ETV Bharat / state

ಶಿಕ್ಷಣ ಸಿಕ್ಕಿದ್ದರಿಂದ ಸಿಎಂ ಆದೆ, ಇಲ್ಲದಿದ್ದರೆ ಎಮ್ಮೆ ಮೇಯಿಸಬೇಕಿತ್ತು: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಜಾತಿ ವ್ಯವಸ್ಥೆಯ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದ ಸಿಎಂ‌ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು.

CM SIDDARAMAIAH
ಸಿಎಂ‌ ಸಿದ್ದರಾಮಯ್ಯ (IANS)
author img

By ETV Bharat Karnataka Team

Published : Jun 19, 2024, 4:18 PM IST

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ವೈದ್ಯಕೀಯ ಶಿಕ್ಷಣ ಪಡೆದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿಗಳು ಇಂಥ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಎಸ್​ಎಸ್ಎಲ್​ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ 'ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು' ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅಂದಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದರು.

I got a chance to become CM only because I got education, otherwise I would have had to herd buffaloes: CM
ಸನ್ಮಾನ ಕಾರ್ಯಕ್ರಮದಲ್ಲಿ ಸಿಎಂ ಜೊತೆ ಮಾತು (ETV Bharat)

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವೆಡೆ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆಯ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ ಎಂದು ಹೇಳಿದರು.

ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತವಾಗಬೇಕಾಗಿತ್ತು. ಬುದ್ಧ, ಬಸವಣ್ಣ ಎಷ್ಟೋ ಶತಮಾನಗಳ ಹಿಂದೆಯೇ ಜಾತಿ ವ್ಯವಸ್ಥೆಯನ್ನು ಅಳಿಸಲು ಶ್ರಮಿಸಿದರು. ಆದರೆ, ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಎಸ್​ಎಸ್ಎಲ್​ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ (ETV Bharat)

ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ ಮೌಢ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವಮಾನವರಾಗಿ, ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದು ಕಿವಿಮಾತು ಹೇಳಿದರು.

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ. ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ.96ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ.100ರಷ್ಟು ಅಂಕ ಪಡೆಯಬೇಕು ಎಂದು ಕರೆ ನೀಡಿದರು.

ಹೆಣ್ಣು ಮಕ್ಕಳ ಪ್ರಗತಿ ಖುಷಿ ನೀಡಿದೆ: ಈ ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣದ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗುತ್ತಿದೆ ಎಂದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ಸಿಎಂ ಅವರ ಕನಸು ಮತ್ತು ಕಾಳಜಿಯ ಕಾರಣಕ್ಕೆ ರಾಜ್ಯದಲ್ಲಿ ಮೊರಾರ್ಜಿ ದೇಸಾಯಿ ಶಾಲೆಗಳು, ಆಶ್ರಮ ಶಾಲೆಗಳು, ವಸತಿ ಶಾಲೆಗಳು ಹೆಚ್ಚೆಚ್ಚು ಆರಂಭಗೊಂಡು ದಲಿತ, ಹಿಂದುಳಿದ, ಆದಿವಾಸಿ ಮತ್ತು ಬುಡಕಟ್ಟು ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ ಪ್ರಗತಿಗೆ ನೆರವಾಗುತ್ತಿದ್ದಾರೆ ಎಂದು ಹೇಳಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಸುದಾಮ್ ದಾಸ್ ಮತ್ತು ಇಲಾಖಾ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.

ಇದನ್ನೂ ಓದಿ: ಬಸ್‌ ನಿಲ್ದಾಣದ ಮಳಿಗೆಗಳಲ್ಲಿ ಅವಧಿ ಮೀರಿದ ಆಹಾರ ಮಾರಾಟ: ಮಾಲೀಕರಿಗೆ ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ - CM office warning

ETV Bharat Logo

Copyright © 2024 Ushodaya Enterprises Pvt. Ltd., All Rights Reserved.