ETV Bharat / state

ರಸ್ತೆ ಅಪಘಾತಗಳಿಗೆ ಕಾರಣರಾಗುವ ಚಾಲಕರಿಗೆ ಕನಿಷ್ಠ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ ಮಾಡಿದಂತೆ : ಹೈಕೋರ್ಟ್ - Road accident

ಕಾರಿನ ಚಾಲಕನ ಸಾವಿಗೆ ಕಾರಣವಾಗಿದ್ದ ಸವಾರನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಶಿಕ್ಷೆಯನ್ನು ಹೈಕೋರ್ಟ್​ ರದ್ದುಗೊಳಿಸಲು ನಿರಾಕರಿಸಿದೆ.

High court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : May 8, 2024, 3:09 PM IST

ಬೆಂಗಳೂರು : ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾದವರಿಗೆ ಕನಿಷ್ಠ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅಜಾಗರೂಕತೆಯಿಂದ ಆಂಬ್ಯುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿದ್ದ ಚಾಲಕನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿದೆ.

ಶಿಕ್ಷೆಯನ್ನು ಖಚಿತಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ತಾಲೂಕಿನ ಸಂತೋಷ್ ಎಂಬುವರು ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ರಸ್ತೆ ಅಪಘಾತದಿಂದ ಜೀವ ಕಳೆದುಕೊಳ್ಳುವಂತಹ ಪ್ರಕರಣಗಳಲ್ಲಿ ಕನಿಷ್ಠ ಪ್ರಮಾಣದ ಶಿಕ್ಷೆ ಮತ್ತು ಕೆಲ ರೂ. ಗಳ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರ ಕುಟುಂಬಕ್ಕೆ ಅನ್ಯಾಯವೆಸಗಿದಂತಾಗಲಿದೆ. ಅಲ್ಲದೆ, ಚಾಲಕರ ಅಜಾಗರೂಕ ಚಾಲನೆಯನ್ನು ಪ್ರೋತ್ಸಾಹಿಸಿದಂತಾಗಲಿದೆ. ಜತೆಗೆ, ಅವರ ವಾಹನಗಳನ್ನು ಸಂಚಾರ ನಿಯಮಗಳನ್ನು ಪಾಲಿಸದೆ ನಿರ್ಲಕ್ಷ್ಯ ಹೆಚ್ಚಳವಾಗಲು ಕಾರಣವಾಗಲಿದೆ. ಅಲ್ಲದೆ ಮನುಷ್ಯನ ಜೀವದ ಮೌಲ್ಯಕ್ಕೆ ಬೆಲೆಯೇ ಇಲ್ಲದಂತಾಗಲಿದೆ ಎಂದು ಪೀಠ ತಿಳಿಸಿದೆ.

ಪ್ರಕರಣದ ಗಂಭೀರತೆ ಮತ್ತು ಸಾಕ್ಷ್ಯಾಧಾರಗಳನ್ನು ಪರಿಗಣಿಸಿರುವ ವಿಚಾರಣಾ ನ್ಯಾಯಾಲಯ ಸರಿಯಾದ ಕಾನೂನು ಪ್ರಕಾರವೇ ಶಿಕ್ಷೆ ವಿಧಿಸಿದೆ. ಈ ಶಿಕ್ಷೆ ಅತ್ಯಂತ ಕಠಿಣವೂ ಅಲ್ಲ ಮತ್ತು ಸರಳವೂ ಅಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್​ ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನಲೆ : ಅರ್ಜಿದಾರ ತಾನು ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್ ವಾಹನವನ್ನು 2011ರ ಏಪ್ರಿಲ್ 19ರಂದು ಮೂಡಿಗೆರೆಯಿಂದ ಮಂಗಳೂರು ಕಡೆಗೆ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದರು. ಈ ವೇಳೆ ಬಿದರಳ್ಳಿ ಎಂಬ ಗ್ರಾಮದಲ್ಲಿ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇತರೆ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಪ್ರಕರಣ ದಾಖಲಿಸಿಕೊಂಡಿದ್ದ ಮೂಡಿಗೆರೆ ಪೊಲೀಸರು ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯ ಆರೋಪಿಗೆ 6 ತಿಂಗಳು ಸಾಧಾರಣ ಶಿಕ್ಷೆ ಮತ್ತು 4 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು. ಇದನ್ನು ಅರ್ಜಿದಾರರು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸದೆ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಪೆಪ್ಪರ್ ಸ್ಪ್ರೇ ಅಪಾಯಕಾರಿ ಆಯುಧ ಎಂದ ಹೈಕೋರ್ಟ್: ಪ್ರಕರಣ ರದ್ದತಿಗೆ ನಿರಾಕರಣೆ - Pepper Spray

ETV Bharat Logo

Copyright © 2024 Ushodaya Enterprises Pvt. Ltd., All Rights Reserved.