ETV Bharat / state

ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಹತ್ಯೆ, ಪೊಲೀಸರಿಂದ ತನಿಖೆ - Double Murder in Bengaluru - DOUBLE MURDER IN BENGALURU

ಸಿಲಿಕಾನ್​ ಸಿಟಿಯಲ್ಲಿ ಪ್ರತ್ಯೇಕ 2 ಬರ್ಬರ ಹತ್ಯೆಗಳು ನಡೆದಿದ್ದು, ಪೊಲೀಸ್​ ತನಿಖೆ ನಡೆಯುತ್ತಿದೆ.

ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಹತ್ಯೆ
ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಹತ್ಯೆ (ETV Bharat)
author img

By ETV Bharat Karnataka Team

Published : Jun 24, 2024, 11:25 AM IST

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ಸಂಜೆ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯ ಸಮೀಪದ ಪಾರ್ಕ್​ನಲ್ಲಿ ನಡೆದಿದೆ.

ಮಲ್ಲೇಶ್ವರಂನ ಎಂ.ಡಿ.ಬ್ಲಾಕ್ ನಿವಾಸಿ ಪನ್ನಿರ್ ಸೆಲ್ವಂ‌ (37) ಹತ್ಯೆಯಾದ ವ್ಯಕ್ತಿ. ಗಾರೆ ಕೆಲಸ ಮಾಡಿಕೊಂಡಿದ್ದ ಪನ್ನೀರ್ ಸೆಲ್ವಂ ಪತ್ನಿ ಹಾಗೂ ನಾಲ್ವರು ಮಕ್ಕಳೊಂದಿಗೆ ವಾಸವಾಗಿದ್ದ. ಭಾನುವಾರ ಸಂಜೆ ಪನ್ನೀರ್ ಸೆಲ್ವಂ ಹಾಗೂ ಇನ್ನಿಬ್ಬರ ನಡುವೆ ಗಲಾಟೆ ನಡೆದಿದ್ದು, ಇದೇ ವೇಳೆ ಆತನ ಮೇಲೆ ಹಲ್ಲೆ ನಡೆಸಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಸದ್ಯ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯುವಕನ ಬರ್ಬರ ಹತ್ಯೆ: ತಲೆಗೆ ರಾಡ್​ನಿಂದ ಹೊಡೆದು ಬಾಲಕನನ್ನು ಹತ್ಯೆ ಮಾಡಿರುವ ಘಟನೆ ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ನಡೆದಿದೆ. ಶನಿವಾರ(24) ಘಟನೆ ನಡೆದಿದ್ದು, ಅಬ್ಬಿಗೆರೆ ನಿವಾಸಿ​​ 17 ವರ್ಷದ ಅಪ್ರಾಪ್ತ ಹತ್ಯೆಯಾದ ದುರ್ದೈವಿ. ಶನಿವಾರ ರಾತ್ರಿ ಅಬ್ಬಿಗೆರೆ ಸಮೀಪದ ಖಾಲಿ ಸ್ಥಳದಲ್ಲಿ ಬಾಲಕನ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ಯಾವುದೋ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದ್ದು, ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು: ಮಾನಸಿಕ ಖಿನ್ನತೆಯಿಂದ ದಕ್ಷಿಣ ಕನ್ನಡ ಮೂಲದ ಯೋಗ ಶಿಕ್ಷಕಿ ಆತ್ಮಹತ್ಯೆ - Yoga teacher suicide

ETV Bharat Logo

Copyright © 2024 Ushodaya Enterprises Pvt. Ltd., All Rights Reserved.