ಮಂಡ್ಯ: ಗೃಹಿಣಿಯೊಬ್ಬರು ಜಿಮ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ದಿವ್ಯ (31) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಗೃಹಿಣಿ. ಮೃತರಿಗೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯಿದ್ದಾರೆ.
ತಾಲೂಕಿನ ಮಾಚಳ್ಳಿ ಗ್ರಾಮದ ಗೋವಿಂದರವರ ಪುತ್ರಿ ದಿವ್ಯ ಅವರನ್ನು ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ದಂಪತಿ ಕೆಸ್ತೂರು ಗ್ರಾಮದಲ್ಲಿ ವೈಭವ್ ಫಿಟ್ನೆಸ್ ಎಂಬ ಜಿಮ್ ತೆರೆದು ಜೀವನ ಸಾಗಿಸುತ್ತಿದ್ದರು.
ಸೋಮವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಜರು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸ್ನೇಹಿತನಿಗೆ ಕೊಡಿಸಿದ್ದ ಸಾಲ ತೀರಿಸಲಾಗದೆ ಮನನೊಂದು ವ್ಯಕ್ತಿ ಆತ್ಮಹತ್ಯೆ