ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ ರಾಕಸಕೊಪ್ಪ ಗ್ರಾಮದ ಸವಿತಾ ಅವರ ವಿವಾಹವಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗುವಿದೆ. ಮಾರುತಿ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ನಮ್ಮ ಮಗಳ ಸಾವಿಗೆ ಅಳಿಯ ಮತ್ತು ಅವರ ಮನೆಯವರ ಕಿರುಕುಳವೇ ಕಾರಣ ಎಂದು ಮೃತ ಸವಿತಾ ಅವರು ತವರು ಮನೆಯವರು ದೂರಿದ್ದಾರೆ.
ಸವಿತಾಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಪತಿ ಮಾರುತಿ ಪದೇ ಪದೆ ಸವಿತಾ ಮೇಲೆ ಹಲ್ಲೆ ಮಾಡುತ್ತಿದ್ದ. ಸವಿತಾ ನೇಣು ಹಾಕಿಕೊಂಡಿಲ್ಲ, ಗಂಡನೇ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ದೂರು ನೀಡಿದ್ದಾರೆ.
ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಬೆಳಗಾವಿ ತಹಶೀಲ್ದಾರ್ ಶವ ಪರೀಕ್ಷೆಯನ್ನು ಪರಿಶೀಲಿಸಿದರು.
ಇದನ್ನೂ ಓದಿ: ಬೆಳಗಾವಿ: ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಯುವಕ ಸಾವು