ETV Bharat / state

ರಾಜ್ಯದಲ್ಲಿ ಬಿಜೆಪಿ ವಿರುದ್ಧ ಇಂಡಿಯಾ ಒಕ್ಕೂಟದಿಂದ ಒಗ್ಗಟ್ಟಿನ ಹೋರಾಟ: ಡಿ.ಕೆ.ಶಿವಕುಮಾರ್​ - D K Shivakumar - D K SHIVAKUMAR

ಎನ್​ಡಿಎ ಸೋಲಿಸಬೇಕು ಎಂಬ ಉದ್ದೇಶದೊಂದಿಗೆ ರಾಜ್ಯದಲ್ಲಿ ಇಂಡಿಯಾ ಒಕ್ಕೂಟದಿಂದ ಒಗ್ಗಟ್ಟಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

india-block-will-fight-against-bjp-together-in-state-says-dcm-d-k-shivakumar
ರಾಜ್ಯದಲ್ಲಿ ಇಂಡಿಯಾ ಒಕ್ಕೂಟ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತೇವೆ: ಡಿ.ಕೆ.ಶಿವಕುಮಾರ್​
author img

By ETV Bharat Karnataka Team

Published : Apr 2, 2024, 9:37 PM IST

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಇಂಡಿಯಾ ಒಕ್ಕೂಟದಿಂದ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಇಂಡಿಯಾ ಒಕ್ಕೂಟ ಜನ್ಮ ತಾಳಿತು. ಜನ ಬದಲಾವಣೆ ನಿರೀಕ್ಷೆ ಮಾಡುತ್ತಿದ್ದಾರೆ. ಜನ ನಮ್ಮ‌ ಮೇಲಿನ‌ ನಂಬಿಕೆ ಉಳಿಸಲು 10 ಪ್ರಮುಖ ಪಕ್ಷಗಳು ಚರ್ಚೆ ಮಾಡಿದ್ದೇವೆ. ಅವರ ಸಂಖ್ಯೆ ಮುಖ್ಯವಲ್ಲ. ಅವರದೇ ಆದ ಸಿದ್ಧಾಂತ ನಂಬಿಕೊಂಡು ಪಕ್ಷ ನಡೆಸುತ್ತಿದ್ದಾರೆ ಎಂದರು.

ಎನ್​ಡಿಎ ಸೋಲಿಸಬೇಕು ಎಂಬ ಉದ್ದೇಶದೊಂದಿಗೆ ಒಗ್ಗಟ್ಟಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ. ಚುನಾವಣಾ ಬಾಂಡ್​ನಲ್ಲಿ ಬಂದ ತೀರ್ಪು, ತನಿಖಾ ಸಂಸ್ಥೆಗಳ ದುರ್ಬಳಕೆ ಎಲ್ಲದರ ಬಗ್ಗೆ ಚರ್ಚಿಸಿ ಖಂಡಿಸಿದ್ದೇವೆ. ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದೇವೆ. ಬೂತ್ ನಿಂದ ಹಿಡಿದು ರಾಜ್ಯದಲ್ಲಿ ಒಟ್ಟಾಗಿ ಹೋರಾಟ ಮಾಡುತ್ತೇವೆ. ಕೋಮುವಾದಿ ಸರ್ವಾಧಿಕಾರ ವರ್ಸಸ್ ಪ್ರಜಾಪ್ರಭುತ್ವ. ಇದು ನಮ್ಮ ಲೀಡ್ ಲೈನ್ ಆಗಿರಲಿದೆ. 28ಕ್ಕೆ 28 ಸ್ಥಾನವನ್ನೂ ನಾವು ಗೆಲ್ಲುತ್ತೇವೆ ಎಂದು ಇಂಡಿಯಾ ಒಕ್ಕೂಟದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ದೇಶ ಇಕ್ಕಟ್ಟು ಹಾಗೂ ಬಿಕ್ಕಟ್ಟಿನಲ್ಲಿ ಸಿಲುಕಿದೆ. 10 ವರ್ಷ ಬಿಜೆಪಿ ಆಡಳಿತದ ವೈಖರಿ ನೋಡಿದರೆ ಭಯದ ವಾತಾವರಣ ಇದೆ. ಹೀಗಾಗಿ ನಾವು ಈ ಬಾರಿ ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ. ಕೇಜ್ರಿವಾಲ್‌ರನ್ನು ಬಂಧನ ಮಾಡಿದ್ದಾರೆ. ಬಂಧನ ಆಗಿರುವುದು ಪ್ರಜಾಪ್ರಭುತ್ವ, ಫ್ರೀಜ್ ಆಗಿರುವುದು ಸಂವಿಧಾನ. ರಾಜಕೀಯ ದ್ವೇಷ, ಪಿತೂರಿ ನಡೆಯುತ್ತಿದೆ. ರಾಮಮಂದಿರ ಮೂಲಕ ಆಧ್ಯಾತ್ಮಿಕ ಸರ್ವಾಧಿಕಾರಿ ವರ್ತನೆ ತೋರುತ್ತಿದ್ದಾರೆ ಎಂದು ಕಿಡಿಕಾರಿದರು.

ಚುನಾವಣಾ ಬಾಂಡ್ ವಿಚಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಏಕ ಭಾಷೆ, ಬಟ್ಟೆ, ಊಟ, ಏಕ ವ್ಯಕ್ತಿಯ ಮನೋಭಾವನೆ ಇದೆ. ಆ ಮೂಲಕ ದೇಶದ ವಿವಿಧತೆಯನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಕೋರ್ಟ್‌ನಿಂದ ಹಿಡಿದು ಎಲ್ಲರಿಗೂ ಬೆದರಿಕೆ ಹಾಕುತ್ತಿದ್ದಾರೆ. ವಿನಾಶ‌ ಕಾಲದ ಕುರುಹು ಆಗಿದ್ದಾರೆ ಮೋದಿ. ಸರ್ವಾಧಿಕಾರ ತೊಲಗಿಸಿ, ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತೇವೆ. ಬಿಜೆಪಿಯವರೇ ಅಧಿಕಾರ ಬಿಟ್ಟು ತೊಲಗಿ ಎಂದು ನಾವು ಹೇಳಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಭೆಯಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಸಹ ಅಧ್ಯಕ್ಷರಾದ ಐಶ್ವರ್ಯ ಮಹದೇವ್, ಆಪ್​ನ ಪೃಥ್ವಿರೆಡ್ಡಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಬಸವರಾಜು, ಎನ್​ಸಿಪಿ ರಾಜ್ಯಾಧ್ಯಕ್ಷ ಸಿ ಎಸ್ ಇನಾಂದಾರ್, ಸಿಪಿಐ ಎಂಎಲ್ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ ರೊಜೆರಿಯೋ, ರಾಷ್ಟ್ರೀಯ ಜನತಾದಳ ರಾಜ್ಯಾಧ್ಯಕ್ಷ ಯಾಕುಬ್ ಗುಲ್ವಾಡಿ, ಫಾರ್ವರ್ಡ್ ಬ್ಲಾಕ್ ರಾಜ್ಯಾಧ್ಯಕ್ಷ ಶಿವಶಂಕರ್ ಮತ್ತಿತರರು ಇದ್ದರು.

ಇದನ್ನೂ ಓದಿ: ಸರ್ವಾಧಿಕಾರಿ ಆಡಳಿತ ಕೊನೆಗಾಣಿಸಲು ಕಾಂಗ್ರೆಸ್‌ಗೆ ಮತ ನೀಡಿ: ಸಚಿವ ಮಹದೇವಪ್ಪ - Dr H C Mahadevappa

ETV Bharat Logo

Copyright © 2024 Ushodaya Enterprises Pvt. Ltd., All Rights Reserved.