ರಾಮನಗರ: ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ - DIARRHEA - DIARRHEA
ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
Published : May 11, 2024, 1:33 PM IST
ರಾಮನಗರ: ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಇದೇ ಮೇ 10ರಂದು (ನಿನ್ನೆ, ಶುಕ್ರವಾರ) ನಡೆದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಮಧ್ಯಾಹ್ನ ಊಟ ಮಾಡಿದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. 8 ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರಿಗೆ ಹೊಟ್ಟೆ ನೋವು, ವಾಂತಿ, ಭೇದಿಯಾಗಿದೆ. ಎಲ್ಲರನ್ನೂ ರಾಮನಗರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ನಿನ್ನೆ ರಾತ್ರಿ ಸುಮಾರು 8 ಗಂಟೆಗೆ 25ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಬೇಸಿಗೆ ಕಾರಣ ಆಹಾರ ಸೇವಿಸಿದ ನಂತರ ವ್ಯತ್ಯಾಸವಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಅಸ್ವಸ್ಥರಾಗಿರುವ ಮಕ್ಕಳಿಗೂ ಯಾವುದೇ ತೊಂದರೆ ಇಲ್ಲ ಎಂದು ಎಂದು ಜಿಲ್ಲಾ ಆರ್.ಎಂ.ಒ. ಡಾ. ನಾರಾಯಣಸ್ವಾಮಿ ತಿಳಿಸಿದರು.