ETV Bharat / state

ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ: ಸಚಿವ ಹೆಚ್.ಸಿ.ಮಹದೇವಪ್ಪ - H C Mahadevappa

ರಾಜ್ಯ ರಾಜಕೀಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಚರ್ಚೆ ನಡೆಯುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ.ಮಹದೇವಪ್ಪ, ಅಧ್ಯಕ್ಷ ಸ್ಥಾನದ ಹಂಬಲ ವ್ಯಕ್ತಪಡಿಸಿದರು.

HC MAHADEVAPPA COMMENTS ON KPCC
ಸಚಿವ ಹೆಚ್.ಸಿ.ಮಹದೇವಪ್ಪ (ETV Bharat)
author img

By ETV Bharat Karnataka Team

Published : May 30, 2024, 2:30 PM IST

ಬೆಂಗಳೂರು: ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಆಸೆ ಇದೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಬೆಂಗಳೂರಲ್ಲಿಂದು ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲರಿಗೂ ಮುಕ್ತ ಅವಕಾಶಗಳಿವೆ. ಹೈಕಮಾಂಡ್ ಸೂಕ್ತ ತೀರ್ಮಾನ ಮಾಡಲಿದೆ ಎಂದರು.

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ವಿಚಾರಕ್ಕೆ, ಚಂದ್ರಶೇಖರನ್​ ಒಬ್ಬ ಒಳ್ಳೆಯ ಅಧಿಕಾರಿ. ಅವರ ಆತ್ಮಹತ್ಯೆಯಿಂದ ತುಂಬ ಬೇಸರವಾಗಿದೆ. ಡೆತ್ ನೋಟ್​ನಲ್ಲಿ ಕೆಲವು ಆರೋಪಗಳನ್ನು ಮಾಡಿದ್ದಾರೆ. ಪ್ರಕರಣವನ್ನು ಸರ್ಕಾರ ಕೂಡಲೇ ತನಿಖೆಗೆ ಒಪ್ಪಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ. ಆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಇಲ್ಲಿ ದಲಿತರು ದಲಿತೇತರ ಹಣ ಅಂತಲ್ಲ. ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ಇದು ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ. ವಿರೋಧ ಪಕ್ಷದವರು ರಾಜೀನಾಮೆ ಕೇಳ್ತಾರೆ. ಸತ್ಯಾಸತ್ಯತೆ ಹೊರಗಡೆ ಬರಲಿ. ಆ ನಂತರ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಸರ್ಕಾರ ಪಿತೂರಿ ನಡೆಸುತ್ತಿದೆ ಎಂಬ ಪ್ರಜ್ವಲ್ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಪಿತೂರಿ ಪ್ರಶ್ನೆಯೇ ಬರುವುದಿಲ್ಲ. ಅವರೇ ಎಲ್ಲವನ್ನೂ ಮಾಡಿರೋದು. ಹಾಗಿದ್ದಾಗ ಪಿತೂರಿ ಪ್ರಶ್ನೆ ಯಾಕೆ ಬರುತ್ತೆ? ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಯಾಕೆ ಹಸ್ತಕ್ಷೇಪ ಮಾಡುತ್ತದೆ? ಎಂದರು.

ತೆಲಂಗಾಣ ಚುನಾವಣೆಗೆ ಹಂಚಿಕೆಯಾದ ಹಣ ವಾಲ್ಮಿಕಿ ನಿಗಮದ್ದೆಂಬ ಆರೋಪಕ್ಕೆ, ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ವಿರೋಧ ಪಕ್ಷ ಏನು ಬೇಕಾದ್ರೂ ಹೇಳಬಹುದು. ಈಗಾಗಲೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು.

ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಸಚಿವ ನಾಗೇಂದ್ರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ - B Y VIJAYENDRA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.