ETV Bharat / state

ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವ ಬಿಜೆಪಿ, ಜೆಡಿಎಸ್​ನವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

CM CLARIFICATION
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Sep 26, 2024, 2:32 PM IST

Updated : Sep 26, 2024, 3:12 PM IST

ಬೆಂಗಳೂರು: ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜೀನಾಮೆ ನೀಡುವುದಿಲ್ಲ ಎಂದರು.

ಸಿಎಂ ಸ್ಥಾನದಲ್ಲಿ ಮುಂದುವರಿಯಲು ಮುಜುಗರವಾಗುವುದಿಲ್ಲವೇ ಎಂದು ಕೇಳಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಗೋಧ್ರಾ ಹತ್ಯಾಕಾಂಡ ಸಮಯದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ನೀಡಿದ್ದರಾ?. ಇಂದು ಮೋದಿ ಸರ್ಕಾರದ ಸಂಪುಟದಲ್ಲಿ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಮೇಲೆ ಆರೋಪಗಳಿವೆಯಲ್ಲವೇ?, ಅವರು ಈಗ ಜಾಮೀನು ಮೇಲೆ ಇದ್ದಾರೆ. ಅವರು ರಾಜೀನಾಮೆ ನೀಡಿದ್ದಾರೆಯೇ? ಹಾಗಾದರೆ ಅವರಿಗೆ ಮುಜುಗರವಾಗುವುದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಹೆಚ್​.ಸಿ. ಮಹದೇವಪ್ಪ ಮಾತನಾಡುತ್ತಿರುವುದು (ETV Bharat)

ಇನ್ನು, ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಹೆಚ್​.ಸಿ. ಮಹದೇವಪ್ಪ, ಅಷ್ಟಕ್ಕೂ ಸಿದ್ದರಾಮಯ್ಯನವರು ಮಾಡಿದ ತಪ್ಪೇನು?. ಬಡಜನರ ಪರವಾಗಿ ಕೆಲಸ ಮಾಡಿದ್ದೇ ತಪ್ಪಾ?. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು.

ಮೊದಲು ಬಿಜೆಪಿಯವರು ಅವರ ಮನೆ ಸರಿಮಾಡಿಕೊಳ್ಳಲಿ. ಕೆ‌.ಎಸ್.ಈಶ್ವರಪ್ಪ ಮನೆಯಲ್ಲಿ ಎಲ್ಲ ಪರ್ಯಾಯ ನಾಯಕತ್ವದ ಸಭೆ ನಡೆಯುತ್ತಿದೆ. ಅದನ್ನು ಬಿಜೆಪಿ ಮೊದಲು ಸರಿಪಡಿಸಲಿ ಎಂದು ಸಲಹೆ ನೀಡಿದರು.

ಯಾರೆಲ್ಲ ಬೇಲ್ ಮೇಲಿದ್ದಾರೋ ಅವರೆಲ್ಲ ಮೊದಲು ರಾಜೀನಾಮೆ ನೀಡಲಿ. ಆಮೇಲೆ ನೈತಿಕತೆ ಬಗ್ಗೆ ಮಾತಾಡಲಿ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಚಿವರು, ಕಾನೂನಾತ್ಮಕವಾಗಿ, ರಾಜಕೀಯವಾಗಿ ಎಲ್ಲ ಹೋರಾಟಕ್ಕೂ ನಾವು ಸಿದ್ದ ಎಂದರು.

ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೋಳಿವಾಡ ಅವರದ್ದು ವ್ಯಕ್ತಿಗತ ಅಭಿಪ್ರಾಯ. ಅದು ಪಕ್ಷದ ಅಭಿಪ್ರಾಯವಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ರಾಜೀನಾಮೆಗೆ ಆಗ್ರಹ: ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ, ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ - BJP Protest

ಇನ್ನು ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತನಿಖೆಗೆ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆಯೆದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ನಂತರ ದಿಢೀರ್ ವಿಧಾನಸೌಧ ಮುತ್ತಿಗೆ ನಿರ್ಧಾರ ಪ್ರಕಟಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನಾನಿರತ ಎಲ್ಲ ಶಾಸಕರು, ಸಂಸದರು ಮುಖಂಡರೊಂದಿಗೆ ಪಾದಯಾತ್ರೆ ಮೂಲಕ ಕೆಂಗಲ್ ಗೇಟ್ ದ್ವಾರದತ್ತ ತೆರಳಿದರು. ವಿಧಾನಸೌಧದ ದ್ವಾರಕ್ಕೆ ಬೀಗ ಜಡಿಯಲು ಮುಂದಾಗಿದ್ದರಿಂದ ಹೈಡ್ರಾಮಾ ನಡೆಯಿತು. ಕೂಡಲೇ ಎಲ್ಲ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದರು.

Last Updated : Sep 26, 2024, 3:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.