ETV Bharat / state

ಮಾನವ-ಆನೆ ಸಂಘರ್ಷ ರಾಜ್ಯವೊಂದರ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆ: ಸಚಿವ ಈಶ್ವರ್ ಖಂಡ್ರೆ - Minister Ishwar Khandre

2023ರ ಗಣತಿ ಪ್ರಕಾರ ರಾಜ್ಯದಲ್ಲಿ 6,395 ಆನೆಗಳಿದ್ದು, ಗಜ ಸಂಖ್ಯೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. 563 ಹುಲಿಗಳನ್ನು ಹೊಂದಿರುವ ಕರ್ನಾಟಕ, ವ್ಯಾಘ್ರಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಇದಕ್ಕನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಆಗದ ಹಿನ್ನೆಲೆಯಲ್ಲಿ ಆನೆಗಳು ನಾಡಿಗೆ ಬಂದು, ಬೆಳೆ ಹಾನಿ, ಜೀವಹಾನಿ ಸಂಭವಿಸುತ್ತಿದೆ ಎಂದು ತಿಳಿಸಿದರು.

Inauguration of International Conference on Human-Elephant Conflict Management
ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ (ETV Bharat)
author img

By ETV Bharat Karnataka Team

Published : Aug 12, 2024, 1:32 PM IST

ಬೆಂಗಳೂರು: "ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ" ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅರಣ್ಯ ಇಲಾಖೆಯು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಈ ಸಮ್ಮೇಳನದ ವಿಷಯವೇ ಒಂದು ಮಹತ್ವದ ಸವಾಲನ್ನು ಪ್ರಚುರಪಡಿಸುತ್ತದೆ" ಎಂದು ಅಭಿಪ್ರಾಯಪಟ್ಟರು.

International Conference on Human-Elephant Conflict Management
ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ (ETV Bharat)

"ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ. ಕರ್ನಾಟಕ ರಾಜ್ಯ ವೈವಿಧ್ಯಮಯ ಜೀವವೈವಿಧ್ಯ, ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿನಿಂದ ಕೂಡಿದೆ. ವಿಶಾಲವಾದ ದಟ್ಟ ಅಡವಿಗಳು, ಪ್ರಾಣಿ ಸಂಕುಲ, ಸಸ್ಯ ಸಂಕುಲ, ಕೀಟ ಸಂಕುಲ ಮತ್ತು ಪಕ್ಷಿ ಸಂಕುಲಕ್ಕೆ ನೆಲೆಯಾಗಿದೆ. ಕರ್ನಾಟಕದಲ್ಲಿ ಸುಮಾರು 43,382 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಅಂದರೆ ನಮ್ಮ ಭೌಗೋಳಿಕ ಭೂಭಾಗದ ಶೇ.22ರಷ್ಟು ಹಸಿರು ಹೊದಿಕೆ ಇದೆ" ಎಂದು ಮಾಹಿತಿ ನೀಡಿದರು.

Inauguration of International Conference on Human-Elephant Conflict Management
ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ (ETV Bharat)

"ರಾಜ್ಯದ ಅರಣ್ಯವನ್ನು ಜೀವನ ಮತ್ತು ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅಸಂಖ್ಯಾತ ಸಮುದಾಯಗಳೂ ಇವೆ. ಕಾಡು ಎಂದರೆ ಕೇವಲ ಮರ, ಗಿಡ, ಪ್ರಾಣಿ, ಪಕ್ಷ ಅಷ್ಟೇ ಅಲ್ಲ. ಕಾಡು ಈ ಭೂ ಗ್ರಹದ ಜೀವನಾಡಿ, ಎಲ್ಲ ಜೀವಜಂತುಗಳ ಉಸಿರು. ನಮಗೆ ಶುದ್ಧ ಗಾಳಿ, ಶುದ್ಧ ನೀರು, ಫಲವತ್ತಾದ ಮಣ್ಣು ಲಭಿಸುವುದೇ ಅರಣ್ಯದಿಂದ. ಅರಣ್ಯಗಳು ನಾನಾ ರೂಪದಲ್ಲಿ ನಮಗೆ ಪ್ರತ್ಯಕ್ಷ ಮತ್ತು ಪರೋಕ್ಷ ಅನುಕೂಲತೆ ಕಲ್ಪಿಸಿವೆ. ಕರ್ನಾಟಕದಲ್ಲಿ, ಈ ನೈಸರ್ಗಿಕ ಸಂಪನ್ಮೂಲಗಳ ನಿರ್ಣಾಯಕ ಮಹತ್ವವನ್ನು ನಾವು ಗುರುತಿಸಿದ್ದೇವೆ ಮತ್ತು ಅವುಗಳ ರಕ್ಷಣೆ ಮತ್ತು ಸಂರಕ್ಷಣೆಗೆ ನಾವು ಬದ್ಧರಾಗಿದ್ದೇವೆ" ಎಂದರು.

ಆನೆ ಸಂಖ್ಯೆಯಲ್ಲಿ ರಾಜ್ಯ ಪ್ರಥಮ: "ಕರ್ನಾಟಕ ಸರ್ಕಾರ ಅರಣ್ಯದಲ್ಲಿ ಕಳ್ಳಬೇಟೆ ನಿಗ್ರಹಕ್ಕೆ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವನ್ಯಮೃಗಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2023ರ ಆನೆ ಗಣತಿಯ ಪ್ರಕಾರ ರಾಜ್ಯದಲ್ಲಿ 6,395 ಆನೆಗಳಿದ್ದು, ಗಜ ಸಂಖ್ಯೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ 563 ಹುಲಿ ಹೊಂದಿರುವ ಕರ್ನಾಟಕ, ವ್ಯಾಘ್ರಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಇದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಆಗದ ಹಿನ್ನೆಲೆಯಲ್ಲಿ ಆನೆಗಳು ನಾಡಿಗೆ ಬರುತ್ತಿದ್ದು, ಬೆಳೆ ಹಾನಿ, ಜೀವಹಾನಿ ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಆನೆ ಮತ್ತು ಮಾನವ ಸಂಘರ್ಷ ತಗ್ಗಿಸಲು ಈ ಸಮ್ಮೇಳನ ಬೆಳಕು ಚೆಲ್ಲಲಿದೆ ಎಂಬ ವಿಶ್ವಾಸ ನನಗಿದೆ" ಎಂದು ತಿಳಿಸಿದರು.

"ರಾಜ್ಯ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳಿಂದ ಆನೆ ದಾಳಿಯಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಆಗದಂತೆ ನಿಯಂತ್ರಿಸಲಾಗುತ್ತಿದೆ. ಆದಾಗ್ಯೂ ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 30 ಜನರು ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿದ್ದಾರೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 25 ಜನರು ಆನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ. ಪ್ರತಿಯೊಂದು ಜೀವವೂ ಅಮೂಲ್ಯ. ಈ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ಚಿಂತನ ಮಂಥನ ನಡೆಯಲಿದ್ದು, ಅತ್ಯುತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗಲಿ" ಎಂದು ಆಶಿಸಿದರು.

ಆದಿವಾಸಿಗಳ ಕೊಡುಗೆ ಅಪಾರ: "ಮಾನವ-ವನ್ಯಜೀವಿ ಸಂಘರ್ಷದಲ್ಲಿ, ಮಾನವ-ಆನೆ ಸಂಘರ್ಷವೇ ದೊಡ್ಡ ಸವಾಲು. ಹೆಚ್ಚುತ್ತಿರುವ ಮಾನವ ಜನಸಂಖ್ಯೆ, ಕಾಡಂಚಿನವರೆಗೆ ವಿಸ್ತರಿಸುತ್ತಿರುವ ಕೃಷಿ ಚಟುವಟಿಕೆಗಳು ಮತ್ತು ವಸತಿ ಬಡಾವಣೆ ನಿರ್ಮಾಣ ಮಾನವ-ಆನೆ ಸಂಘರ್ಷ ಹೆಚ್ಚಳಕ್ಕೆ ಕಾರಣವಾಗಿದೆ. ನಮ್ಮ ಪೂರ್ವಿಕರು ಕಾಡಿನೊಂದಿಗೆ ಮತ್ತು ವನ್ಯಜೀವಿಗಳೊಂದಿಗೆ ಸಹಬಾಳ್ವೆ ಮಾಡುವುದನ್ನು ಕಲಿತಿದ್ದರು. ಇಂದಿಗೂ ಕಾಡಿನಲ್ಲೇ ವಾಸಿಸುವ ಆದಿವಾಸಿಗಳು ವನ್ಯಜೀವಿ ದಾಳಿಯಿಂದ ಮೃತಪಡುವುದು ಅಪರೂಪದಲ್ಲೇ ಅಪರೂಪ. ಆದರೆ ನಗರ ವಾಸಿಗಳಾದ ನಾವು ಈಗ ಆಧುನಿಕ ಯುಗದಲ್ಲಿ ಆ ಸಹಬಾಳ್ವೆಯ ಸಂವೇದನೆ ಕಳೆದುಕೊಳ್ಳುತ್ತಿದ್ದೇವೆ." ಎಂದು ಆತಂಕ ವ್ಯಕ್ತಪಡಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸುವುದು ನಮ್ಮ ಆದ್ಯತೆ: "ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆಯನ್ನು ಪರಿಹರಿಸುವುದು ನಮ್ಮ ಮೊದಲ ಆದ್ಯತೆ. ಜನರ ಮತ್ತು ವನ್ಯಜೀವಿಗಳ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಖಾತ್ರಿಪಡಿಸಲು ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ. ತಂತ್ರಜ್ಞಾನದ ಅಳವಡಿಕೆ ಮತ್ತು ಸಮುದಾಯ-ಚಾಲಿತ ಉಪಕ್ರಮಗಳೊಂದಿಗೆ ಕರ್ನಾಟಕ ರಾಜ್ಯವು ಈ ಸವಾಲನ್ನು ಎದುರಿಸುವಲ್ಲಿ ಮುಂಚೂಣಿಯಲ್ಲಿದೆ" ಎಂದರು.

"ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಗೆ ಮುಖ್ಯಮಂತ್ರಿಯವರು ಹೆಚ್ಚಿನ ಆಸಕ್ತಿ ತಳೆದಿದ್ದಾರೆ. 2023-24 ಸಾಲಿನಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ 100 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿದ್ದರು. ಇಂದು ಇಡೀ ಜಗತ್ತು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲು ಎದುರಿಸುತ್ತಿದೆ. ನಾವು ಹಸಿರು ಹೊದಿಕೆ ಹೆಚ್ಚಳ ಮಾಡುವ ಮೂಲಕ ಮಾತ್ರ ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಹೀಗಾಗಿ ನಮ್ಮ ಸರ್ಕಾರ 2023-24ರ ಸಾಲಿನಲ್ಲಿ 5 ಕೋಟಿ ಸಸಿ ನೆಟ್ಟು ಬೆಳೆಸುವ ಸಂಕಲ್ಪ ಮಾಡಿತು. ನಿಮಗೆಲ್ಲ ಆಶ್ಚರ್ಯ ಆಗಬಹುದು ನಾವು 5 ಕೋಟಿ 48 ಲಕ್ಷ ಸಸಿ ನೆಟ್ಟು ಗುರಿ ಮೀರಿದ ಸಾಧನೆ ಮಾಡಿದ್ದೇವೆ. ಜೊತೆಗೆ ಈ ರೀತಿ ನೆಡಲಾದ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂದು ತಿಳಿಯಲು ಜಿಯೋ ಟ್ಯಾಗ್ ಮಾಡಿಸಿ ಆಡಿಟ್ ಕೂಡ ಮಾಡುತ್ತಿದ್ದೇವೆ" ಎಂದು ವಿವರಿಸಿದರು.

ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಕೇರಳ, ತಮಿಳುನಾಡು ಮತ್ತು ಒಡಿಶಾದ ಅರಣ್ಯ ಸಚಿವರು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಹೆಚ್​ಎಂಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಸಚಿವ ಈಶ್ವರ ಖಂಡ್ರೆ ಸೂಚನೆ - Forest Land Reclaim

ETV Bharat Logo

Copyright © 2024 Ushodaya Enterprises Pvt. Ltd., All Rights Reserved.