ETV Bharat / state

ಉತ್ತರ ಕನ್ನಡ: ಗರ್ಭಿಣಿಯರ ದತ್ತು ಯೋಜನೆಗೆ ಅಭೂತಪೂರ್ವ ಯಶಸ್ಸು: ಶೇ.100 ಸುರಕ್ಷಿತ ಹೆರಿಗೆ - Pregnant Women Adoption Scheme - PREGNANT WOMEN ADOPTION SCHEME

ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಠಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೆ ತಂದ ಗರ್ಭಿಣಿಯರ ಆರೋಗ್ಯದ ದತ್ತು ಯೋಜನೆಯು ಭರ್ಜರಿ ಯಶ ಕಂಡಿದೆ.

PREGNANT WOMEN ADOPTION SCHEME
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ (ETV Bharat)
author img

By ETV Bharat Karnataka Team

Published : Jun 14, 2024, 9:25 AM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಿಣಿಯರ ಆರೋಗ್ಯ ಸುರಕ್ಷತೆಗಾಗಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಆಲೋಚನೆಯಲ್ಲಿ ಮೂಡಿಬಂದ, ವಿನೂತನ ಗರ್ಭಿಣಿಯರ ಆರೋಗ್ಯದ ಕಾಳಜಿಯನ್ನು ದತ್ತು ನೀಡುವ ಯೋಜನೆಗೆ ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯೋಜನೆಯಡಿ ಗುರುತಿಸಲಾಗಿದ್ದ ಎಲ್ಲ ಗರ್ಭಿಣಿಯರಿಗೆ ಸುರಕ್ಷಿತವಾಗಿ ಹೆರಿಗೆಯಾಗಿದ್ದು, ಯಾವುದೇ ತಾಯಿ - ಮಗುವಿನ ಮರಣ ಸಂಭವಿಸಿಲ್ಲ.

2023ರ ಸೆಪ್ಟಂಬರ್​ನಲ್ಲಿ ಆರಂಭಿಸಿದ ಈ ಯೋಜನೆಯಡಿ ಆರೋಗ್ಯ ಇಲಾಖೆಯ ಆರ್.ಸಿ.ಹೆಚ್. ತಂತ್ರಾಂಶದಲ್ಲಿ ದಾಖಲಾದ 358 ಗರ್ಭಿಣಿಯರಿಗೆ, ಅವರಿಗೆ ದೊರೆಯಬೇಕಾದ ಆರೋಗ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸಲಾಗಿದೆ. ಸುರಕ್ಷಿತ, ಆರೋಗ್ಯವಂತ ಶಿಶುವಿಗೆ ಜನ್ಮ ನೀಡುವವರೆಗೆ ನಿರಂತರ ಅನುಸರಣೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ತಲಾ ಒಬ್ಬ ಮಹಿಳೆಯ ಯೋಗಕ್ಷೇಮದ ವಿಚಾರಣೆಯ ದತ್ತು ನೀಡಲಾಗಿತ್ತು.

ಈ ಯೋಜನೆಯಡಿ ಗುರುತಿಸಿದವರಲ್ಲಿ ಮೇ 2024ರ ವೇಳೆಗೆ 345 ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಆಗಿದ್ದು, ತಾಯಿ - ಮಗು ಇಬ್ಬರೂ ಸಂಪೂರ್ಣ ಆರೋಗ್ಯವಾಗಿದ್ದಾರೆ. ವಿವಿಧ ಆರೋಗ್ಯ ಸಮಸ್ಯೆಗಳಿಂದ 13 ಮಹಿಳೆಯರಿಗೆ ಗರ್ಭಪಾತವಾಗಿದೆ. ಸುರಕ್ಷಿತ ಹೆರಿಗೆಯಾಗಿರುವ ಮಹಿಳೆಯರಲ್ಲಿ 121 ಮಂದಿಗೆ ಸಿ ಸೆಕ್ಷನ್ ಹೆರಿಗೆಯಾಗಿದ್ದರೆ, 224 ಮಂದಿಗೆ ಸಾಮಾನ್ಯ ಹೆರಿಗೆಯಾಗಿರುವುದು ಗಮನಾರ್ಹವಾಗಿದೆ.

ಸಕಾಲದಲ್ಲಿ ಸೇವೆ: ಸಂಬಂಧಪಟ್ಟ ಅಧಿಕಾರಿಗಳು ತಮಗೆ ದತ್ತು ವಹಿಸಲಾದ ಗರ್ಭಿಣಿಯರಿಗೆ ವಿವಿಧ ಆರೋಗ್ಯ ಸೇವೆಗಳು ಸಕಾಲದಲ್ಲಿ ಸಿಗುತ್ತಿದೆಯೇ ಎಂದು ನಿಯಮಿತವಾಗಿ ದೂರವಾಣಿ ಮುಖಾಂತರ ಸಂಪರ್ಕಿಸಿ ಖಚಿತಪಡಿಸಿಕೊಳ್ಳುತ್ತಿದ್ದರು. ಆರೋಗ್ಯ ಸೇವೆ ಪಡೆಯದೇ ಇದ್ದಲ್ಲಿ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಅಥವಾ ತಾಲೂಕು ವೈದ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದರು. ಈ ಮೂಲಕ ಸಕಾಲದಲ್ಲಿ ಸೇವೆ ಒದಗಿಸಿ ಯೋಜನೆಯು ಸಂಪೂರ್ಣ ಯಶಸ್ವಿಯಾಗುವಂತೆ ಮಾಡಿದ್ದಾರೆ. ಗರ್ಭಿಣಿಯರನ್ನು ಸಂಪರ್ಕಿಸಿದಾಗ ಅಧಿಕಾರಿಗಳು ಕೇಳಬೇಕಾದ ಆರೋಗ್ಯ ಸಂಬಂಧಿತ ವಿಚಾರಣೆಯ ಅಂಶಗಳನ್ನು ಗೂಗಲ್ ಸ್ಪ್ರೆಡ್ ಶೀಟ್‌ನಲ್ಲಿ ನಮೂದಿಸಲಾಗಿತ್ತು. ಕರೆ ಮಾಡಿದ ಬಳಿಕ ಅಧಿಕಾರಿಗಳಿಗೆ ಅದರಲ್ಲಿ ಮಾಹಿತಿಯನ್ನು ಭರ್ತಿ ಮಾಡುವ ಹೊಣೆಗಾರಿಕೆ ನೀಡಲಾಗಿತ್ತು.

ಪ್ರತಿ ಗರ್ಭಿಣಿಯರ ಆರೋಗ್ಯದ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಿದ್ದ ಕಾರಣ, ಅವರು ವಾಸವಾಗಿದ್ದ ಪ್ರದೇಶದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಕೂಡ ವಿಶೇಷ ಕಾಳಜಿ ವಹಿಸಿದ್ದಾರೆ. ನಿಯಮಿತ ತಪಾಸಣೆ, ಆರೋಗ್ಯ ಸಂಬಂಧಿತ ಸಲಹೆ, ಸೂಚನೆಗಳನ್ನು ನೀಡಿ, ಅವುಗಳ ಪಾಲನೆಗೆ ನಿಗಾ ಇರಿಸಿದ್ದರು.

358 ಗರ್ಭಿಣಿಯರು: ಯೋಜನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ 79, ಅಂಕೋಲಾ 24, ಕುಮಟಾ 30, ಹೊನ್ನಾವರ 42, ಭಟ್ಕಳ 21, ಶಿರಸಿ 40, ಸಿದ್ದಾಪುರ 25, ಯಲ್ಲಾಪುರ 20, ಹಳಿಯಾಳ 43, ಮುಂಡಗೋಡು 16 ಹಾಗೂ ಜೋಯಿಡಾ ತಾಲೂಕಿನಲ್ಲಿ 18 ಸೇರಿ ಒಟ್ಟು 358 ಗರ್ಭಿಣಿಯರನ್ನು ಗುರುತಿಸಲಾಗಿತ್ತು. ಅವರ ಯೋಗಕ್ಷೇಮದ ಜವಾಬ್ದಾರಿಯನ್ನು ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳಿಗೆ ದತ್ತು ನೀಡಲಾಗಿತ್ತು.

''ನನ್ನ ಆರೋಗ್ಯದ ಜವಾಬ್ದಾರಿ ವಹಿಸಿದ್ದ ಅಧಿಕಾರಿಗಳು, ಆರಂಭದಿಂದಲೂ ನನಗೆ ಕರೆ ಮಾಡಿ, ಯೋಗಕ್ಷೇಮ ವಿಚಾರಿಸುತ್ತಿದ್ದರು. ನನಗೆ 8ನೇ ತಿಂಗಳಲ್ಲಿ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು, ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಅವರು ಕೂಡಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ, ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ನಂತರ 9ನೇ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗುವುದರಿಂದ, ಹೆರಿಗೆಯಾಗಿ ಮನೆಗೆ ಬರುವವರೆಗೆ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಲು ನಗು-ಮಗು ಆಂಬುಲೆನ್ಸ್ ವ್ಯವಸ್ಥೆಯನ್ನೂ ಸಹ ಮಾಡಿಕೊಟ್ಟರು. - ಶ್ರೀಮತಿ ನೂತನ ಗೌಡ, ದೇವಳಮಕ್ಕಿ, ಜಿಲ್ಲಾ ವಾರ್ತಾಧಿಕಾರಿ ದತ್ತು ಪಡೆದ ಮಹಿಳೆ.

''ಜಿಲ್ಲಾಧಿಕಾರಿಗಳು ನನಗೆ ಪ್ರತಿ ತಿಂಗಳು ಕರೆ ಮಾಡುತ್ತಿದ್ದರು. ಅಂಗನವಾಡಿಯಿಂದ ನಿಯಮಿತವಾಗಿ ಪೌಷ್ಠಿಕ ಆಹಾರ ದೊರೆಯುತ್ತಿದೆಯೇ, ವೈದ್ಯರು ಚೆಕಪ್ ಮಾಡಿಸಲು ಹೋದಾಗ ಸಿಗುತ್ತಾರೆಯೇ, ಎಲ್ಲ ಔಷಧಗಳು ಆಸ್ಪತ್ರೆಯಿಂದ ಉಚಿತವಾಗಿ ದೊರೆಯುತ್ತಿವೆಯೇ ಹಾಗೂ ಏನಾದರೂ ಸಮಸ್ಯೆ ಇದೆಯೇ ಎಂದು ನನ್ನ ಆರೋಗ್ಯದ ಬಗ್ಗೆ ಕಾಳಜಿ ವಿಚಾರಿಸುತ್ತಿದ್ದರು. ಪ್ರಸ್ತುತ ನನಗೆ ಹೆರಿಗೆಯಾಗಿದ್ದು, ನಾನು ಹಾಗೂ ಮಗು ಆರೋಗ್ಯವಾಗಿದ್ದೇವೆ. - ಶ್ರೀಮತಿ ಕೋಮಲ್, ಮಲ್ಲಾಪುರ, ಜಿಲ್ಲಾಧಿಕಾರಿಗಳು ದತ್ತು ಪಡೆದ ಮಹಿಳೆ.

''ಜಿಲ್ಲೆಯಲ್ಲಿನ ಗರ್ಭಿಣಿಯರ ಸುರಕ್ಷಿತ ಆರೋಗ್ಯ ಪರಿಶೀಲನೆಯ ದತ್ತು ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸುವ ಯೋಜನೆಯು ಸಂಪೂರ್ಣ ಯಶಸ್ವಿಯಾಗಿದೆ. ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿದ್ದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಎಲ್ಲಾ ಗರ್ಭಿಣಿ ಮಹಿಳೆಗೆ ಸುರಕ್ಷಿತ ಹೆರಿಗೆಯಾಗಿದೆ. ತಾಯಿ ಮತ್ತು ಮಗು ಯಾವುದೇ ಅಪಾಯಕ್ಕೆ ಒಳಗಾಗದಂತೆ ನೋಡಿಕೊಳ್ಳಲಾಗಿದೆ. ಈ ಯೋಜನೆಯ ಮೂಲಕ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣವನ್ನು ಶೂನ್ಯಕ್ಕೆ ತರುವ ಉದ್ದೇಶ ಮತ್ತು ಯಾವುದೇ ಹಂತದಲ್ಲೂ ಗರ್ಭಿಣಿ ಮಹಿಳೆಯರು ಪ್ರಸವಪೂರ್ವ ಲಿಂಗಪತ್ತೆಗೆ ಒಳಗಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲು ಹಾಗೂ ಭ್ರೂಣ ಹತ್ಯೆ ತಡೆಯಲು ಸಾಧ್ಯವಾಗಿದೆ. ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದುವರೆಸಲಾಗುವುದು. - ಗಂಗೂಬಾಯಿ ಮಾನಕರ, ಜಿಲ್ಲಾಧಿಕಾರಿ.

ಇದನ್ನೂ ಓದಿ: ಇಂದು ಡಾ.ಕಾರ್ಲ್ ಲ್ಯಾಂಡ್ ಸ್ಪೇನರ್ ಜನ್ಮದಿನ: ರಕ್ತದಾನಿಗಳ ದಿನಾಚರಣೆ - Blood Donor Day

ETV Bharat Logo

Copyright © 2024 Ushodaya Enterprises Pvt. Ltd., All Rights Reserved.