ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ - Indefinite strike at Freedom Park

author img

By ETV Bharat Karnataka Team

Published : 3 hours ago

ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿ ನಾಳೆಯಿಂದ ಫ್ರೀಡಂಪಾರ್ಕ್​ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲಿದ್ದಾರೆ.

ಫ್ರೀಡಂಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕುರಿತು ಕರ್ನಾಟಕ ರಾಜ್ಯ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ಅವರಿಂದ ಮಾಹಿತಿ
ಫ್ರೀಡಂಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕುರಿತು ಕರ್ನಾಟಕ ರಾಜ್ಯ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ಅವರಿಂದ ಮಾಹಿತಿ (ETV Bharat)

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​​​ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ನಾಳೆಯಿಂದ ನಗರದ ಫ್ರೀಡಂಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.

ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಗ್ರಾಮೀಣಾಭಿವೃದ್ಧಿ ಇಲಾಖೆಯ ಪಿಡಿಒ, ಲೆಕ್ಕ ಸಹಾಯಕರು, ಲೆಕ್ಕ ಸಿಬ್ಬಂದಿಗಳು, ಡೇಟಾ ಎಂಟ್ರಿ ಆಪರೇಟರ್​ಗಳು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ.

ಕರ್ನಾಟಕ ರಾಜ್ಯ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು (ETV Bharat)

7 ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡಬೇಕು. ಜಿಲ್ಲೆಯಲ್ಲಿ ಸ್ವಇಚ್ಚೆ ಇಲ್ಲದೇ ಸಾರ್ವಜನಿಕ ಹಿತಾಸಕ್ತಿ ಹಿತದೃಷ್ಟಿ ತೋರದೇ ವರ್ಗಾವಣೆ ಮಾಡಬಾರದು ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆ ಪಡೆಯಬೇಕು.

ರಾಜ್ಯದ ಎಲ್ಲಾ ಪಂಚಾಯತ್​​ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್​ ಗ್ರೂಪ್​​ ಬಿ. ದರ್ಜೆಗೆ ಉನ್ನತಿ ಹಾಗೂ ಗ್ರಾಮ ಪಂಚಾಯಿತಿಗೆ ಅಗತ್ಯವಿರುವ ಕಾರ್ಯದರ್ಶಿಗಳು ಲೆಕ್ಕ ಸಹಾಯಕರು ಹಾಗೂ ಅಗತ್ಯವಿದ್ದಷ್ಟು ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ನೇಮಿಸಬೇಕು. ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಳಮೀಸಲಾತಿ ಜಾರಿ ಮಾಡದ ರಾಜ್ಯ ಸರ್ಕಾರದ ವಿರುದ್ಧ ರಾಯಚೂರಲ್ಲಿ ಬಂದ್​ - Raichur Bandh

ETV Bharat Logo

Copyright © 2024 Ushodaya Enterprises Pvt. Ltd., All Rights Reserved.