ETV Bharat / state

ಸಿ ಟಿ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೆ ದೂರು ಕೊಡುತ್ತೇನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - MINISTER LAKSHMI HEBBALKAR

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಂಎಲ್​ಸಿ ಸಿ. ಟಿ ರವಿ ಅವರು ಬಳಸಿದ್ದಾರೆ ಎನ್ನಲಾದ ಆಕ್ಷೇಪಾರ್ಹ ನಿಂದನೆ ಕುರಿತು ಮಾತನಾಡಿದರು.

Minister-lakshmi-hebbalkar
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : Dec 23, 2024, 4:02 PM IST

Updated : Dec 23, 2024, 6:15 PM IST

ಬೆಳಗಾವಿ: ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ. ಟಿ ರವಿ ಅವರು ಬಳಸಿರುವ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ. ಟಿ ರವಿ ವಿರುದ್ಧ ಕಾನೂನು ಸಮರ ಮುಂದುವರೆಸುತ್ತೇನೆ. ಅಲ್ಲದೇ, ಪ್ರಧಾನಮಂತ್ರಿ ಮತ್ತು‌ ರಾಷ್ಟ್ರಪತಿಗಳಿಗೂ‌ ಈ ಬಗ್ಗೆ ದೂರು‌ ನೀಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು (ETV Bharat)

ಘಟನೆ ಬಳಿಕ ಸಿ. ಟಿ ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ. ಟಿ ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್​ಎಸ್​ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ. ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವೆ ಹೆಬ್ಬಾಳ್ಕರ್​ ವಾಗ್ದಾಳಿ ನಡೆಸಿದರು.

ಸಿ. ಟಿ ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ? ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು ಅಂತಾರಲ್ಲಾ? ನಾಚಿಕೆ ಆಗಲ್ವ ನಿಮಗೆ? ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕೊ ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ. ಟಿ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ. ಸಾಧ್ಯವಾದರೆ ಭೇಟಿಯೂ ಆಗುತ್ತೇನೆ ಎಂದು ತಿಳಿಸಿದರು.

ಸಿ. ಟಿ ರವಿ ತಮ್ಮ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಇದೇ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು. ಎರಡು ಪ್ರತ್ಯೇಕ ‌ವಿಡಿಯೋಗಳ ಪೈಕಿ ಒಂದರಲ್ಲಿ ತಮಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಅಂದಿದ್ದಾರೆ ಎನ್ನಲಾದ ವಿಡಿಯೋವನ್ನು ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದ್ದಾರೆ ಎಂದು ಅವರು ಹೇಳಿದರು.

ಸಿ. ಟಿ ರವಿ ಬೆಳಗಾವಿ ಚಲೋ ಮಾಡುವ ಕುರಿತ ಮಾಧ್ಯಮದವರ ಪ್ರಶ್ನೆಗೆ, ಬೆಳಗಾವಿ ಶಾಂತಿಯ ತೋಟ, ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ತಿರುಗೇಟು ಕೊಟ್ಟರು.

ಇದನ್ನೂ ಓದಿ : ನನ್ನ ತಾಯಿಗಲ್ಲ, ಇಡೀ ಮಹಿಳಾ ಕುಲಕ್ಕೆ ಸಿ ಟಿ ರವಿ ಅಪಮಾನ ಮಾಡಿದ್ದಾರೆ : ಮೃಣಾಲ್ ಹೆಬ್ಬಾಳ್ಕರ್ - MRUNAL HEBBALKAR

Last Updated : Dec 23, 2024, 6:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.