ETV Bharat / state

ಚನ್ನಪಟ್ಟಣದಲ್ಲಿ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ 'ಇನ್ಮುಂದೆ ನಿಮ್ಮನ್ನು ಬಿಟ್ಟು ಹೋಗಲ್ಲ' ಎಂದ ಡಿಕೆಶಿ - D K Shivakumar - D K SHIVAKUMAR

ಈ ಹಿಂದೆ ನಾನು ಕನಕಪುರ ಹಾಗೂ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆ. ಇಂದು ಚನ್ನಪಟ್ಟಣದಲ್ಲಿ ಭಾಗವಹಿಸುತ್ತಿರುವುದು ನನ್ನ ಭಾಗ್ಯ. ಚನ್ನಪಟ್ಟಣದಲ್ಲಿ ಧ್ವಜ ಹಾರಿಸಲು ಜನಪ್ರತಿನಿಧಿಗಳಿಲ್ಲದ ಕಾರಣ, ನಿಮ್ಮ ಮನೆ ಮಗನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

78TH INDEPENDENCE DAY
ಚನ್ನಪಟ್ಟಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಹಾಜರಿದ್ದರು. (IANS)
author img

By ETV Bharat Karnataka Team

Published : Aug 15, 2024, 8:09 PM IST

ರಾಮನಗರ: ನಾವೆಲ್ಲರೂ 78ನೇ ಸ್ವಾತಂತ್ರ್ಯ ದಿನಾಚರಿಸುತ್ತಿದ್ದು, ನನ್ನ ರಾಜಕೀಯ ಬದುಕಿನಲ್ಲಿ ಇದು ವಿಶೇಷವಾದ ದಿನ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರದ ಪರವಾಗಿ ಇಲ್ಲಿ ಧ್ವಜಾರೋಹಣ ಮಾಡುವ ಅವಕಾಶ ಸಿಕ್ಕಿರುವುದು ಬಹಳ ಹೆಮ್ಮೆಯ ವಿಚಾರ. ಈ ಹಿಂದೆ ಕನಕಪುರ ಹಾಗೂ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆ. ಇಂದು ಚನ್ನಪಟ್ಟಣದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನನ್ನ ಭಾಗ್ಯ. ಚನ್ನಪಟ್ಟಣದಲ್ಲಿ ಧ್ವಜ ಹಾರಿಸಲು ಜನಪ್ರತಿನಿಧಿ ಇಲ್ಲದ ಕಾರಣ ನಿಮ್ಮ ಮನೆ ಮಗನಾಗಿ ಇಲ್ಲಿಗೆ ಬಂದಿದ್ದೇನೆ. ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್: ಸ್ವಾತಂತ್ರ್ಯ ಎಂದರೆ ಗುಲಾಮಗಿರಿಯಿಂದ ಹೊರಬಂದ ದಿನ. ಇಂದು ಕೇವಲ ಧ್ವಜಾರೋಹಣ ಮಾಡುವ ದಿನ ಮಾತ್ರವಲ್ಲ. ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಯ ಆರೋಹಣ. ಧ್ವಜವನ್ನು ಅರ್ಧಕ್ಕೆ ಹಾರಿಸುವುದು ಹೇಗೆ ರಾಷ್ಟ್ರಧ್ವಜಕ್ಕೆ ಮಾಡುವ ಅಪಮಾನವೋ ಅದೇ ರೀತಿ ಜನರಿಂದ ಆಯ್ಕೆಯಾದ ವ್ಯಕ್ತಿ ಅರ್ಧಕ್ಕೆ ಬಿಟ್ಟು ಹೋಗುವುದು ಜನರಿಗೆ ಮಾಡುವ ಅಪಮಾನ ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ: ಈ ಸ್ವಾತಂತ್ರ್ಯೋತ್ಸವ ದಿನದ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕಿನ ಅಭಿವೃದ್ಧಿ ನಂತರ ಉಜ್ವಲವಾಗಿದೆ. ಇಲ್ಲಿ ರಾಜಕೀಯ ಮಾಡುವುದಕ್ಕಿಂತ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಸಹಕಾರ ಅಗತ್ಯ. ಈ ಜಿಲ್ಲೆಯವರು ಬೆಂಗಳೂರಿಗೆ ಸೇರಿದ್ದು, ಈ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಿದ್ದೇವೆ. ನಮ್ಮ ಸ್ವಾಭಿಮಾನ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಈ ಕ್ರಮಕ್ಕೆ ಮುಂದಾಗಿದ್ದೇವೆ. ನಮ್ಮ ಸರ್ಕಾರ ಜನರ ಮನೆ ಬಾಗಿಲಿಗೆ ಬಂದು, ಜನರ ಸಮಸ್ಯೆ ಆಲಿಸಲಾಗಿದೆ. ಕಳೆದ ಒಂದೂವರೆ ತಿಂಗಳಿಂದ ಹೆಚ್ಚಿನ ಜನರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದು, ಸುಮಾರು 22 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವರ ಸಮಸ್ಯೆಗಳನ್ನು ಆಲಿಸಲು ಪ್ರಯತ್ನಿಸುತ್ತಿದ್ದೇನೆ ಎಂದರು.

ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ದೇಶದ ಯಾವುದೇ ಸರ್ಕಾರ ಜಾರಿ ಮಾಡದ ನೇರ ನಗದು ವರ್ಗಾವಣೆ ಯೋಜನೆಯನ್ನು ನಮ್ಮ ಸರ್ಕಾರ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಿದೆ. ನಾಡಿನ ಜನರ ಆಶೋತ್ತರಗಳನ್ನು ಆಧರಿಸಿ ಜಾರಿಗೆ ಬಂದಿರುವ ಗ್ಯಾರಂಟಿ ವಿಶ್ವಮಟ್ಟದಲ್ಲಿ ಪ್ರಶಂಸೆ ಪಡೆದಿದೆ. ನಾವು ಈ ಜನರ ಬದಲಾವಣೆಗೆ ಪ್ರಯತ್ನಿಸುತ್ತಿದ್ದು, ಪಕ್ಷಾತೀತವಾಗಿ ನಿಮ್ಮ ಸಹಕಾರ ಬಯಸುತ್ತಿದ್ದೇನೆ ಎಂದು ಸಾರ್ಕಾರದ ಸಾಧನೆ ಬಿಚ್ಚಿಟ್ಟರು.

ಒಂದೇ ವೇದಿಕೆಯಲ್ಲಿ ಸಿಪಿವೈ-ಡಿಕೆಶಿ: ಇಂದಿನ ವೇದಿಕೆಯು ರಾಜಕೀಯ ಬದ್ಧ ವೈರಿಗಳ ಸಮಾಗಮವಾಗಿತ್ತು. ದೆಹಲಿ ಭೇಟಿ ಬಳಿಕ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಕಾಣಿಸಿಕೊಂಡರು. 6 ವರ್ಷ ಶಾಸಕರಾಗಿದ್ದರೂ ಒಂದು ಬಾರಿಯೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಿರಲಿಲ್ಲ. ಇದೇ ವಿಚಾರವನ್ನು ಡಿ.ಕೆ.ಶಿವಕುಮಾರ್ ರಾಜಕೀಯ ಅಸ್ತ್ರ ಮಾಡಿಕೊಂಡಿದ್ದು ಗಮನ ಸೆಳೆಯಿತು.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಸಚಿವ ಮಧು ಬಂಗಾರಪ್ಪ - Guarantee Schemes

ETV Bharat Logo

Copyright © 2024 Ushodaya Enterprises Pvt. Ltd., All Rights Reserved.