗಳೇ ಮೇಲುಗೈ : ಈ ಬಾರಿಯ ಘಟಿಕೋತ್ಸವದಲ್ಲಿ 31,689 ಅಭ್ಯರ್ಥಿಗಳಿಗೆ ವಿವಿಧ ಪದವಿಗಳು ಪ್ರದಾನ ಮಾಡಲಾಗುವುದು. ಈ ಪೈಕಿ 20,022 ಮಹಿಳೆಯರು, 11,667 ಪುರುಷರಾಗಿದ್ದು, ಈ ಬಾರಿಯೂ ಕೂಡಾ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ವಿವಿಧ ವಿಷಯಗಳಲ್ಲಿ 111 ಅಭ್ಯರ್ಥಿಗಳಿಗೆ ಪಿಹೆಚ್​ಡಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 413 ಪದಕಗಳು ಮತ್ತು 208 ಬಹುಮಾನಗಳು, 216 ಅಭ್ಯರ್ಥಿಗಳಿಗೆ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಹಾಗೆಯೇ 6,300 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ, 25,085 ಅಭ್ಯರ್ಥಿಗಳಿಗೆ ಸ್ನಾತಕ ಪದವಿಗಳನ್ನ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು: ಸಚಿವ ಡಾ.ಎಂ.ಸಿ.ಸುಧಾಕರ್ - MINISTER DR M C SUDHAKAR

ETV Bharat Logo

Copyright © 2025 Ushodaya Enterprises Pvt. Ltd., All Rights Reserved.