ETV Bharat / state

ಪ್ರಾಣಿಗಳ ಆರೈಕೆ, ನಿರ್ವಹಣೆ ವಿಷಯದಲ್ಲಿ ಡಿಪ್ಲೊಮಾ ಕೋರ್ಸ್ ಆರಂಭಿಸಲು ತಾತ್ವಿಕ ಒಪ್ಪಿಗೆ - Animal Care Management Diploma - ANIMAL CARE MANAGEMENT DIPLOMA

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ ವಿಷಯದಲ್ಲಿ 10 ತಿಂಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ.

ಮೃಗಾಲಯ ಪ್ರಾಧಿಕಾರದ ಸಭೆ
ಮೃಗಾಲಯ ಪ್ರಾಧಿಕಾರದ ಸಭೆ (ETV Bharat)
author img

By ETV Bharat Karnataka Team

Published : Jun 10, 2024, 6:09 PM IST

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ (Animal Care and Management) ವಿಷಯದಲ್ಲಿ 10 ತಿಂಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಇಂದು ಮೃಗಾಲಯ ಪ್ರಾಧಿಕಾರದ ಸಭೆ ನಡೆಸಿದ ಸಚಿವರು, ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಈ ಕೋರ್ಸ್ ಆರಂಭಿಸಲು ತಾತ್ವಿಕ ಅನುಮೋದನೆ ಕೊಟ್ಟಿದ್ದಾರೆ.

ಈ ಡಿಪ್ಲೊಮಾ ಪದವಿ ಪಡೆದವರಿಗೆ ಉದ್ಯೋಗಾವಕಾಶಗಳು ಲಭಿಸುವಂತಿರಬೇಕು. ದೀರ್ಘಕಾಲ ಈ ಕೋರ್ಸ್ ಪ್ರಾಮುಖ್ಯತೆ ಪಡೆಯುವಂತಿರಬೇಕು, ಈ ನಿಟ್ಟಿನಲ್ಲಿ ಪಠ್ಯಕ್ರಮ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕ ಚರ್ಚಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸಚಿವರು ಸೂಚಿಸಿದರು.

ಪ್ರಾಣಿಗಳ ಆರೈಕೆ ಹಾಗೂ ನಿರ್ವಹಣೆ ಮಾಡಲು ಆಸಕ್ತ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ವನ್ಯಜೀವಿ ಮತ್ತು ಸಾಕುಪ್ರಾಣಿಗಳ ಸಂರಕ್ಷಣೆ, ನಿರ್ವಹಣೆ, ಆರೈಕೆ ಕುರಿತಂತೆ ಅಗತ್ಯ ಜ್ಞಾನ ಮತ್ತು ಕೌಶಲ ನೀಡುವನ್ನು ಈ ಡಿಪ್ಲೊಮಾ ಕೋರ್ಸ್ ಕಲಿಸಿಕೊಡಲಿದೆ. ಕೋರ್ಸ್​ ಪಡೆದರು ಮೃಗಾಲಯಗಳಲ್ಲಿ, ಪುನರ್ವಸತಿ ಕೇಂದ್ರಗಳಲ್ಲಿ ಪ್ರಾಣಿಪಾಲಕರಾಗಿ ಕೆಲಸ ನಿರ್ವಹಿಸಬಹುದು. ಅದೇ ರೀತಿ ಖಾಸಗಿಯಾಗಿಯೂ ಸಾಕು ಪ್ರಾಣಿಗಳ ಆರೈಕೆ ಕೇಂದ್ರಗಳನ್ನು ನಡೆಸಬಹುದು. ಶಾಲಾ, ಕಾಲೇಜುಗಳಲ್ಲಿ ಪ್ರಾಣಿ ಆರೈಕೆಯ ತರಬೇತಿ ನೀಡಬಹುದು ಎಂದು ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿ: ಪ್ರವಾಸಿಗರಿಗೆ ಖುಷಿ ಸುದ್ದಿ: ಬನ್ನೇರುಘಟ್ಟದಲ್ಲಿ ಮಾಸಾಂತ್ಯಕ್ಕೆ ಚಿರತೆ ಸಫಾರಿ ಆರಂಭ - Leopard Safari

ETV Bharat Logo

Copyright © 2025 Ushodaya Enterprises Pvt. Ltd., All Rights Reserved.