ETV Bharat / state

ಮನೆಯಲ್ಲಿ ಸಿಲಿಂಡರ್ ಗ್ಯಾಸ್ ಸ್ಫೋಟ: ಮೂವರಿಗೆ ಗಂಭೀರ ಗಾಯ - CYLINDER GAS BLAST

ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ, Kims hospital, Hubballi, Cylinder blast, ಸಿಲಿಂಡರ್ ಗ್ಯಾಸ್ ಸ್ಫೋಟ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ (ETV Bharat)
author img

By ETV Bharat Karnataka Team

Published : Feb 25, 2025, 7:57 AM IST

ಹುಬ್ಬಳ್ಳಿ: ಮನೆಯಲ್ಲಿದ್ದ ಸಿಲಿಂಡ‌ರ್ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿ ಸ್ಫೋಟಗೊಂಡ ಪರಿಣಾಮ ರಾಜಸ್ಥಾನ ಮೂಲದ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಗೋಕುಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಬಳಿ ನಡೆದಿದೆ.

ತಾರಿಹಾಳ ತೋಟದ ಮನೆಯೊಂದರಲ್ಲಿ ಅಡುಗೆ ಮಾಡಲು ಹೋದ ಸಂದರ್ಭದಲ್ಲಿ ಏಕಾಏಕಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಪರಿಣಾಮ ಮಲಗಿದ್ದ ಇಬ್ಬರು ಕಾರ್ಮಿಕರು ಹಾಗೂ ಅಡುಗೆ ಮಾಡಲು ಹೋಗಿದ್ದ ಓರ್ವ ಕಾರ್ಮಿಕ ಸೇರಿ ಒಟ್ಟು ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಹುಬ್ಬಳ್ಳಿಯ ಕೆಎಂಸಿ‌ಆರ್​​ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಾಯಾಳುಗಳನ್ನು ರಾಜಸ್ಥಾನ ಮೂಲದ ಸುಭಾಸ್, ಅಶೋಕ್‌, ಮಾಂಗಿಲಾಲ್ ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಓಂ ಸಾಯಿ ಗ್ಯಾಸ್ ಏಜನ್ಸಿಯಲ್ಲಿ ಡಿಲೆವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ.

ಸದ್ಯ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸ್ ಕಮಿಷನ‌ರ್ ಶಶಿಕುಮಾ‌ರ್ ಹಾಗೂ ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ್ ಅವರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ನೀವು ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸದಿದ್ದರೆ ಅಪಾಯ ತಪ್ಪಿದ್ದಲ್ಲ!

ಇದನ್ನೂ ಓದಿ: ಹುಬ್ಬಳ್ಳಿ: ಮನಕಲಕುವಂತಿದೆ ಮೃತ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕುಟುಂಬಸ್ಥರ ಕಥೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.