ETV Bharat / state

ಬೆಂಗಳೂರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವ ಕೇರಳದ ಕುಖ್ಯಾತ ಕಳ್ಳನದ್ದು‌‌‌‌‌! - DEAD BODY IDENTITY REVEALED

ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವ ಯಾರದ್ದು ಎಂಬುದು ಪೊಲೀಸ್​ ತನಿಖೆ ವೇಳೆ ಬಹಿರಂಗಗೊಂಡಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

DEAD BODY IDENTITY REVEALED
ಕೋಣನಕುಂಟೆ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Feb 7, 2025, 11:56 AM IST

ಬೆಂಗಳೂರು: ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ದಿನಸಿ ಮಳಿಗೆಯೊಂದರ ನೆಲಮಹಡಿಯಲ್ಲಿ ಕಳೆದ ವರ್ಷ ಡಿಸೆಂಬರ್​​ 24ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವ ಕುರಿತಂತೆ ತನಿಖೆ ನಡೆಸಿದ ಪೊಲೀಸರು ಅದು ಕುಖ್ಯಾತ ಕಳ್ಳನ ಮೃತದೇಹ ಎಂಬುದನ್ನು ಪತ್ತೆಹಚ್ಚಿದ್ದಾರೆ.

ಹತ್ಯೆಯಾದ ರೀತಿ ಪತ್ತೆಯಾಗಿದ್ದ ಶವವು ಕೇರಳದ ಕುಖ್ಯಾತ ಖದೀಮ ವಿಷ್ಣು ಪ್ರಶಾಂತ್ ಎಂಬಾತನದ್ದು ಎಂದು ಗುರುತಿಸಲಾಗಿದೆ. ಈತನ ಹಿನ್ನೆಲೆಯನ್ನು ಕೆದಕಿದಾಗ ಆತ ಕೇರಳ, ತಮಿಳುನಾಡಿನಲ್ಲಿ ಸುಮಾರು 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಕೋಣನಕುಂಟೆ ಪೊಲೀಸರು ಕಂಡುಕೊಂಡಿದ್ದಾರೆ.

ಪ್ರಕರಣದ ಬಗ್ಗೆ ಡಿಸಿಪಿ ಲೊಕೇಶ್ ಜಗಲಾಸರ್ ಮಾಹಿತಿ (ETV Bharat)

ಕೈ ಮೇಲಿದ್ದ ಟ್ಯಾಟು ನೀಡಿದ ಸುಳಿವು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕೇರಳ ಪೊಲೀಸರಿಂದ ವಿಷ್ಣು ಬಂಧಿತನಾಗಿದ್ದ. ಒಂದು ವರ್ಷ ಜೈಲಿನಲ್ಲಿದ್ದು ಬಳಿಕ ಜಾಮೀನಿನ ಮೇರೆಗೆ ಹೊರ ಬಂದು ಕಳ್ಳತನ ಕಾಯಕ ಮುಂದುವರೆಸಿದ್ದ. ಬಂಧನ ಭೀತಿಯಿಂದ ಕೇರಳದಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಡಿ.24ರಂದು ಕೋಣನಕುಂಟೆ ಕ್ರಾಸ್ ಬಳಿಯಿರುವ ಬ್ರ್ಯಾಂಡ್ ಫ್ಯಾಷನ್ ಮಳಿಗೆಯ ನೆಲಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಮೃತನ ಜೇಬಿನಲ್ಲಿ ಕದ್ದ ಮೊಬೈಲ್ ಪತ್ತೆಯಾಗಿತ್ತು. ಅಸಲಿ ಮಾಲೀಕರಿಗೆ ಪೋನ್ ಮಾಡಿದಾಗ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಹೇಳಿದ್ದರು‌‌. ಮೃತನ ಕೈ ಮೇಲಿದ್ದ ಟ್ಯಾಟು ಹಾಗೂ ಮೃತನ ಭಾವಚಿತ್ರ ಸಮೇತ ಕೇರಳ ಪೊಲೀಸರಿಗೆ ಕಳುಹಿಸಿದಾಗ ಕುಖ್ಯಾತ ಖದೀಮವೆಂಬುದು ಗೊತ್ತಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧನ ಭೀತಿಯಿಂದ ಕೇರಳ, ತಮಿಳುನಾಡು ಓಡಾಡಿಕೊಂಡು ಬೆಂಗಳೂರಿಗೆ ಬಂದು ದಿನಸಿ ಮಳಿಗೆಯ ನೆಲಮಹಡಿಗೆ ಹೇಗೆ ಬಂದ? ಯಾರಾದರೂ ಹತ್ಯೆ ಮಾಡಿದ್ದರಾ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶವ ದೊರೆತಿರುವ ಬಗ್ಗೆ ಪೋಷಕರಿಗೆ ತಿಳಿಸಿದರೆ, ಅವರು ಮಗನ ಶವ ಸ್ವೀಕರಿಸಲು ತಿರಸ್ಕರಿಸಿದ್ದಾರೆ. ಹೀಗಾಗಿ, ಪೊಲೀಸರೇ ಅಂತ್ಯಸಂಸ್ಕಾರ ನೇರವೇರಿಸಿದ್ದಾರೆ. ಸದ್ಯ ಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿಗೆ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: 20 ವರ್ಷಗಳ ಹಿಂದೆ ಮೃತಪಟ್ಟ ಮಹಿಳೆಯ ಮರುಸೃಷ್ಟಿ; 8 ಎಕರೆ ಜಮೀನು ವರ್ಗಾವಣೆ ಮಾಡಿದ್ದ ಗ್ಯಾಂಗ್ ಅರೆಸ್ಟ್​

''ಡಿ.24ರಂದು ಪತ್ತೆಯಾಗಿದ್ದ ಅಪರಿಚಿತ ಶವ ಸಂಬಂಧ ಮೃತನ ಹಿನ್ನೆಲೆ ಭೇದಿಸಲಾಗಿದೆ. ಕೇರಳ, ತಮಿಳುನಾಡಿನಲ್ಲಿ 30ಕ್ಕಿಂತ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ನಗರದ ಮಳಿಗೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು ಹೇಗೆ ಎಂಬುದರ ಬಗ್ಗೆ ಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು'' ಎಂದು ದಕ್ಷಿಣ ವಿಭಾಗದ ಡಿಸಿಪಿ ಲೊಕೇಶ್ ಜಗಲಾಸರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಹಣಕಾಸಿನ ವಿಚಾರಕ್ಕೆ ಯುವಕನನ್ನು ಹತ್ಯೆ ಮಾಡಿದ ನಾಲ್ವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.