ETV Bharat / state

ಮುಖ್ಯಮಂತ್ರಿ ಬದಲಾವಣೆ ಇಲ್ಲ, ನಾನು 2028ಕ್ಕೆ ಸಿಎಂ ಆಕಾಂಕ್ಷಿ: ಸಚಿವ ಸತೀಶ್​ ಜಾರಕಿಹೊಳಿ - SATISH JARKIHOLI

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಕೇವಲ ಊಹಾಪೋಹ. ನಾನು 2028ಕ್ಕೆ ಸಿಎಂ ಆಗಬೇಕೆಂಬ ಬಯಕೆ ಹೊಂದಿದ್ದೇನೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಸಚಿವ ಸತೀಶ್​ ಜಾರಕಿಹೊಳಿ
ಸಚಿವ ಸತೀಶ್​ ಜಾರಕಿಹೊಳಿ (ETV Bharat)
author img

By ETV Bharat Karnataka Team

Published : Oct 10, 2024, 12:10 PM IST

ಹಾಸನ: "ಮುಖ್ಯಮಂತ್ರಿ ಬದಲಾವಣೆ ಇಲ್ಲ, ಸಿಎಂ ಬದಲಾವಣೆ ಕೇವಲ ಊಹಾಪೋಹ" ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ವತಃ ಹೈಕಮಾಂಡ್​ ಹೇಳಿದ್ದು, ಸಿದ್ದರಾಮಯ್ಯ ಅವರ ಬದಲಾವಣೆ ಯಾವುದೇ ಕಾರಣಕ್ಕೂ ಆಗಲ್ಲ. ಅದು ಕೇವಲ ಊಹಾಪೋಹ. ಸಿಎಂ ಬದಲಾವಣೆ ಚರ್ಚೆ ಏನೇ ಇದ್ದರೂ, ಅದು ಸದ್ಯಕ್ಕೆ ಇಲ್ಲ. ಯಾರು ಏನೇ ಹೇಳಿದರೂ ಸಿಎಂ ಬದಲಾವಣೆ ಚರ್ಚೆ ಪಕ್ಷದೊಳಗೆ ನಡೆದಿಲ್ಲ. ಹಾಗಾಗಿ ಆ ಪ್ರಶ್ನೆ ಉದ್ಭವಿಸದು. ಸಿಎಂ ಹಾಲಿ ಇದ್ದಾರೆ. ನಾನು 2028ಕ್ಕೆ ಸಿಎಂ ಆಗಬೇಕೆಂಬ ಬಯಕೆ ಹೊಂದಿದ್ದೇನೆ. ಅದೇ ಕಾರಣಕ್ಕೆ ನನ್ನ ಮಗಳೂ ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅಲ್ಲಿಯವರೆಗೂ ಕಾಯೋಣ" ಎಂದು ಊಹಾಪೋಹಕ್ಕೆ ತೆರೆ ಎಳೆದರು.

ಸಚಿವ ಸತೀಶ್​ ಜಾರಕಿಹೊಳಿ ಹೇಳಿಕೆ. (ETV Bharat)

"ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಹೊರಗಿನ ಚರ್ಚೆಗೆ ನಾನು ಉತ್ತರಿಸುವುದಿಲ್ಲ. ನನ್ನ ಹಲವು ಹಿತೈಷಿಗಳು ನಾನೇ ಸಿಎಂ ಎಂದು ಹೇಳಿದ್ದರೂ, ಅದು ಸಿಎಂ ಸಿದ್ದರಾಮಯ್ಯ ಅವರ ಅವಧಿ ಮುಗಿದ ಮೇಲೆ ಅಷ್ಟೇ. ನಾನು ಮುಂದೆ ಸಿಎಂ ಆದರೆ ಅದು ಸಿದ್ದರಾಮಯ್ಯ ಅವರ ಸಹಕಾರದಿಂದಲೇ ಆಗುತ್ತೇನೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರವಾಗಿ ಕೆಬಿ ಕೋಳಿವಾಡ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ".

ರಾಜ್ಯದಲ್ಲಿ ಜಾತಿ-ಗಣತಿ ವರದಿ ಜಾರಿ ವಿಚಾರದಲ್ಲಿ ಬೇಕು-ಬೇಡ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಸಚಿವ ಸಂಪುಟದಲ್ಲಿ ಇದು ಚರ್ಚೆಗೆ ಬಂದಿಲ್ಲ. ಬಂದ ಮೇಲೆ ನೋಡೋಣ ಎಂದರು. ಜೊತೆಗೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಆಗಬೇಕು ಎಂಬ ಕೂಗಿದೆ. ಈ ಸಂಬಂಧ ಪ್ರತಿಭಟನೆ ನಡೆಯುತ್ತಿದೆ. ಚುನಾವಣಾ ಪ್ರಣಾಳಿಕೆಯಲ್ಲೇ ಜಾರಿ ಮಾಡುವ ಭರವಸೆ ನೀಡಿದ್ದು, ಅದನ್ನು ಮಾಡುತ್ತೇವೆ ಎಂದು ಸಚಿವರು ಹೇಳಿದರು.

ಇದೇ ವೇಳೆ ನಿಧನರಾದ ವಾಲ್ಮೀಕಿ ಸಮುದಾಯದ ಮುಖಂಡ ಮಹಾಂತಪ್ಪ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಂತಾಪ ಸೂಚಿಸಿದರು.

ಬಳಿಕ, "ಮೈಸೂರು ಲೋಕಾಯುಕ್ತದಲ್ಲಿ ನಡೆಯುತ್ತಿರುವ ತನಿಖೆಗೆ ಸಿಎಂ ಅವರು ಎಲ್ಲಾ ರೀತಿಯ ಸಹಕಾರ ನೀಡಲಿದ್ದಾರೆ. ಅದರಲ್ಲಿ ಯಾವುದೇ ಮುಜುಗರದ ಪ್ರಶ್ನೆ ಇಲ್ಲ. ಸಿಎಂ ರಾಜೀನಾಮೆ ಕೊಡುತ್ತಾರಾ ಎಂದು ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಯ ಹಲವು ನಾಯಕರ ವಿರುದ್ಧ ಎಫ್​​ ಐಆರ್​ ದಾಖಲಾಗಿದ್ದು, ಆರೋಪ ಇದೆ" ಎಂದು ಸಚಿವರು ಹೇಳಿದರು.

ಇದನ್ನೂ ಓದಿ: 'ವಾಲ್ಮೀಕಿ ನಿಗಮಕ್ಕೆ ಹಣ ಮರಳಿಸಲು ಕ್ರಮ ವಹಿಸಿ': ಸಿಎಂಗೆ ಮನವಿ ಸಲ್ಲಿಸಿದ ವಾಲ್ಮೀಕಿ ಶ್ರೀಗಳ ನಿಯೋಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.