ETV Bharat / state

ಸ್ವಾಮೀಜಿ ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ್ - OPPOSITION LEADER R ASHOK

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಆದರೆ, ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್​ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

R Ashok with Kumar Chandrashekaranatha Swamiji
ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಜೊತೆ ಆರ್​. ಅಶೋಕ್​ (ETV Bharat)
author img

By ETV Bharat Karnataka Team

Published : Nov 29, 2024, 7:54 PM IST

ಬೆಂಗಳೂರು: "ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ, ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ" ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, "ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ. ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ?" ಎಂದು ಪ್ರಶ್ನಿಸಿದರು.

"ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ದೇವೇಗೌಡರನ್ನೇ ಖರೀದಿ ಮಾಡುತ್ತೇನೆ ಎಂದು ಸಚಿವ ಜಮೀರ್ ಹೇಳಿದ್ದರು. ಆದರೆ, ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ. ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ" ಎಂದು ಎಚ್ಚರಿಕೆ ನೀಡಿದರು.

"ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ. ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ. ಈಗ ಒಕ್ಕಲಿಗ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಸಮುದಾಯದ ವಿರುದ್ಧ ಸರ್ಕಾರ ಈ ರೀತಿ ದ್ವೇಷ ಕಾರುತ್ತಿರುವುದನ್ನು ಸಮುದಾಯದ ಜನರು ಗಮನಿಸಬೇಕಿದೆ. ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ" ಎಂದರು.

ಇದನ್ನೂ ಓದಿ: ಒಕ್ಕಲಿಗ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.