ETV Bharat / state

ನಾನು ಯಾವ ದೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ: ಸಚಿವ ಪ್ರಿಯಾಂಕ್ ಖರ್ಗೆ - Minister Priyank Kharge

''ನಾನು ಯಾವ ದೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ'' ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ನಾನು ಯಾವ ದೈವ ಭಕ್ತನೂ ಅಲ್ಲ  ನಾನು ಸಂವಿಧಾನದ ಭಕ್ತ  ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು  ಪ್ರಿಯಾಂಕ್ ಖರ್ಗೆ  Minister Priyank Kharge  Priyank Kharge
ನಾನು ಯಾವ ದೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
author img

By ETV Bharat Karnataka Team

Published : Jan 24, 2024, 12:25 PM IST

ಬೆಂಗಳೂರು: ''ಹೌದು.. ನಾನು ಯಾವ ದೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ'' ಎಂದು ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

''ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣ ಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ. ದಯೆಯೇ ಧರ್ಮ, ಮಾನವತೆಯೇ ಪರಮದೈವ ಎಂದು ನಂಬಿದವನು ನಾನು'' ಎಂದಿದ್ದಾರೆ. ಸಂವಿಧಾನದಲ್ಲಿ ಆಸ್ತಿಕನಿಗೂ ನಾಸ್ತಿಕನಿಗೂ ಸಮಾನ ಅವಕಾಶವಿದೆ. ಸಮಾನ ಹಕ್ಕುಗಳಿವೆ. ಇದನ್ನು ಬಿಜೆಪಿಯವರು ಅರಿತುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ತಿರುಗೇಟು ನೀಡಿದ್ದಾರೆ.

''ಬಹುಶಃ ನಾನು ಪರಂಪರೆಯ ದೇವಾಲಯಗಳನ್ನು ಸಂದರ್ಶಿಸಿದಷ್ಟು ಬಿಜೆಪಿಯವರು ಹೋಗಿರಲಿಕ್ಕಿಲ್ಲ. ನಾನು ಕಾಶಿ, ಮಥುರಾ, ಬುದ್ಧಗಯಾ, ಅಜ್ಮೇರ್ ದರ್ಗಾ, ಚರ್ಚ್ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿದ್ದೇನೆ. ಭಕ್ತನಾಗಿ ಅಲ್ಲ, ಅಧ್ಯಯನಕಾರನಾಗಿ. ವಿವಿಧ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಇತಿಹಾಸಗಳನ್ನು ಅಧ್ಯಯನ ಮಾಡುವುದು ನನ್ನ ಆಸಕ್ತಿ. ಮುಂದೆಯೂ ನನ್ನ ಈ ಅಧ್ಯಯನದ ಪ್ರವಾಸಗಳನ್ನು ಮಾಡುತ್ತಿರುತ್ತೇನೆ'' ಎಂದು ಹೇಳಿದ್ದಾರೆ.

''ಭಕ್ತಿ, ನಂಬಿಕೆಗಳನ್ನು ಬಲವಂತವಾಗಿ ಹೇರುವುದಕ್ಕೂ ಸಾಧ್ಯವಿಲ್ಲ. ಬಲವಂತವಾಗಿ ಕಿತ್ತುಹಾಕಲೂ ಸಾಧ್ಯವಿಲ್ಲ ಎಂಬ ಸತ್ಯವನ್ನು ಟೀಕಿಸುವವರು ಅರ್ಥ ಮಾಡಿಕೊಂಡರೆ ಒಳಿತು. ನನ್ನ ಭಕ್ತಿ ಏನಿದ್ದರೂ ಸತ್ಯ, ಸಮಾನತೆಯೆಡೆಗೆ ಮಾತ್ರ. ಯಾರನ್ನೋ ಮೆಚ್ಚಿಸಲು ಡಾಂಭಿಕ ದೈವ ಭಕ್ತನಂತೆ ತೋರಿಸಿಕೊಳ್ಳುವುದು ನನ್ನ ಜಾಯಮಾನವಲ್ಲ. ಹಾಗೆಯೇ, ರಾಜಕಾರಿಣಿಯೊಬ್ಬನ ಮೌಲ್ಯಮಾಪನವನ್ನು ಆತನ ಕೆಲಸಗಳಿಂದ ಮಾಡಬೇಕೇ ಹೊರತು ಆತನ ಭಕ್ತಿಯಿಂದಲ್ಲ ಎಂಬ ವಾಸ್ತವವನ್ನು ಟೀಕಾಕಾರರು ಅರಿತುಕೊಳ್ಳಬೇಕು'' ಎಂದು ವಾಗ್ದಾಳಿ ನಡೆಸಿದ್ದಾರೆ.

''ಕಣ್ಣಿನಲ್ಲಿ ಕಾಮ, ಮನದಲ್ಲಿ ಕ್ರೋಧ, ಪ್ರಾಣದಲ್ಲಿ ಲೋಭ, ಬುದ್ಧಿಯಲ್ಲಿ ಮದ ವಿವೇಕದಲ್ಲಿ ಮತ್ಸರ ಅರುಹಿನಲ್ಲಿ ಮಾಯವುಳ್ಳನ್ನಕ್ಕರ ಎಂತು ಭಕ್ತನೆಂಬೆ? ಟೀಕಿಸುವವರಿಗೆ ಶರಣರ ಈ ವಚನವನ್ನು ಅರ್ಪಿಸುತ್ತೇನೆ'' ಎಂದು ಸಚಿವ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ಹಿರೇಮಗಳೂರು ಕಣ್ಣನ್​ ಕ್ಷಮೆ ಕೇಳಬೇಕು: ಕೆ.ಎಸ್.ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.