ETV Bharat / state

ಸಚಿವ ಸಂಪುಟ ಪುನಾರಚನೆ ವಿಷಯ ನನಗೆ ಗೊತ್ತಿಲ್ಲ: ಜಮೀರ್ ಅಹ್ಮದ್ ಖಾನ್ - CABINET RESHUFFLE

ಸಿಡಬ್ಲ್ಯೂಸಿ ಮೀಟಿಂಗ್​ಗೋಸ್ಕರ ಸಿಎಂ, ಡಿಸಿಎಂ ದೆಹಲಿಗೆ ಹೋಗಿರುವುದು. ಸಚಿವ ಸಂಪುಟ ಪುನಾರಚನೆಗೆ ಅಲ್ಲ ಎಂದು ಸಚಿವ ಜಮೀರ ಅಹಮ್ಮದ್ ಖಾನ್ ಹೇಳಿದ್ದಾರೆ.

ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್ (ETV Bharat)
author img

By ETV Bharat Karnataka Team

Published : Nov 29, 2024, 2:40 PM IST

ಹುಬ್ಬಳ್ಳಿ: "ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದು ಸಿಡಬ್ಲ್ಯೂಸಿ ಮೀಟಿಂಗ್​ಗೆ, ಸಚಿವ ಸಂಪುಟ ಪುನಾರಚನೆಗೆ ಹೋಗಿದ್ದಲ್ಲ" ಎಂದು ಸಚಿವ ಜಮೀರ್​ ಅಹಮ್ಮದ್ ಖಾನ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, "ಸಚಿವ ಸಂಪುಟ ಪುನಾರಚನೆ ವಿಷಯ ನನಗೆ ಗೊತ್ತಿಲ್ಲ. ಆ ರೀತಿಯ ಯಾವ ಚರ್ಚೆಗಳೂ ನಡೆದಿಲ್ಲ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಅದನ್ನು ತೀರ್ಮಾನ ಮಾಡಬೇಕು ಎಂದರು.

"ದೇಶದ ಪ್ರತಿಯೊಬ್ಬ ನಾಗರಿಕನಿಗೆ ಮತದಾನದ ಹಕ್ಕು ಕೊಟ್ಟಿದ್ದು ಸಂವಿಧಾನ. ಚಂದ್ರಶೇಖರ್​ ಗುರೂಜಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಸ್ವಾಮೀಜಿ ದೊಡ್ಡವರು, ಅವರ ಬಗ್ಗೆ ಮಾತನಾಡಲಿಕ್ಕೆ ಇಷ್ಟ ಪಡುವುದಿಲ್ಲ" ಎಂದು ಅವರು ಹೇಳಿದರು.

ಸಚಿವ ಜಮೀರ ಅಹಮ್ಮದ್ ಖಾನ್ ಹೇಳಿಕೆ (ETV Bharat)

"ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆ ಆಗಬೇಕು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿಯೇ ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿದ್ದು. ಈ ನಿಟ್ಟಿನಲ್ಲಿ ಜನರ ಜ್ವಲಂತ ಸಮಸ್ಯೆಗಳ ಚರ್ಚೆ ಮಾಡುತ್ತೇವೆ. ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ಅದಕ್ಕಾಗಿ ನಾವು ಹುಬ್ಬಳ್ಳಿಗೆ ಬಂದಿದ್ದೇನೆ" ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: ಸದ್ಯಕ್ಕೆ ಸಂಪುಟ ಪುನಾರಚನೆ ಪ್ರಸ್ತಾವನೆ ಇಲ್ಲ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.