ETV Bharat / state

ನಾನು ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿಲ್ಲ: ಬಸವರಾಜ ಬೊಮ್ಮಾಯಿ

ನಾನು ಯಾರಿಗೂ ಟಿಕೆಟ್ ಕೊಡಿಸುವ ಮಾತು ಕೊಟ್ಟಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : 6 hours ago

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ. ನನ್ನ ಮಗನನ್ನು ನಿಲ್ಲಿಸುವ ಆಸಕ್ತಿಯೂ ಇರಲಿಲ್ಲ. ಕೊನೆ ಘಳಿಗೆಯವರಿಗೂ ಬೇಡ ಅಂತಾ ಹೇಳಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಗೆಲ್ಲುವ ದೃಷ್ಟಿಯಿಂದ ಟಿಕೆಟ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತು ಕೊಟ್ಟು ತಪ್ಪಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾರಿಗೂ ಟಿಕೆಟ್ ಕೊಡಿಸುತ್ತೇನೆ ಎಂದು ಮಾತು ಕೊಟ್ಟಿಲ್ಲ. ಸುಮಾರು 50 ಜನ ಆಕಾಂಕ್ಷಿಗಳಿದ್ದರು, ಎಲ್ಲರಿಗೂ ಪಕ್ಷದ ನಿರ್ಧಾರಕ್ಕೆ ಬದ್ದರಾಗಿರಬೇಕು ಅಂತಾ ಒಂದೇ ಮಾತು ಹೇಳಿದ್ದೆ. ಇದು ನನ್ನ ನಿರ್ಣಯ ಅಲ್ಲ,‌ ಪಕ್ಷದ ನಿರ್ಣಯ ಎಂದರು.

ಭರತ್​ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ (ETV Bharat)

ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್​​​ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತ ಪ್ರಶ್ನೆಗೆ, ಇವತ್ತಿನ ಬೆಳವಣಿಗೆ ಗೊತ್ತಿಲ್ಲ. ನಿನ್ನೆ‌ ತಡರಾತ್ರಿ ಮನವೊಲಿಸಲು ಪ್ರಯತ್ನ ನಡೆದಿತ್ತು. ರಾಷ್ಟ್ರೀಯ ವರಿಷ್ಠರು ಮಾತುಕತೆ ಮಾಡಿ ಮನವೊಲಿಸುವ ಕಾರ್ಯ ಮಾಡುತ್ತಾರೆ. ಸರಿಯಾಗುತ್ತದೆ ಅನ್ನುವ ವಿಶ್ವಾಸ ಇದೆ ಎಂದು ತಿಳಿಸಿದರು.

ಯೋಗೇಶ್ವರ್‌ಗೆ ಸ್ವರ್ಧಿಸುವ ಆಸೆ ಇದೆ. ಅದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇತ್ರವಾಗಿದ್ದು, ಅವರಿಬ್ಬರೂ ಮಾತುಕತೆ ಮಾಡಿಕೊಂಡು ಹೊಂದಾಣಿಕೆ ಆಗಬೇಕಿತ್ತು. ತಡವಾಗಿದ್ದಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು. ನಮ್ಮ ಪಕ್ಷದ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸರಿಪಡಿಸುವ ಕಾರ್ಯ ಮಾಡುತ್ತದೆ. ಯೋಗೇಶ್ವರ ಕಾಂಗ್ರೆಸ್ ಮುಖಂಡರ ಜೊತೆ ಸಂಪರ್ಕದಲ್ಲಿರುವ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ ಟಿಕೆಟ್ ಬಿಕ್ಕಟ್ಟು: ನಾಳೆ ಜೆಡಿಎಸ್​ ಸಭೆ, ಅಭ್ಯರ್ಥಿ ಆಯ್ಕೆ ಸಾಧ್ಯತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.