ETV Bharat / state

ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಸಾವಿನ ಸಂಖ್ಯೆ 4ಕ್ಕೇರಿಕೆ - GAS CYLINDER EXPLOSION

ಹುಬ್ಬಳ್ಳಿಯಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

Lingaraj Beeranura
ಲಿಂಗರಾಜ ಬೀರನೂರ (ETV Bharat)
author img

By ETV Bharat Karnataka Team

Published : 16 hours ago

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಲಿಂಗರಾಜ ಬೀರನೂರ(19) ಎಂಬವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ನಾಲ್ಕು ತಲುಪಿದೆ.

ಕಳೆದ ಭಾನುವಾರ ರಾತ್ರಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದರು. ಇಂದು ಬೆಳಗ್ಗೆ ರಾಜು ಮೂಗೇರ ಎಂಬ ಮಾಲಾಧಾರಿ ಸಾವನ್ನಪ್ಪಿದ್ದಾರೆ. ನಿನ್ನೆ ನಿಜನಿಂಗಪ್ಪ ಬೇಪೂರಿ ಹಾಗೂ ಸಂಜಯ ಸವದತ್ತಿ ಎಂಬಿಬ್ಬರು ಮಾಲಾಧಾರಿಗಳು ಸಾವನ್ನಪ್ಪಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ (ETV Bharat)

ಗಾಯಗೊಂಡ ಐವರಿಗೆ ಕೆಎಂಸಿಆರ್​ಐನಲ್ಲಿ ಚಿಕಿತ್ಸೆ ಮುಂದುವರೆದಿದೆ. ನಾಲ್ವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ. ಒಬ್ಬ ಗಾಯಾಳು ಚೇತರಿಕೆ ಕಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಿಮ್ಸ್​ಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗಾಯಾಳುಗಳನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ. ನುರಿತ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ವಿ. ಆದರೂ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿಗಳು 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹೆಚ್ಚಿನ ಪರಿಹಾರ ಕೊಡಿಸುವುದು ದೊಡ್ಡ ಕೆಲಸವಲ್ಲ. ಅವರನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ. ಆ ಕುಟುಂಬಕ್ಕೆ ಅನುಕೂಲವಾಗುವ ಕೆಲಸ ಮಾಡಲು ಪ್ರಯತ್ನಿಸುತ್ತೇವೆ. ಇನ್ನೂ ಐದಾರು ಜನರ ಪರಿಸ್ಥಿತಿ ಚಿಂತಾಜನಕವಾಗಿದೆ" ಎಂದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು! - TWO AYYAPPA DEVOTEES DIED

ETV Bharat Logo

Copyright © 2024 Ushodaya Enterprises Pvt. Ltd., All Rights Reserved.