ETV Bharat / state

'ರೇಷ್ಮೆ ಉತ್ಪಾದನೆಯಲ್ಲಿ‌ ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ' - Silk Production In India - SILK PRODUCTION IN INDIA

ಚೀನಾದಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳುವ ಪ್ರಮಾಣ ಕಡಿಮೆಯಾಗಿದೆ. ಪ್ರಸಕ್ತ ವರ್ಷ ಭಾರತ ರೇಷ್ಮೆ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ರೇಷ್ಮೆ ಉತ್ಪಾದನೆಯಲ್ಲಿ‌ ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ
ರೇಷ್ಮೆ ಉತ್ಪಾದನೆ (ETV Bharat)
author img

By ETV Bharat Karnataka Team

Published : Sep 19, 2024, 8:19 AM IST

ಮೈಸೂರು: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಭಾರತ 2023-24ರಲ್ಲಿ ಶೇ.42ರಷ್ಟು ಪಾಲು ಹೊಂದಿದ್ದು, 2028 ಕೋಟಿ ರೂ ಮೌಲ್ಯದ ರೇಷ್ಮೆ ರಪ್ತು ಮಾಡಲಾಗಿದೆ. ಈ ಮೂಲಕ ಪ್ರಪಂಚದಲ್ಲಿಯೇ ಪ್ರಸ್ತುತ ರೇಷ್ಮೆ ಉತ್ಪಾದನೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. 2074ರ ವೇಳೆಗೆ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ ತಿಳಿಸಿದರು.

ನಗರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ 2.63 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪು ನೇರಳೆ ಬೆಳೆಯಲಾಗುತ್ತಿದ್ದು, ಕಚ್ಚಾ ರೇಷ್ಮೆ ಪ್ರಮಾಣವೂ ಏರಿಕೆಯಾಗಿದೆ. 1948ರಲ್ಲಿ ಆರಂಭವಾದ ಕೇಂದ್ರ ರೇಷ್ಮೆ ಮಂಡಳಿಯಡಿ ದೇಶಾದ್ಯಂತ 159 ಘಟಕಗಳಿದ್ದು, 9 ಸಂಶೋಧನಾ ಸಂಸ್ಥೆಗಳು ವಿವಿಧ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಉತ್ಪಾದನೆಯಾಗುತ್ತಿದೆ ಎಂದರು.

ರೇಷ್ಮೆ ಆಮದು ಇಳಿಕೆ: ಚೀನಾದಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೀಗ ಇದರ ಪ್ರಮಾಣ ಇಳಿಕೆಯಾಗಿದೆ. 2022-23 ಹೊರತುಪಡಿಸಿದರೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಆಮದು ಮಾಡಿಕೊಂಡಿಲ್ಲ. ಭಾರತದಿಂದಲೇ ಸುಮಾರು 950 ಮೆಟ್ರಿಕ್ ಟನ್ ರೇಷ್ಮೆ ಗೂಡನ್ನು ರಫ್ತು ಮಾಡಲಾಗಿದೆ. ರೇಷ್ಮೆ ಕೇವಲ ಬಟ್ಟೆ ತಯಾರಿಕೆಗೆ ಮಾತ್ರವಲ್ಲದೆ ಆಹಾರ, ಔಷಧ, ಸೌಂದರ್ಯವರ್ಧಕಗಳ ತಯಾರಿಕೆಗೂ ಬಳಕೆಯಾಗುತ್ತಿದೆ. ಹಿಪ್ಪುನೇರಳೆ ಎಲೆಗಳನ್ನು ಸಕ್ಕರೆ ಕಾಯಿಲೆಗೆ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಇದರಿಂದಾಗಿ ರೈತರಿಗೆ ಹೆಚ್ಚು ಲಾಭವಾಗುತ್ತದೆ. ರೇಷ್ಮೆ ಬೆಳೆಗಾರರಿಗೆ ಈ ನಿಟ್ಟಿನಲ್ಲಿ ಅಗತ್ಯ ತರಬೇತಿ ನೀಡಲಾಗುತ್ತಿದ್ದು, ರೇಷ್ಮೆ ಉಪ ಉತ್ಪನ್ನ ಮಾಡುವವರಿಗೆ ಸ್ಟಾರ್ಟ್‌ಅಪ್ ಆರಂಭಿಸಲು ಉತ್ತೇಜನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ರೇಷ್ಮೆ ಮಂಡಳಿ ಸುದ್ದಿಗೋಷ್ಠಿ
ಕೇಂದ್ರ ರೇಷ್ಮೆ ಮಂಡಳಿ ಸುದ್ದಿಗೋಷ್ಠಿ (ETV Bharat)

ವಾಣಿಜ್ಯ ಬೆಳೆಗಳ ಪೈಪೋಟಿ, ಕೃಷಿ ಪ್ರದೇಶ ಇಳಿಕೆ, ಯುವಕರ ಬದಲಾದ ಆಸಕ್ತಿಯಿಂದಾಗಿ ರೇಷ್ಮೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಇದರಲ್ಲಿ ರಿಯಲ್ ಎಸ್ಟೇಟ್ ಪಾತ್ರವೂ ಇದೆ. ಕೋವಿಡ್‌ನಿಂದಾಗಿಯೂ ರೇಷ್ಮೆ ಉತ್ಪಾದನೆ ಕುಂಠಿತವಾಗಿತ್ತು. ಕಳೆದ ಎರಡು ಮೂರು ವರ್ಷಗಳಿಂದ ಚೇತರಿಕೆಯಾಗಿದೆ ಎಂದು ತಿಳಿಸಿದರು.

ಅಮೃತಮಹೋತ್ಸವ ಸಮಾರಂಭ: ಕೇಂದ್ರ ರೇಷ್ಮೆ ಮಂಡಳಿ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸೆ.20ರಂದು ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಭಾರಿ ಕೈಗಾರಿಕೆ, ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದೇಶಾಂಗ ವ್ಯವಹಾರ, ಜವಳಿ ಖಾತೆ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟ, ರೈಲ್ವೆ, ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಟಿಎಸ್‌ಎಸ್‌ಒ ನಿರ್ದೇಶಕ ಡಾ.ಸೆಲ್ವಕುಮಾರ್, ಸಿಟಿಆರ್‌ಟಿಐ ನಿರ್ದೇಶಕ ಎನ್.ಬಿ.ಚೌದರಿ, ಎಂಇಎಸ್‌ಎಸ್‌ಒ ನಿರ್ದೇಶಕ ಡಾ.ಎನ್.ಕೆ.ಭಾಟಿಯ, ಸಿಎಸ್‌ಆರ್‌ಟಿಐ ನಿರ್ದೇಶಕ ಡಾ.ಗಾಂಧಿ ದಾಸ್ ಇದ್ದರು.

ಇದನ್ನೂ ಓದಿ: 3 ವರ್ಷದ ಬಳಿಕ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ - More rainfall in the state

ETV Bharat Logo

Copyright © 2025 Ushodaya Enterprises Pvt. Ltd., All Rights Reserved.