ETV Bharat / state

ಲೋಕಸಭೆ ಚುನಾವಣೆ: ನಾನು ಕೂಡ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ: ಎಚ್ ವಿಶ್ವನಾಥ್

ಈ ಬಾರಿ ನಾನು ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಸಿದ್ಧನಾಗಿದ್ದು, ನಾನು ಕೂಡ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ ಎಂದು ಹೆಚ್​ ವಿಶ್ವನಾಥ್​ ಹೇಳಿದ್ದಾರೆ.

Congress party  MLC H Vishwanath  ಕಾಂಗ್ರೆಸ್ ಪಕ್ಷ  ಎಂಎಲ್ಸಿ ಎಚ್ ವಿಶ್ವನಾಥ್  Lok Sabha Election
ಎಚ್ ವಿಶ್ವನಾಥ್
author img

By ETV Bharat Karnataka Team

Published : Feb 23, 2024, 1:15 PM IST

Updated : Feb 23, 2024, 3:54 PM IST

ನಾನು ಕೂಡ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಎಂದ ಎಚ್ ವಿಶ್ವನಾಥ್

ಮೈಸೂರು : ನಾನು ಕೂಡ ನಮ್ಮ ಹಳೆಯ ಪಕ್ಷ ಕಾಂಗ್ರೆಸ್​​ನಿಂದ ಮುಂದಿನ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇಂದು ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ನಾನು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್​ ಆಕಾಂಕ್ಷಿಯಾಗಿದ್ದು, ನಾನು ಕೂಡ ಅದೇ ಪಕ್ಷದಲ್ಲಿ ಮೊದಲು ಎಂಪಿಯಾಗಿ, ಮಂತ್ರಿಯಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ನಾನು ಯಾಕೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಆಕಾಂಕ್ಷಿ ಆಗಬಾರದು ಎಂದು ಮಾಧ್ಯಮದವರ ಪ್ರಶ್ನೆಗೆ ಮರು ಪ್ರಶ್ನೆ ಹಾಕಿದ ಎಂಎಲ್ಸಿ ವಿಶ್ವನಾಥ್, ನಾನು ಕೂಡ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಎಂದು ಬಹಿರಂಗವಾಗಿ ಮೊದಲ ಬಾರಿಗೆ ಹೇಳಿಕೆ ನೀಡಿದರು.

ಸಿದ್ದಗಂಗಾ ಶ್ರೀ ಗಳಿಗೆ ಭಾರತ ರತ್ನ ನೀಡಿ : ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಹಾಗೂ ಸಿದ್ದಗಂಗಾ ಮಠದ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಯವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಒತ್ತಾಯಿಸಬೇಕು. ಜೊತೆಗೆ ರಾಜ್ಯದ ಮುಖ್ಯಮಂತ್ರಿಗಳು, ಎಂಎಲ್ಸಿಗಳು, ಎಂಪಿಗಳು ಈ ಬಗ್ಗೆ ಧ್ವನಿ ಎತ್ತಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.

ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಯಾಗಬೇಕು : ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಯಾಗಬೇಕು. ನಾನು ಸಹಕಾರಿ ಸಚಿವನಾಗಿದ್ದಾಗ ಈ ಬಗ್ಗೆ ಪ್ರಯತ್ನ ಮಾಡಿದೆ. ಆದರೆ, ಈಗ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಶಾಸಕ ಜಿಟಿ ದೇವೇಗೌಡ ವಿರೋಧಿಸುತ್ತಿರುವುದು ಸರಿಯಲ್ಲ. ಅವರ ಪತ್ನಿ ಲಲಿತಾ ರಾಜ್ಯ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ, ಮಗ ಎಂಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಜಿಟಿ ದೇವೇಗೌಡರು ಒಂದು ಸಮುದಾಯದಿಂದ ಗೆದ್ದಿಲ್ಲ. ಎಲ್ಲಾ ಸಮುದಾಯದ ಬೆಂಬಲದಿಂದ ಗೆದ್ದಿದ್ದಾರೆ. ಹಾಗಾದರೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಏಕೆ. ಈಗ ರಾಜ್ಯದ 67 ಸಾವಿರ ಸಹಕಾರಿ ಬ್ಯಾಂಕ್​ಗಳ ಪೈಕಿ 42 ಸಾವಿರ ಸಹಕಾರಿ ಬ್ಯಾಂಕುಗಳು ಲಾಭದಲ್ಲಿ ನಡೆಯುತ್ತಿವೆ. ಲಾಭಾಂಶವನ್ನು ಇವರೇ ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿಗೆ ಜಿಟಿ ದೇವೇಗೌಡ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಶ್ವನಾಥ್ ಹೇಳಿಕೆ ನೀಡಿದರು.

ಲೋಕಸಭೆಗೆ ಮೈತ್ರಿ ಲಾಭವಾಗುವುದಿಲ್ಲ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ರಾಜ್ಯದ ಜನರು ಮೈತ್ರಿಯ ವಿರುದ್ಧವಾಗಿ ಇದ್ದಾರೆ ಎಂಬುದು ಚುನಾವಣಾ ಫಲಿತಾಂಶದ ಮೂಲಕ ಗೊತ್ತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯನ್ನು ಜನ ತಿರಸ್ಕಾರ ಮಾಡಿದರು. ಪರಿಣಾಮ ಬಿಜೆಪಿಗೆ ದೊಡ್ಡ ಗೆಲುವಾಯಿತು. ಕಾಂಗ್ರೆಸ್​ಗೆ ಹೀನಾಯ ಸೋಲಾಯಿತು. ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ - ಜೆಡಿಎಸ್ ಮೈತ್ರಿ ಕೂಟದಿಂದ ಯಾವುದೇ ಲಾಭ ಆಗುವುದಿಲ್ಲ ಎಂದು ಹೇಳಿಕೆ ನೀಡಿದರು.

ವಿಜಯೇಂದ್ರ ವಿರುದ್ಧ ವಿಶ್ವನಾಥ್ ವಾಗ್ದಾಳಿ: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ ದೇವಾಲಯಗಳ ಹುಂಡಿಗೆ ಸರ್ಕಾರ ಕೈ ಹಾಕಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ವಿಶ್ವನಾಥ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಖಜಾನೆ ಏನಾದರು ಭರ್ತಿಯಾಗಿತ್ತಾ ಎಂದು ಪ್ರಶ್ನಿಸಿದರು. ನಿಮ್ಮ ಅಪ್ಪನನ್ನ ಜೈಲಿಗೆ ಹಾಕಿಸಿದ್ದು ನೀವು, ನೀವೇನು ಸತ್ಯವಂತರಾ ಎಂದು ಬಿ ವೈ.ವಿಜಯೇಂದ್ರ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಓದಿ: ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲೇ ನಿರ್ಣಯ ಮಂಡಿಸಿ ಬಿಜೆಪಿ - ಜೆಡಿಎಸ್ ತಿರುಗೇಟು

Last Updated : Feb 23, 2024, 3:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.