ETV Bharat / state

ನಾನು ಅಸಮಾನತೆ ವಿರುದ್ಧ ಹೋರಾಡುವವನು, ಅದಕ್ಕೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಸಿಎಂ - CM Siddaramaiah Press Meet - CM SIDDARAMAIAH PRESS MEET

ನಾನು ಅಸಮಾನತೆ ವಿರುದ್ಧ ಹೋರಾಡುವವನು. ಅದಕ್ಕೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

INEQUALITY  FALSELY ALLEGATION  CM SIDDARAMAIAH  BENGALURU
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 20, 2024, 2:36 PM IST

ಸಿಎಂ ಸಿದ್ದರಾಮಯ್ಯ ಹೇಳಿಕೆ (ETV Bharat)

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ದೇವರಾಜ ಅರಸುರವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸದ್ಭಾವನಾ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಿದರು.

ಈ ವೇಳೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್. ತಂಗಡಗಿ, ವಿಧಾನ ಪರಿಷತ್ ಶಾಸಕರಾದ ನಾಗರಾಜ್ ಯಾದವ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿ.ದೇವರಾಜ ಅರಸು ಅವರ ಕುಟುಂಬದ ಸದಸ್ಯರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

inequality  falsely allegation  CM Siddaramaiah  Bengaluru
ಅಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ (ETV Bharat)

ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗಲ್ಲ. ಅದಕ್ಕೆ ನನ್ನ ಮೇಲೆ ಮುಗಿಬಿದ್ದಿದ್ದಾರೆ.‌ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದರ ಹಿಂದೆ ಬಿಜೆಪಿಯವರ ಹೊಟ್ಟೆಕಿಚ್ಚು ಕೆಲಸ ಮಾಡುತ್ತಿದೆ ಎಂದರು.

ಅಂತೆಯೇ ಕಾಂಗ್ರೆಸ್‌ ಪಕ್ಷ ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೆ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ. ಈಗ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ (ETV Bharat)

ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದರು. ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರವಿದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು ಎಂದರು.

inequality  falsely allegation  CM Siddaramaiah  Bengaluru
ಸಿಎಂ ಸಿದ್ದರಾಮಯ್ಯ (ETV Bharat)

ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ ಎಂದರು.

ಭಾರತೀಯ ಜನತಾ ಪಕ್ಷದವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.

ದೇವರಾಜ ಅರಸು ಅವರು 1972 ರಿಂದ ದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗದ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನ ಸೌಧ ಪ್ರವೇಶಿಸುವಂತೆ ಮಾಡಿದರು ಎಂದರು.

ಓದಿ: ನೈಋತ್ಯ ರೈಲ್ವೆ ಅಭಿವೃದ್ಧಿಗೆ ಕೇಂದ್ರದಿಂದ 6,493 ಕೋಟಿ ಮಂಜೂರು - six thousand crore for SW Railway

ETV Bharat Logo

Copyright © 2025 Ushodaya Enterprises Pvt. Ltd., All Rights Reserved.