ETV Bharat / state

ಬೆಂಗಳೂರು: ಪತ್ನಿ ಕೊಲೆ ಮಾಡಿ ಪೊಲೀಸರಿಗೆ ದೂರು ನೀಡಿದ್ದ ಆರೋಪಿ ಪತಿ ಬಂಧನ - Husband Kills Wife - HUSBAND KILLS WIFE

ಪತ್ನಿಯ ಹತ್ಯೆ ಮಾಡಿ ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸೀಬೆ ತೋಟದಲ್ಲಿ ಮಹಿಳೆಯನ್ನು ಕೊಲೆ ಮಾಡಿರುವ ಆರೋಪಿ, ಬಳಿಕ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದ.

wife murder
ಮುಮ್ತಾಜ್, ಮೆಹಬೂಬ್ (ETV Bharat)
author img

By ETV Bharat Karnataka Team

Published : Aug 28, 2024, 9:31 AM IST

ಬೆಂಗಳೂರು: ಪತ್ನಿಯನ್ನು ಶಂಕಿಸಿ ಕೊಲೆ ಮಾಡಿ, ಆಕೆಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮುಮ್ತಾಜ್ ಎಂಬಾಕೆಯನ್ನು ಕಬ್ಬಿಣದ ವಸ್ತುವಿನಿಂದ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಚಿತ್ತೂರು ಮೂಲದ ಮೆಹಬೂಬ್ ಪಾಷಾ (50) ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಗೆ ಇಬ್ಬರು ಪತ್ನಿಯರಿದ್ದು, ಕೂಲಿ ಕೆಲಸ ಮಾಡಿಕೊಂಡು ತನ್ನ ಎರಡನೇ ಪತ್ನಿ ಮುಮ್ತಾಜ್ ಜೊತೆ ಬಾಗಲೂರಿನ ರಜಾಕ್ ಸಾಬ್ ಪಾಳ್ಯದಲ್ಲಿ ವಾಸವಿದ್ದ. ಆಗಸ್ಟ್ 25ರಂದು ಬಾಗಲೂರು ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿ, ''ಆಗಸ್ಟ್ 24ರಂದು ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮದ ನಿಮಿತ್ತ ನಾನು ಕೋಲಾರಕ್ಕೆ ಹೋಗಿದ್ದೆ. ಪತ್ನಿಗೆ ಕರೆ ಮಾಡಿದಾಗ ಆಕೆ ಸ್ವೀಕರಿಸಲಿಲ್ಲ. ಬೆಳಗ್ಗೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿಯೂ ಇರಲಿಲ್ಲ. ನಾನು ಕೆಲಸ ಮಾಡುತ್ತಿದ್ದ ಸೀಬೆ ತೋಟದಲ್ಲಿ‌ ಯಾರೋ ಆಕೆಯನ್ನು ಹತ್ಯೆ ಮಾಡಿದ್ದಾರೆ'' ಎಂದು ದೂರು ನೀಡಿದ್ದ.

ದೂರು ಸ್ವೀಕರಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆರೋಪಿಯ ಮಾತಿನ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬಯಲಾಗಿದೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ಆರೋಪಿ ಆಗಸ್ಟ್ 24ರಂದು ಆಕೆಯನ್ನು ತಾನು ಕೆಲಸ ಮಾಡುತ್ತಿದ್ದ ಸೀಬೆ ತೋಟಕ್ಕೆ ಕರೆದೊಯ್ದು ಕಬ್ಬಿಣದ ವಸ್ತುವಿನಿಂದ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದ. ಬಳಿಕ‌ ಆಕೆಯ ಶವವನ್ನು ಅಲ್ಲಿಯೇ ಬಿಟ್ಟು ರಾತ್ರಿಯಿಡಿ ಮನೆಗೆ ಹೋಗದೇ ಹೊರಗಡೆಯೇ ಉಳಿದಿದ್ದ. ಬೆಳಗ್ಗೆ ಮನೆಗೆ ತೆರಳಿ, ಏರಿಯಾದಲ್ಲಿ ಯಾರಿಗೂ ಅನುಮಾನ ಬಾರದಂತೆ ತಾನೇ ಬಂದು ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ - Contaminated Water Tragedy

ETV Bharat Logo

Copyright © 2025 Ushodaya Enterprises Pvt. Ltd., All Rights Reserved.