ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಆರೋಪ ಹಿನ್ನೆಲೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕೆಲವೇ ಕ್ಷಣದಲ್ಲಿ ಅವರು ಮಾಧ್ಯಮಗೋಷ್ಟಿ ನಡೆಸಲಿದ್ದು, ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದಲ್ಲಿನ 187 ಕೋಟಿ ಅಕ್ರಮ ಆರೋಪ ಪ್ರಕರಣ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಬಿ.ನಾಗೇಂದ್ರ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಅಲ್ಲದೇ, ಈ ಕುರಿತು ರಾಜಪಾಲರಿಗೂ ದೂರು ನೀಡಿದೆ.
ಹೀಗಾಗಿ ಪಕ್ಷ ಹಾಗೂ ಸರ್ಕಾರಕ್ಕೆ ಆಗುವ ಮುಜುಗರ ತಪ್ಪಿಸಲು ಹಾಗೂ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಸಾಧ್ಯತೆ ಇದೆ. ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದು, ನಿನ್ನೆ ಇಬ್ಬರನ್ನು ಬಂಧಿಸಿದೆ. ಮತ್ತೊಂದೆಡೆ, ಸಿಬಿಐ ಸಹ ಎಫ್ಐಆರ್ ದಾಖಲಿಸಿಕೊಂಡಿದೆ.
ಇದನ್ನೂ ಓದಿ: ಪಕ್ಷ, ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಣೆಯಿಂದ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ: ಡಿ.ಕೆ. ಶಿವಕುಮಾರ್