ETV Bharat / state

ಸೆಮಿಕಂಡಕ್ಟರ್ ಉದ್ಯಮ: ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೂ ಸಬ್ಸಿಡಿ ಕೊಡಲಿ- ಎಂ.ಬಿ.ಪಾಟೀಲ್‌ - M B Patil - M B PATIL

ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ಮಾದರಿಯಲ್ಲೇ ರಾಜ್ಯಕ್ಕೂ ಸಬ್ಸಿಡಿ ಕೊಟ್ರೆ ನಾವೂ ನಮ್ಮ ಪಾಲಿನ ಸಬ್ಸಿಡಿ ನೀಡುತ್ತೇವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

INVESTMENT IN SEMICONDUCTOR SECTOR
ಕಾಂಗ್ರೆಸ್​ ಪಕ್ಷದ ಮುಖಂಡರು (IANS)
author img

By ETV Bharat Karnataka Team

Published : Jun 19, 2024, 7:13 PM IST

ಬೆಂಗಳೂರು: ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆಯೇ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ, ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧವಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್ ಕಂಪನಿಗೆ ಕೇಂದ್ರ ಸರ್ಕಾರ ಶೇ.50ರಷ್ಟು ಸಬ್ಸಿಡಿ ಕೊಟ್ಟಿದೆ. ಇದರ ಜೊತೆಗೆ ಗುಜರಾತ್ ಸರ್ಕಾರ ಶೇ.20ರಷ್ಟು ಸಬ್ಸಿಡಿ ನೀಡಿದೆ. ಈ ರೀತಿ ಕರ್ನಾಟಕ ಸರ್ಕಾರ ಸಬ್ಸಿಡಿ ಕೊಡಲು ಸಿದ್ಧವಿದೆಯೇ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ನಿನ್ನೆ ಪ್ರಶ್ನಿಸಿದ್ದರು.

ಇದಕ್ಕೆ 'ಎಕ್ಸ್' ಜಾಲತಾಣದಲ್ಲಿ ಪ್ರತಿಕ್ರಿಯೆ‌ ನೀಡಿರುವ ಸಚಿವರು, 'ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ. ನಂತರ ರಾಜ್ಯದ ಪಾಲಿನ ಶೇ.20ರಷ್ಟು ಸಬ್ಸಿಡಿ ನೀಡುತ್ತೇವೆ. ಈ ಭರವಸೆಯಿಂದ‌ ಕುಮಾರಸ್ವಾಮಿ ಹಿಂದೆ‌ ಸರಿಯುವುದಿಲ್ಲ ಎನ್ನುವ ವಿಶ್ವಾಸ ಕೂಡ ಇದೆ‌' ಎಂದಿದ್ದರು.

ಯಾವುದೇ ಉದ್ದಿಮೆ ಇರಲಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೂ ಸಮಾನ ನೀತಿ ಅನುಸರಿಸಬೇಕು ಎನ್ನುವುದು ಕರ್ನಾಟಕದ ಪ್ರತಿಪಾದನೆ. ಇದು ಸಹಜ ನ್ಯಾಯದ ತತ್ವವಾಗಿದ್ದು, ಇದನ್ನು ಕುಮಾರಸ್ವಾಮಿ ಅವರು ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ. ಆದರೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್ ಪರ ಧೋರಣೆ ತೋರಿಸುತ್ತಿದೆ. ನಾವು ಇದನ್ನಷ್ಟೇ ಪ್ರಶ್ನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸೆಮಿಕಂಡಕ್ಟರ್ಸ್​, ನಿರ್ಣಾಯಕ ಖನಿಜಗಳ ಮೇಲೆ ಸಹಕಾರ ಹೆಚ್ಚಿಸಲು ಭಾರತ - ಅಮೆರಿಕ ಮಧ್ಯೆ ಒಪ್ಪಂದ - India US Agreement

ETV Bharat Logo

Copyright © 2025 Ushodaya Enterprises Pvt. Ltd., All Rights Reserved.