ETV Bharat / state

ಹುಬ್ಬಳ್ಳಿ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ - Social Welfare Department - SOCIAL WELFARE DEPARTMENT

ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಸ್ವಯಂಸೇವಾ ಸಂಸ್ಥೆಗಳು/ಸಂಘಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಸಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದ್ದು, ಆಸಕ್ತ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

hubli Social walfare Department call the appliction for SC ST act awareness program
ಹುಬ್ಬಳ್ಳಿ (ETV Bharat)
author img

By ETV Bharat Karnataka Team

Published : Aug 6, 2024, 5:53 PM IST

ಹುಬ್ಬಳ್ಳಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಮತ್ತು ದ್ವೇಷ ಅಪರಾಧ ತಡೆಗಟ್ಟುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 ಹಾಗೂ 2015 ಮತ್ತು ನಿಯಮಗಳು 1995 ಮತ್ತು ಪರಿಷ್ಕೃತ ನಿಯಮಗಳು 2016 ಅನ್ನು ಜಾರಿಗೆ ತರಲಾಗಿದೆ. ಇವುಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಇದಕ್ಕಾಗಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಸಲು ಮುಂದಾಗಿದ್ದು, ಆಸಕ್ತ ಸಂಘ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಚ್ಛಿಸುವ ಸಂಘ-ಸಂಸ್ಥೆಗಳು ಸಮಾಜ ಕಲ್ಯಾಣ ಇಲಾಖೆ ಹುಬ್ಬಳ್ಳಿ ಕಾರ್ಯಾಲಯದಲ್ಲಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದೃಢೀಕೃತ ದಾಖಲೆಗಳೊಂದಿಗೆ ಆಗಸ್ಟ್​ 9ರೊಳಗೆ ಕಚೇರಿಗೆ ಸಲ್ಲಿಸಬೇಕು. ತಾಲೂಕಿನ ಎಲ್ಲ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸ್ವಯಂಸೇವಾ ಸಂಸ್ಥೆಗಳು ಅಥವಾ ಸಂಘಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹುಬ್ಬಳ್ಳಿ, ಮಿನಿ ವಿಧಾನ ಸೌಧ ಹುಬ್ಬಳ್ಳಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 9480843124, 0836-2278066 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಸಿ.ಆರ್.ಅಂಬಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬದುಕಿನ ಮೊದಲ ಹೀರೋ ಪ್ರೀತಿಯ ಅಪ್ಪನಿಗೆ ಸ್ಮಾರಕ ನಿರ್ಮಿಸಿ ಪೂಜಿಸುವ ಪುತ್ರರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.