ETV Bharat / state

ದಸರಾ ಡ್ರೋನ್​ ಶೋ ಅನಧಿಕೃತ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ಕ್ರಮ - MYSORE DRONE SHOW

ಅನುಮತಿ ಪಡೆಯದೇ ಡ್ರೋನ್‌ ಹಾರಿಸಿ ಚಿತ್ರೀಕರಣ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೆಸ್ಕ್​​ ಎಚ್ಚರಿಸಿದೆ.

illigal Captured mysore dasara Drone show video will be punishble offense
ಡ್ರೋನ್​ ಶೋ (ETV Bharat)
author img

By ETV Bharat Karnataka Team

Published : Oct 9, 2024, 2:06 PM IST

Updated : Oct 9, 2024, 3:02 PM IST

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಡ್ರೋನ್​ ಶೋ ನೋಡುಗರ ಕಣ್ಮನ ಸೆಳೆಯಿತು. ಆದರೆ, ಈ ಡ್ರೋನ್​ ಶೋವನ್ನು ಕೆಲವು ಖಾಸಗಿ ಸಂಸ್ಥೆ ಮತ್ತು ವ್ಯಕ್ತಿಗಳು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವುದು ಬೆಳಕಿಗೆ ಬಂದಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೆಸ್ಕ್​​ ಎಚ್ಚರಿಕೆ ನೀಡಿದೆ.

ಈ ಬಾರಿ ಮೈಸೂರು ದಸರಾದಲ್ಲಿ ಅ.6 ಮತ್ತು 7ರಂದು ಅತಿ ದೊಡ್ಡ ಡ್ರೋನ್​ ಪ್ರದರ್ಶನ ನಡೆಸಲಾಗಿತ್ತು. ಈ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಪಡೆದುಕೊಂಡಿದೆ. ಕಾರ್ಯಕ್ರಮದ ವೇಳೆ ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಡ್ರೋನ್‌ಗಳನ್ನು ಹಾರಿಸಿ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುತ್ತಿರುವುದು ಹಾಗೂ ಡ್ರೋನ್‌ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಹರಿಬಿಡುತ್ತಿರುವುದು ಕಂಡುಬಂದಿದೆ.

ಕಠಿಣ ಕಾನೂನು ಕ್ರಮದ ಎಚ್ಚರಿಕೆ: ಸಂಬಂಧಿಸಿದ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೇ ಡ್ರೋನ್‌ಗಳನ್ನು ಹಾರಿಸಿ ದೃಶ್ಯ ಚಿತ್ರೀಕರಿಸುವುದು ಮತ್ತು ಡ್ರೋನ್‌ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿ ಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸೆಸ್ಕ್​ ‌ತಿಳಿಸಿದೆ.

ಈಗಾಗಲೇ ಚಿತ್ರೀಕರಿಸಿದವರ ವಿರುದ್ಧವೂ ಕ್ರಮ: ಈಗಾಗಲೇ ಯಾರೆಲ್ಲ ಅನಧಿಕೃತವಾಗಿ ಪ್ರದರ್ಶನವನ್ನು ಖಾಸಗಿಯಾಗಿ ಡ್ರೋನ್ ಮೂಲಕ ಚಿತ್ರೀಕರಿಸಿದ್ದಾರೆ ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೇವಲ ಡ್ರೋನ್ ಪ್ರದರ್ಶನ ಮಾತ್ರವಲ್ಲದೇ ದಸರಾ ನಿಮಿತ್ತ ಮೈಸೂರು ನಗರದಾದ್ಯಂತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರದ ದೃಶ್ಯಗಳನ್ನು ಸಹ ಡ್ರೋನ್ ಮೂಲಕ ಅನಧಿಕೃತವಾಗಿ ಚಿತ್ರೀಕರಿಸುವುದು ಕೂಡ ಅಪರಾಧವಾಗಿದೆ. ಹಾಗಾಗಿ, ಯಾವುದೇ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್ ಗಳ ಮೂಲಕ ಅನಧಿಕೃತ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ.

ಇದನ್ನೂ ಓದಿ: ನವರಾತ್ರಿ ಸಡಗರ: ಚಾಮುಂಡಿ ತಾಯಿಯ ದರ್ಶನಕ್ಕೆ ನಾಡಿನೆಲ್ಲೆಡೆಯಿಂದ ಭಕ್ತರ ಆಗಮನ

Last Updated : Oct 9, 2024, 3:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.